ಉಗ್ರರ ಮಟ್ಟಹಾಕಲು ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಕಾರ್ಯಾಚರಣೆ ಸ್ವಾತಂತ್ರ್ಯ ನೀಡಿದ ಪ್ರಧಾನಿ ಮೋದಿ | Armed Forces

dk - 2025-04-29T201512.951
Published on

Armed Forces : ಪಹಲ್ಗಾಮ್​ ಭಯೋತ್ಪಾದಕ ದಾಳಿ ಬಳಿಕ ಪಾಕಿಸ್ತಾನ ವಿರುದ್ಧ ಭಾರತ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಇದಾದ ಬಳಿಕ ಏ.29ರಂದು(ಇಂದು) ನಡೆದ ನಡೆದ ಮಹತ್ವದ ಸಭೆಯಲ್ಲಿ ಉಗ್ರರ ಮಟ್ಟಹಾಕಲು ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಕಾರ್ಯಾಚರಣೆ ಸ್ವಾತಂತ್ರ್ಯವನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.

ಇನ್ನು ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ರಕ್ಷಣಾ ಮುಖ್ಯಸ್ಥರೊಂದಿಗೆ ಪ್ರಧಾನಿ ಮೋದಿ ಸಭೆ ನಡೆಸಿದ್ದಾರೆ.

ಏಜೆನ್ಸಿ ಎಚ್ಚರಿಕೆಗಳ ಪ್ರಕಾರ, ಸಭೆಯಲ್ಲಿ ಭಾರತದ ಮುಂಬರುವ ದಾಳಿಯ ವಿಧಾನ, ಗುರಿಗಳು ಮತ್ತು ಸಮಯವನ್ನು ನಿರ್ಧರಿಸಲು ಭಾರತೀಯ ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಕಾರ್ಯಾಚರಣೆ ಸ್ವಾತಂತ್ರ್ಯವಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

"ಭಯೋತ್ಪಾದನೆಗೆ ಹೀನಾಯ ಹೊಡೆತ ನೀಡುವುದು ನಮ್ಮ ರಾಷ್ಟ್ರೀಯ ಸಂಕಲ್ಪ" ಎಂದು ಈ ಬೆಳವಣಿಗೆಯ ಬಗ್ಗೆ ತಿಳಿದಿರುವ ಅಧಿಕಾರಿಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.(ಏಜೆನ್ಸಿಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net