ಉತ್ತರಪ್ರದೇಶ ರಸ್ತೆ ಅಪಘಾತ | 10 ಮಂದಿ ಸ್ಥಳದಲ್ಲೇ ಸಾವು; ಪ್ರಧಾನಿ ಮೋದಿ ಸಂತಾಪ

modi

ಲಕ್ನೋ: ಉತ್ತರಪ್ರದೇಶದ ಮಿರ್ಜಾಪುರದ ಕಟ್ಕಾ ಗಡಿಯ ಬಳಿ ಇಂದು ಸಂಭವಿಸಿದ ರಸ್ತೆ ಅಫಘಾತದಲ್ಲಿ ಮೃತರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ವಹಿವಾಟು ವಿಸ್ತರಣೆಗೆ ಸನ್ಮಿನಾ, ಲೀಪ್‌ಫೈವ್‌ ಟೆಕ್ನಾಲಜಿ ಆಸಕ್ತಿ: ಸಚಿವ ಎಂ.ಬಿ.ಪಾಟೀಲ

ಇದೊಂದು ನೋವಿನ ಘಟನೆ ಎಂದು ಕರೆದಿರುವ ಪ್ರಧಾನಿ ನರೇಂದ್ರ ಮೋದಿ, ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಇದರೊಂದಿಗೆ ಎಲ್ಲ ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಸ್ಥಳೀಯ ಆಡಳಿತ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ರೀತಿಯಲ್ಲಿ ಸಹಾಯ ಮಾಡುತ್ತಿದೆ.

ಉತ್ತರಪ್ರದೇಶ ರಸ್ತೆ ಅಪಘಾತ | 10 ಮಂದಿ ಸ್ಥಳದಲ್ಲೇ ಸಾವು; ಪ್ರಧಾನಿ ಮೋದಿ ಸಂತಾಪ

ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಉತ್ತರಪ್ರದೇಶದ ಮಿರ್ಜಾಪುರದಲ್ಲಿ ಸಂಭವಿಸಿದ ರಸ್ತೆ ಅಪಘಾತವು ಅತ್ಯಂತ ನೋವಿನಿಂದ ಕೂಡಿದೆ. ಅದರಲ್ಲಿ ಪ್ರಾಣ ಕಳೆದುಕೊಂಡವರ ದುಃಖಿತ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳು, ದೇವರು ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪೋಸ್ಟ್ ಮಾಡಿದ್ದಾರೆ.

ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪಟೇಲ್ ಹಾರೈಸಿದರು.

ಟ್ರ್ಯಾಕ್ಟರ್-ಟ್ರಕ್​ ನಡುವೆ ಭೀಕರ ರಸ್ತೆ ಅಪಘಾತದಲ್ಲಿ 10 ಕಾರ್ಮಿಕರ ಸಾವು

ಮಿರ್ಜಾಪುರದ ಕಟ್ಕಾ ಗಡಿಯ ಬಳಿ ಟ್ರ್ಯಾಕ್ಟರ್-ಟ್ರಕ್​ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಸಂಭವಿಸಿದ ಪರಿಣಾಮ ಟ್ರ್ಯಾಕ್ಟರ್‌ನಲ್ಲಿದ್ದ ಹತ್ತು ಕಾರ್ಮಿಕರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಉತ್ತರ ಪ್ರದೇಶದ ಭದೋಹಿಯಲ್ಲಿ ಇಂದು ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಯಿಂದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಈ ಅಪಘಾತದಲ್ಲಿ 10ಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿದ್ದು, ಮೂವರು ಕಾರ್ಮಿಕರು ಗಂಭೀರ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉತ್ತರಪ್ರದೇಶ ರಸ್ತೆ ಅಪಘಾತ | 10 ಮಂದಿ ಸ್ಥಳದಲ್ಲೇ ಸಾವು; ಪ್ರಧಾನಿ ಮೋದಿ ಸಂತಾಪ

