More

    ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ಪ್ರಧಾನಿ ಮೋದಿಯವರ ಕೊಡುಗೆ ಏನೂ ಇಲ್ಲ: ಬಿಜೆಪಿ ಮುಖಂಡ ಸುಬ್ರಹ್ಮಣಿಯನ್​ ಸ್ವಾಮಿ

    ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ದಿನ ಹತ್ತಿರ ಬರುತ್ತಿದ್ದಂತೆ ಅದರ ಬಗ್ಗೆ ಚರ್ಚೆಯೂ ಹೆಚ್ಚಾಗಿದೆ. ಪ್ರತಿಪಕ್ಷಗಳ ಹಲವು ನಾಯಕರು ತಮ್ಮದೇ ಧಾಟಿಯಲ್ಲಿ ಮಾತನಾಡುತ್ತಿದ್ದಾರೆ.

    ಈ ಮಧ್ಯೆ ಬಿಜೆಪಿ ರಾಜ್ಯಸಭಾ ಸಂಸದ ಸುಬ್ರಹ್ಮಣಿಯನ್​ ಸ್ವಾಮಿ ಅವರೂ ರಾಮಮಂದಿರದ ಬಗ್ಗೆ ಹೇಳಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ನೇರವಾಗಿ ಅಥವಾ ಪರೋಕ್ಷವಾಗಿ ಒಂದಿಲ್ಲೊಂದು ಹೇಳಿಕೆ ನೀಡುವ ಸುಬ್ರಹ್ಮಣಿಯನ್​ ಸ್ವಾಮಿ ಇದೀಗ ಮತ್ತೆ ಅದೇ ರೀತಿಯ ಮಾತುಗಳನ್ನಾಡಿದ್ದಾರೆ.

    ಟಿವಿ ಚಾನೆಲ್​ವೊಂದರಲ್ಲಿ ಮಾತನಾಡಿದ ಬಿಜೆಪಿ ನಾಯಕ ಸುಬ್ರಹ್ಮಣಿಯನ್​ ಸ್ವಾಮಿ, ಈಗ ನಿರ್ಮಾಣವಾಗುತ್ತಿರುವ ರಾಮನ ದೇವಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಕೊಡುಗೆ ಏನೂ ಇಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಮಮಂದಿರ ಭೂಮಿ ಪೂಜೆಗಾಗಿ 151 ಪವಿತ್ರ ನದಿಗಳ ನೀರು ಸಂಗ್ರಹಿಸಿ, ಅಯೋಧ್ಯೆ ತಲುಪಿದ ಸಹೋದರರು

    ರಾಮ ಮಂದಿರ ನಿರ್ಮಾಣದ ಬಗ್ಗೆ ನಾವೆಲ್ಲ ಅನೇಕ ಚರ್ಚೆ, ವಾದಗಳನ್ನು ಮಾಡಿದ್ದೇವೆ. ಆದರೆ ಸುಪ್ರೀಂಕೋರ್ಟ್​ ತೀರ್ಪಿನಲ್ಲಿ ಉಲ್ಲೇಖವಾಗಿರುವ, ರಾಮಮಂದಿರ ನಿರ್ಮಾಣಕ್ಕೆ ಅನುಕೂಲಕರವಾಗಿರುವ ಯಾವುದೇ ಅಂಶವನ್ನೂ, ಕೆಲಸವನ್ನೂ ಕೇಂದ್ರ ಸರ್ಕಾರ ಮಾಡಲಿಲ್ಲ ಎಂದು ಸ್ವಾಮಿ ಹೇಳಿದ್ದಾರೆ.

    ಮಾಜಿ ಪ್ರಧಾನಿಗಳು ಮತ್ತು ಕಾಂಗ್ರೆಸ್​ ನಾಯಕರಾದ ರಾಜೀವ್​ ಗಾಂಧಿ, ಪಿ.ವಿ.ನರಸಿಂಹ ರಾವ್​ ಹಾಗೂ ವಿಶ್ವ ಹಿಂದು ಪರಿಷತ್​ನ ಅಶೋಕ್​ ಸಿಂಘಾಲ್​ ಅವರು ರಾಮಮಂದಿರ ನಿರ್ಮಾಣದ ಕಾರ್ಯಸೂಚಿಯನ್ನು ಮುಂದಿಟ್ಟ ಪ್ರಮುಖರು ಎಂದು ಸುಬ್ರಹ್ಮಣಿಯನ್​ ಸ್ವಾಮಿ ಹೇಳಿದ್ದಾರೆ. (ಏಜೆನ್ಸೀಸ್​)

    ಅಯೋಧ್ಯೆ ರಾಮಮಂದಿರ ನಿರ್ಮಾಣ ಸ್ಥಳ ಭೇಟಿಯನ್ನು ರದ್ದುಗೊಳಿಸಿದ ಸಿಎಂ ಯೋಗಿ ಆದಿತ್ಯನಾಥ್​…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts