More

    ಲೋಕಸಭಾ ಚುನಾವಣೆಗೆ ಬಿಜೆಪಿ ಸಜ್ಜು: ಬಿಹಾರದಿಂದ ಪ್ರಚಾರಕ್ಕೆ ಪ್ರಧಾನಿ ಮೋದಿ ಚಾಲನೆ

    ನವದೆಹಲಿ: ಲೋಕಸಭಾ ಚುನಾವಣೆ ಚುನಾವಣಾ ಹಣಾಹಣಿಗೆ ಬಿಜೆಪಿ ಸಜ್ಜಾಗಿದ್ದು, ಬಿಹಾರದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರದ ಕಹಳೆ ಮೊಳಗಿಸಲಿದ್ದಾರೆ. ಅವರು ಜ.13 ರಂದು ಆ ರಾಜ್ಯದ ಚಂಪಾರಣ್‌ನಲ್ಲಿ ಜನರನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆಯಿದೆ ಎಂದು ಮೂಲಗಳು ಭಾನುವಾರ ತಿಳಿಸಿವೆ. ಚಂಪಾರಣ್‌ನ ಬೆಟ್ಟಿಯಾ ನಗರದ ರಾಮನ್ ಮೈದಾನದಲ್ಲಿ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆಯಿದೆ.

    ಇದನ್ನೂ ಓದಿ: ಮ್ಯಾನ್ಮಾರ್​ನಿರಾಶ್ರಿತರಿಗೆ ಮುಂದುವರಿಯಲಿದೆ ನೆರವು : ಸಿಎಂ ಲಾಲ್ದುಹೋಮ
    ಪ್ರಧಾನಿ ಮೋದಿಯವರು ಇದೇ ಸಂದರ್ಭದಲ್ಲಿ ಬಿಹಾರಕ್ಕೆ ರಸ್ತೆ, ಸೇತುವೆಗಳು ಸೇರಿದಂತೆ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಚಾಲನೆ ನೀಡುವ ನಿರೀಕ್ಷೆಯಿದೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ.

    ಚುನಾವಣೆಯಲ್ಲಿ ಬಿಹಾರದ ಎಲ್ಲ 40 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಗುರಿ ಹೊಂದಿರುವ ಬಿಜೆಪಿ, ಮತದಾರರ ಒಲವಿಗೆ ಹಲವು ಯೋಜನೆಗಳನ್ನು ರೂಪಿಸಿದೆ. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಜನವರಿ ಮತ್ತು ಫೆಬ್ರವರಿಯಲ್ಲಿ ಹಲವು ರ‍್ಯಾಲಿಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

    ಜ.15 ರ ನಂತರ ಮೋದಿ ಅವರು ರಾಜ್ಯದ ಬೇಗುಸರೈ, ಬೆಟ್ಟಿಯಾ ಮತ್ತು ಔರಂಗಾಬಾದ್‌ನಲ್ಲಿ ಮೂರು ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅದೇ ರೀತಿ ಅಮಿತ್ ಶಾ ಸೀತಾಮರ್ಹಿ, ಮಾಧೇಪುರ ಮತ್ತು ನಳಂದಾದಲ್ಲಿ ಆಯೋಜಿಸುವ ಸಭೆಗಳಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಇನ್ನು, ಜೆ.ಪಿ ನಡ್ಡಾ ಅವರು ಸೀಮಾಂಚಲ್ ಮತ್ತು ಬಿಹಾರದ ಪೂರ್ವ ಭಾಗದಲ್ಲಿ ಸಮಾವೇಶಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

    ಬಿಹಾರದಲ್ಲಿ ಸದ್ಯ ಇಂಡಿಯಾ ಕೂಟದ ನಿತೀಶ್ ಕುಮಾರ್ ಸರ್ಕಾರ ಅಧಿಕಾರದಲ್ಲಿದ್ದಾರೆ. ಕಳೆದ ಚುನಾವಣೆಯಲ್ಲಿ ಬಿಹಾರದ 40 ಲೋಕಸಭಾ ಸ್ಥಾನಗಳ ಪೈಕಿ ಎನ್‌ಡಿಎ 39 ಸ್ಥಾನ ಗಳಿಸಿದ್ದರೆ, ಕಾಂಗ್ರೆಸ್ ಒಂದು ಸ್ಥಾನದಲ್ಲಿ ಮಾತ್ರ ಗೆದ್ದಿತ್ತು.

    ಭಾರತೀಯ ವಾಯುಪಡೆಯ ‘ಸಿ-130ಜೆ’ ವಿಮಾನ ಕಾರ್ಗಿಲ್ ಏರ್‌ಸ್ಟ್ರಿಪ್‌ನಲ್ಲಿ ಲ್ಯಾಂಡಿಂಗ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts