More

    ಶ್ರೀಶೈಲ ಜಗದ್ಗುರುಗಳ ದ್ವಾದಶ ಪೀಠಾರೋಹಣ; ಪ್ರಧಾನಿ ನರೇಂದ್ರ ಮೋದಿಯವರಿಗೆ ಆಹ್ವಾನ

    ನವದೆಹಲಿ: ದೇಶದ ಪ್ರಸಿದ್ಧ ದ್ವಾದಶ ಜ್ಯೋತಿರ್ಲಿಂಗಗಳಲ್ಲಿ ಒಂದಾದ ಶ್ರೀಶೈಲ ಮಲ್ಲಿಕಾರ್ಜುನ ಕ್ಷೇತ್ರದಲ್ಲಿರುವ ಸನಾತನ ವೀರಶೈವ ಪಂಚಪೀಠಗಳಲ್ಲಿ ಒಂದಾಗಿರುವ ಶ್ರೀಶೈಲ ಸೂರ್ಯಸಿಂಹಾಸನ ಮಹಾಪೀಠದ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಭಗವತ್ಪಾದರ ಪೀಠಾರೋಹಣದ ದ್ವಾದಶ ವರ್ಧಂತಿ ಮಹೋತ್ಸವ ಮತ್ತು ಜನ್ಮ ಸುವರ್ಣಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ ಆಗಮಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಆಹ್ವಾನ ನೀಡಲಾಗಿದೆ.

    ನವದೆಹಲಿಯ ಪ್ರಧಾನಿ ಗೃಹಕಚೇರಿಯಲ್ಲಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಶ್ರೀಶೈಲ ಜಗದ್ಗುರುಗಳು 2023ರ ಜ. 10ರಿಂದ 15ರವರೆಗೆ ನಡೆಯುವ 5 ದಿನಗಳ ಮಹಾಸಮ್ಮೇಳನದಲ್ಲಿ ಒಂದು ದಿನದ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದು, ಸಮಾರಂಭದಲ್ಲಿ ಪಾಲ್ಗೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.

    ಇದೇ ವೇಳೆ ನರೇಂದ್ರ ಮೋದಿ ಅವರೊಂದಿಗೆ ಔಪಚಾರಿಕವಾಗಿ ಮಾತನಾಡಿದ ಶ್ರೀಶೈಲ ಜಗದ್ಗುರುಗಳು, ದೇಶದ ಜ್ಯೋತಿರ್ಲಿಂಗ ಕ್ಷೇತ್ರಗಳು ಒಂದೊಂದಾಗಿ ಅಭಿವೃದ್ಧಿ ಹೊಂದುತ್ತಿರುವುದು ಸಂತಸದ ವಿಷಯವಾಗಿದ್ದು, ತಾವು ಶ್ರೀಶೈಲಕ್ಕೆ ಆಗಮಿಸುವುದರಿಂದ ಶ್ರೀಶೈಲ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ನಾಂದಿಯಾಗಲಿದೆ. ಇದರಿಂದ ಭಾರತವನ್ನು ವಿಶ್ವಗುರುವಾಗಿಸುವ ತಮ್ಮ ಸಂಕಲ್ಪಕ್ಕೆ ಇನ್ನಷ್ಟು ಶಕ್ತಿ ಬರಲಿದೆ ಎಂದರು. ಆಗ ಪ್ರತಿಕ್ರಿಯಿಸಿದ ಪ್ರಧಾನಿ ಸಂಕಲ್ಪ ಎಲ್ಲ ಸಂತ ಸಮೂಹದ್ದು, ಅದನ್ನು ಸಾಕಾರಗೊಳಿಸುವ ಗುತ್ತಿಗೆ ಕೆಲಸವಷ್ಟೇ ತಮ್ಮದು ಎಂದರು.

    ಶ್ರೀಶೈಲ ಜಗದ್ಗುರುಗಳ ದ್ವಾದಶ ಪೀಠಾರೋಹಣ; ಪ್ರಧಾನಿ ನರೇಂದ್ರ ಮೋದಿಯವರಿಗೆ ಆಹ್ವಾನ

    ಇದೇ ಅ.29ರಿಂದ 33 ದಿನಗಳ ಕಾಲ ಬೆಳಗಾವಿ ಜಿಲ್ಲೆಯ ಸುಕ್ಷೇತ್ರ ಯಡೂರದಿಂದ ಶ್ರೀಶೈಲ ಮಹಾಕ್ಷೇತ್ರದ ವರೆಗೆ ಶ್ರೀಶೈಲ ಜಗದ್ಗುರುಗಳು 560 ಕಿ.ಮೀ. ಪಾದಯಾತ್ರೆ ನಡೆಸಲಿದ್ದು, ನಂತರ 42 ದಿನಗಳ ಕಾಲ ಶ್ರೀಶೈಲದಲ್ಲಿ ಅನುಷ್ಠಾನ ನಡೆಸಲಿದ್ದಾರೆ. ಅಂತಿಮವಾಗಿ ಜ.10 ರಿಂದ 15 ರವರೆಗೆ 5 ದಿನ ಸಮಾರೋಪ ಕಾರ್ಯಕ್ರಮ ನಡೆಯಲಿವೆ. ಶತಮಾನದ ಹಿರಿಮೆ ಹೊಂದಿರುವ ಅಖಿಲ ಭಾರತ ವೀರಶೈವ ಮಹಾಸಭೆಯ ಅಧಿವೇಶನವು ಇದೇ ಮೊದಲ ಬಾರಿಗೆ ಶ್ರೀಶೈಲದಲ್ಲಿ ನಡೆಯಲಿದೆ. ಜೊತೆಗೆ ರಾಷ್ಟ್ರೀಯ ವೇದಾಂತ ಸಮ್ಮೇಳನ, ರಾಷ್ಟ್ರೀಯ ವಚನ ಸಮ್ಮೇಳನ, ವೀರಶೈವ ಸಾಹಿತ್ಯ ಸಮ್ಮೇಳನ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡಯಲಿವೆ. ದೇಶದ ವಿವಿಧ ಪ್ರಾಂತ್ಯಗಳ ಲಕ್ಷಾಂತರ ಜನರು ಈ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

    ಈ ಸಂದರ್ಭದಲ್ಲಿ ಔಸಾದ ಡಾ. ಶಾಂತವೀರಲಿಂಗ ಶಿವಾಚಾರ್ಯರು ಹಾಗೂ ನೂಲದ ಶ್ರೀ ಗುರುಸಿದ್ಧೇಶ್ವರ ಶಿವಾಚಾರ್ಯರು ಮತ್ತು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಉಪಸ್ಥಿತರಿದ್ದರು.

    ಕಾಲಿಗೆ ಬಿದ್ದು ಕೇಳ್ತೀನಿ, ಇದೊಂದು ಸಲ ದಯವಿಟ್ಟು ಕ್ಷಮಿಸಿ!; ಅಪ್ಪು ಅಭಿಮಾನಿಗಳ ಅಬ್ಬರಕ್ಕೆ ತತ್ತರಿಸಿದ ಕಿಡಿಗೇಡಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts