ಪ್ರಧಾನಿ ಮೋದಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ : ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ

Untitled-design-15-2
Published on

ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಬಹುಮತ ಪಡೆಯದ ಕಾರಣ ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

"ಪ್ರಧಾನಿ ಮೋದಿ ಬಹುಮತ ಸಾಧಿಸದಿರುವುದು ನನಗೆ ಖುಷಿ ತಂದಿದೆ. ಈ ಬಾರಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುತ್ತೇವೆ ಎಂದು ಹೇಳಿದ್ದರು. ಆದರೆ ಪ್ರಧಾನಿ ವಿಶ್ವಾಸ ಕಳೆದುಕೊಂಡಿದ್ದಾರೆ, ಅದಕ್ಕಾಗಿ ಅವರು ತಕ್ಷಣವೇ ರಾಜೀನಾಮೆ ನೀಡಬೇಕು. 200 ದಾಟುತ್ತದೆಯೋ ಇಲ್ಲವೋ ಗೊತ್ತಿಲ್ಲ, ಈಗ ಅವರು ಟಿಡಿಪಿ ಮತ್ತು ನಿತೀಶ್ ಕುಮಾರ್ ಅವರ ಇಚ್ಛೆಯಂತೆ ಕಾನೂನು ರೂಪಿಸಲು ಸಾಧ್ಯವಿಲ್ಲ ಎಂದರು.

ಇಷ್ಟು ದುಷ್ಕೃತ್ಯಗಳನ್ನು ಮಾಡಿದ ನಂತರವೂ, ಇಷ್ಟು ಹಣ ಖರ್ಚು ಮಾಡಿದ ನಂತರವೂ ಮೋದಿ ಜಿ ಮತ್ತು ಅಮಿತ್ ಶಾ ಅವರ ಈ ದುರಹಂಕಾರದಿಂದ ಮೋದಿ ಸೋತಿದ್ದಾರೆ. ಪ್ರತಿಪಕ್ಷಗಳ ಮೈತ್ರಿಕೂಟ ಗಿದ್ದಿದೆ. ಬಿಜೆಪಿ ಅಯೋಧ್ಯೆಯನ್ನು ಕಳೆದುಕೊಂಡಿದೆ ಎಂದು ಹೇಳಿದರು. (ಏಜೆನ್ಸೀಸ್​​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net