ನವದೆಹಲಿ: ( PM Modi ) ಪ್ರಧಾನಿ ನರೇಂದ್ರ ಮೋದಿಗೆ ಸೈಪ್ರಸ್ ದೇಶದ ಅತ್ಯುನ್ನತ ಗೌರವ ದೊರೆತಿದೆ. ಸೈಪ್ರಸ್ ಅಧ್ಯಕ್ಷ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಆರ್ಡರ್ ಆಫ್ ಮಕರಿಯೋಸ್ III ಸೈಪ್ರಸ್ ನೀಡುವ ನೈಟ್‌ಹುಡ್ ಗೌರವವಾಗಿದ್ದು, ಇದಕ್ಕೆ ಸೈಪ್ರಸ್‌ನ ಮೊದಲ ಅಧ್ಯಕ್ಷ ಆರ್ಚ್‌ಬಿಷಪ್ ಮಕರಿಯೋಸ್ III ಅವರ ಹೆಸರಿಡಲಾಗಿದೆ.ಇದು ಗ್ರ‍್ಯಾಂಡ್ ಕಾಲರ್ ಪ್ರಶಸ್ತಿಯ ನಂತರ ಸೈಪ್ರಸ್‌ನ ಎರಡನೇ ಅತ್ಯುನ್ನತ ಶ್ರೇಣಿಯ ಪ್ರಶಸ್ತಿಯಾಗಿದ್ದು, ರಾಷ್ಟ್ರಾಧ್ಯಕ್ಷರು, ರಾಜತಾಂತ್ರಿಕರು, ಅಥವಾ ಸೈಪ್ರಸ್‌ಗೆ ಅಸಾಧಾರಣ ಕೊಡುಗೆ ನೀಡಿದ ವ್ಯಕ್ತಿಗಳಿಗೆ ನೀಡಲಾಗುತ್ತದೆ.
I extend my heartfelt gratitude to the Government and people of Cyprus for conferring upon me ‘The Grand Cross of the Order of Makarios III.’
This isn’t my honour. It is an honour for 140 crore Indians. I dedicate this award to the everlasting friendship between India and… pic.twitter.com/Q9p7LQGNfq
— Narendra Modi (@narendramodi) June 16, 2025
ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಸೈಪ್ರಸ್ ಜನರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇನೆ. ಇದು ನರೇಂದ್ರ ಮೋದಿಗೆ ಮಾತ್ರವಲ್ಲ, 140 ಕೋಟಿ ಭಾರತೀಯರಿಗೂ ಸಂದ ಗೌರವವಿದು. ಇದು ಅವರ ಸಾಮರ್ಥ್ಯ ಮತ್ತು ಆಕಾಂಕ್ಷೆಗಳಿಗೆ ಸಂದ ಗೌರವ. ಇದು ನಮ್ಮ ಸಂಸ್ಕೃತಿ, ಸಹೋದರತ್ವ ಮತ್ತು ವಸುಧೈವ ಕುಟುಂಬಕಂ ಎಂಬ ಸಿದ್ಧಾಂತಕ್ಕೆ ಸಂದ ಗೌರವ ಎಂದರು.
2025ರ ಮಾರ್ಚ್ ಆರಂಭದಲ್ಲಿ, ಮಾರಿಷಸ್ ಪ್ರಧಾನಿ ನವೀನಚಂದ್ರ ರಾಮಗೂಲಂ ಅವರು ಪ್ರಧಾನಿ ಮೋದಿಯವರಿಗೆ ತಮ್ಮ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ದಿ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಅಂಡ್ ಕೀ ಆಫ್ ದಿ ಇಂಡಿಯನ್ ಓಶಿಯನ್ ‘ ನೀಡಿ ಗೌರವಿಸಿದ್ದರು.
ಭಾರತ ಮತ್ತು ಮಾರಿಷಸ್ ನಡುವಿನ ಸಂಬಂಧಗಳನ್ನು ಬಲಪಡಿಸಲು ನೀಡಿದ ಕೊಡುಗೆಗಾಗಿ ಪ್ರಧಾನಿ ಮೋದಿಗೆ ಈ ಗೌರವವನ್ನು ನೀಡಲಾಯಿತು. ಈ ಗೌರವವನ್ನು ಪಡೆದ ಮೊದಲ ಭಾರತೀಯ ಮೋದಿ. ಇದು ಪ್ರಧಾನಿ ಮೋದಿಯವರಿಗೆ ಮತ್ತೊಂದು ದೇಶ ನೀಡಿದ 21 ನೇ ಅಂತಾರಾಷ್ಟ್ರೀಯ ಪ್ರಶಸ್ತಿಯಾಗಿದೆ.
ಏಪ್ರಿಲ್‌ನಲ್ಲಿ, ಶ್ರೀಲಂಕಾ ಸರ್ಕಾರವು ಪ್ರಧಾನಿ ಮೋದಿಯವರಿಗೆ ಶ್ರೀಲಂಕಾ ಮಿತ್ರ ವಿಭೂಷಣ ಸಮ್ಮಾನ್ ನೀಡಿ ಗೌರವಿಸಿತು. ಶ್ರೀಲಂಕಾ ಸರ್ಕಾರವು ಶ್ರೀಲಂಕಾದೊಂದಿಗೆ ಉತ್ತಮ ಸಂಬಂಧ ಹೊಂದಿರುವ ದೇಶಗಳ ರಾಷ್ಟ್ರಗಳ ಮುಖ್ಯಸ್ಥರಿಗೆ ಈ ಗೌರವವನ್ನು ನೀಡುತ್ತದೆ.