More

    ಹೊಸ ಸಂಸತ್​ ಭವನ ನಿರ್ಮಾಣಕ್ಕಾಗಿ ಹಗಲಿರುಳು ದುಡಿದ ಕಾರ್ಮಿಕರನ್ನು ಸನ್ಮಾನಿಸಿದ ಪ್ರಧಾನಿ ಮೋದಿ

    ನವದೆಹಲಿ: ಹೊಸ ಸಂಸತ್​ ಭವನ ನಿರ್ಮಾಣಕ್ಕಾಗಿ ಹಗಲಿರುಳು ದುಡಿದ ಕಾರ್ಮಿಕರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸನ್ಮಾನಿಸಿ ಗೌರವಿಸಿದರು.

    ಕಾರ್ಮಿಕರಿಗೆ ಸಾಂಪ್ರದಾಯಿಕವಾಗಿ ಶಾಲು ಹೊದಿಸಿ, ಸ್ಮರಣಿಕೆಗಳನ್ನು ನೀಡಿ ಪ್ರಧಾನಿ ಮೋದಿ ಗೌರವಿಸಿದರು.


    ಹೊಸ ಸಂಸತ್​ ಭವನ ಉದ್ಘಟನಾ ಕಾರ್ಯಕ್ರಮ ಬೆಳಗ್ಗೆ 7.30 ರಿಂದ ಆರಂಭವಾಗಿದೆ. ಐತಿಹಾಸಿ ಸೆಂಗೋಲ್​ ಅನ್ನು ಪ್ರಧಾನಿ ಮೋದಿ ಅವರು ಲೋಕಸಭಾ ಸ್ಪೀಕರ್​ ಸ್ಥಾನದ ಸಮೀಪದಲ್ಲಿ ಪ್ರತಿಷ್ಠಾಪಿಸಿದ್ದಾರೆ.

    ಕಾರ್ಯಕ್ರಮಕ್ಕೆ ಸುಮಾರು 60 ಧಾರ್ಮಿಕ ಮುಖ್ಯಸ್ಥರನ್ನು ಕರೆಸಲಾಗಿದ್ದು, ಅವರಲ್ಲಿ ಹಲವರು ತಮಿಳುನಾಡಿನವರಾಗಿದ್ದಾರೆ. ಧಾರ್ವಿುಕ ಕಾರ್ಯಕ್ರಮದಲ್ಲಿ ಶೃಂಗೇರಿ ಶ್ರೀ ಶಾರದಾ ಪೀಠದ ಋತ್ವಿಜರಾದ ಟಿ.ವಿ. ಸೀತಾರಾಮ ಶರ್ಮ, ಶ್ರೀರಾಮ ಶರ್ಮ, ಲಕ್ಷ್ಮೀಶ ತಂತ್ರಿ ಹಾಗೂ ದೆಹಲಿ ಶಾಖಾ ಮಠದ ನಾಗರಾಜ ಅಡಿಗ, ಋಷ್ಯಶೃಂಗ ಭಟ್ ಭಾಗಿಯಾಗಿದ್ದಾರೆ.