ಭದೋಹಿಯ ಮಹರಾಜಗಂಜ್ ಮತ್ತು ಮಿರ್ಜಾಪುರದ ಕಟ್ಕಾ ಗಡಿಯ ಬಳಿ ಈ ಅಪಘಾತ ಸಂಭವಿಸಿದ್ದು, ಮೂಲಗಳ ಪ್ರಕಾರ 13 ಕಾರ್ಮಿಕರಿದ್ದ ದೈನಂದಿನ ಕೂಲಿ ಕೆಲಸ ಮುಗಿಸಿ ಮನೆಗೆ ಮನೆಗೆ ಮರಳುತ್ತಿದ್ದರು. ಅಷ್ಟರಲ್ಲಿ ಹಿಂದಿನಿಂದ ಟ್ರಕ್ ವೇಗವಾಗಿ ಬಂದಿದೆ. ನಂತರ ನಿಯಂತ್ರಣ ತಪ್ಪಿದ ಲಾರಿ ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್​ ಪಲ್ಟಿಯಾಗಿದೆ. ಸ್ಥಳದಲ್ಲೇ 13 ಮಂದಿಯಲ್ಲಿ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಮಿರ್ಜಾಪುರದ ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನ್ ಕುಮಾರ್ ಸಿಂಗ್ ಹೇಳಿದ್ದಾರೆ.

ಈ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಪೊಲೀಸರು ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಪ್ರಥಮ ಚಿಕಿತ್ಸೆ ನೀಡಿದ ಬಳಿಕ ವಾರಣಾಸಿಯ ಟ್ರಾಮಾ ಸೆಂಟರ್‌ಗೆ ದಾಖಲಿಸಲಾಗಿದೆ. ಮೂವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಸದ್ಯ ಅವರು ವೈದ್ಯರ ನಿಗಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪೊಲೀಸರು ಮೃತರ ದೇಹಗಳನ್ನು ತಮ್ಮ ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ನಂತರ ಮೃತರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ. ಈ ಘಟನೆ ನಂತರ ಇಡೀ ಪ್ರದೇಶದಲ್ಲಿ ಸ್ಮಶಾನ ಮೌನ ಆವರಿಸಿದೆ. ಪೊಲೀಸರು ಮೃತರ ದೇಹಗಳನ್ನು ತಮ್ಮ ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ನಂತರ ಮೃತರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ. ಈ ಸಂಬಂಧ ಪ್ರಕರಣ ದಾಜಲಾಗಿದೆ. ಈ ಘಟನೆ ನಂತರ ಇಡೀ ಪ್ರದೇಶದಲ್ಲಿ ಸ್ಮಶಾನ ಮೌನ ಆವರಿಸಿದೆ.

Road Accident: ಟ್ರಕ್-ಟ್ರ್ಯಾಕ್ಟರ್ ಮಧ್ಯೆ ಭೀಕರ ಅಪಘಾತ! 10 ಕಾರ್ಮಿಕರು ಸ್ಥಳದಲ್ಲೇ ಸಾವು!

Share This Article

ಬೇಸಿಗೆಯಲ್ಲಿ ಬೇಗನೆ ತೂಕ ಇಳಿಸಿಕೊಳ್ಳುವುದು ಹೇಗೆ ಗೊತ್ತಾ?  ಈ ಸುಲಭ ಸಲಹೆಗಳನ್ನು ಅನುಸರಿಸಿ…summer

summer: ತೂಕ ಇಳಿಸಿಕೊಳ್ಳುವುದು ಸುಲಭದ ಕೆಲಸವಲ್ಲ. ಕೆಲವರು ಇದಕ್ಕಾಗಿ ಆಹಾರ ಕ್ರಮದ ಜೊತೆಗೆ ವ್ಯಾಯಾಮ ಮಾಡುತ್ತಾರೆ.…

ಮದ್ವೆಯಾದ ನಂತ್ರ ಮಹಿಳೆಯರು… ಇದುವರೆಗೂ ನಾವಂದುಕೊಂಡಿದ್ದು ತಪ್ಪು, ಹೊಸ ಅಧ್ಯಯನದಲ್ಲಿ ಅಚ್ಚರಿ ಸಂಗತಿ! Marriage

Marriage : ಸಾಮಾನ್ಯವಾಗಿ ಮದುವೆಯ ನಂತರ ಮಹಿಳೆಯರ ತೂಕ ಹೆಚ್ಚಾಗುತ್ತದೆ ಎಂದು ಹೇಳಲಾಗುತ್ತದೆ. ಅವರು ಎಷ್ಟೇ…

ನಿಮ್ಮ ಮಕ್ಕಳನ್ನು ಸ್ಮಾರ್ಟ್‌ಫೋನ್‌ಗಳಿಂದ ದೂರವಿಡುವುದು ಹೇಗೆ? Child Care Tips

Child Care Tips: ನೀವು ಚಿಕ್ಕ ವಯಸ್ಸಿನಲ್ಲಿ ಮಕ್ಕಳಿಗೆ ಮೊಬೈಲ್ ಫೋನ್ ಕೊಡಬಾರದು. ನಿಮ್ಮ ಮಗು ನಿಮ್ಮೊಂದಿಗೆ…