    ನೂತನ ಕಟ್ಟಡದ ವೈಶಿಷ್ಟ್ಯಗಳು

    * 2020 ಡಿಸೆಂಬರ್ 10ಕ್ಕೆ ಪ್ರಧಾನಿ ನೂತನ ಸಂಸತ್ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ.
    * 13 ಎಕರೆಯಲ್ಲಿ ಅಂದಾಜು 1200 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ.
    * ಲೋಕಸಭೆ ಛಾವಣಿ ನವಿಲಿನಾಕಾರದಲ್ಲಿ, ರಾಜ್ಯಸಭೆ ಕಮಲದಾಕಾರದಲ್ಲಿ ನಿರ್ಮಾಣ
    * ನೂತನ ಕಟ್ಟಡ 150 ವರ್ಷ ಬಾಳಿಕೆ ನಿರೀಕ್ಷೆ
    * ಹೊಸ ಲೋಕಸಭೆಯಲ್ಲಿ 888 ಜನ, ರಾಜ್ಯಸಭೆಯಲ್ಲಿ 384 ಮಂದಿ ಕುಳಿತುಕೊಳ್ಳಲು ವ್ಯವಸ್ಥೆ.
    * ಹಳೆಯ ಭವನದಲ್ಲಿ ಸೆಂಟ್ರಲ್ ಹಾಲ್ ಇದ್ದರೆ ನೂತನ ಕಟ್ಟಡದಲ್ಲಿ ಸೆಂಟ್ರಲ್ ಹಾಲ್ ಇಲ್ಲ. ಜಂಟಿ ಅಧಿವೇಶನಕ್ಕಾಗಿ ಲೋಕಸಭೆಯಲ್ಲೇ 1,272 ಮಂದಿ ಕುಳಿತುಕೊಳ್ಳಲು ವ್ಯವಸ್ಥೆ.
    * ನೂತನ ಭವನವು 4 ಅಂತಸ್ತಿನ ಕಟ್ಟಡವಾಗಿದ್ದು, 64,500 ಚದರ ಮೀಟರ್ ವಿಸ್ತೀರ್ಣ ಹೊಂದಿದೆ.
    * ಜ್ಞಾನ ದ್ವಾರ, ಶಕ್ತಿ ದ್ವಾರ ಹಾಗೂ ಕರ್ಮ ದ್ವಾರ ಎಂಬ ಮೂರು ಪ್ರಮುಖ ದ್ವಾರಗಳ ನಿರ್ವಣ. ಸಂಸದರು, ವಿಐಪಿ ಸಂದರ್ಶಕರು ಹಾಗೂ ಅಧಿಕಾರಿಗಳಿಗಾಗಿ ಪ್ರತ್ಯೇಕ ಪ್ರವೇಶ ದ್ವಾರ.
    * ಭವನದ ಮೇಲೆ ರಾಷ್ಟ್ರೀಯ ಲಾಂಛನದ ಪ್ರತಿರೂಪ ಇರಿಸಲಾಗಿದೆ. 9,500 ಕೆ.ಜಿ ಕಂಚಿನ ಪ್ರತಿಮೆ 6.5 ಮೀಟರ್ ಎತ್ತರವಿದೆ.

    ವಿಪಕ್ಷಗಳ ಬಹಿಷ್ಕಾರ

    ಸಮಾರಂಭವನ್ನು ಕಾಂಗ್ರೆಸ್, ಶಿವಸೇನೆ (ಯುಬಿಟಿ), ಎಎಪಿ, ತೃಣಮೂಲ ಕಾಂಗ್ರೆಸ್ (ಟಿಎಂಸಿ), ಮತ್ತು ಜನತಾ ದಳ (ಯುನೈಟೆಡ್) ಸೇರಿದಂತೆ 20 ಕ್ಕೂ ಹೆಚ್ಚು ವಿರೋಧ ಪಕ್ಷಗಳು ಬಹಿಷ್ಕರಿಸಿವೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಹ್ವಾನ ನೀಡದೆ ದೇಶದ ಪ್ರಥಮ ಪ್ರಜೆಗೆ ಅವಮಾನಿಸಿದ್ದಾರೆ ಎಂದು ವಿಪಕ್ಷಗಳು ಆರೋಪ ಮಾಡಿವೆ. (ಏಜೆನ್ಸೀಸ್​)

    ಪ್ರಧಾನಿ ಮೋದಿ ವಿಶೇಷ ಮನವಿ ಬಳಿಕ ಹೊಸ ಸಂಸತ್​ ಭವನದ ವಿಡಿಯೋಗೆ ಶಾರುಖ್​, ಅಕ್ಷಯ್​ ಧ್ವನಿ

    ನೂತನ ಸಂಸತ್​ ಭವನ ಉದ್ಘಾಟನೆ: ರಾಜದಂಡ ಸೆಂಗೋಲ್​ ಪ್ರತಿಷ್ಠಾಪಿಸಿದ ಪ್ರಧಾನಿ ಮೋದಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts