More

    ಬೇರೆ ಕಾರ್ಯಕ್ರಮ ಹಿನ್ನೆಲೆ ಕಾಡು ಮಲ್ಲೇಶ್ವರ ದೇಗುಲಕ್ಕೆ ಭೇಟಿ ನೀಡದೆ ತೆರಳಿದ ಪ್ರಧಾನಿ ಮೋದಿ

    ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಅವರ ಮೆಗಾ ಹಾಗೂ ಅದ್ಧೂರಿ ರೋಡ್​ ಶೋ ಅಂತ್ಯಗೊಂಡಿದೆ. ರೋಡ್​ ಶೋ ಮಧ್ಯೆ ಮೋದಿ ಅವರು ಮಲ್ಲೇಶ್ವರದಲ್ಲಿರುವ ಕಾಡು ಮಲ್ಲೇಶ್ವರ ದೇಗುಲಕ್ಕೆ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಯೋಜನೆ ಬದಲಾಗಿದ್ದು, ಕಾಡು ಮಲ್ಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡದೆ ಬೇರೆಡೆ ತೆರಳಿದರು.

    ಬೇರೆ ಕಾರ್ಯಕ್ರಮ ಇರುವುದರಿಂದ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿಲ್ಲ. ದೇವಸ್ಥಾನಕ್ಕೆ ಭೇಟಿ ನೀಡುವುದಾಗಿ ನಿನ್ನೆ ರಾತ್ರಿಯೇ ಬಿಜೆಪಿ ನಾಯಕರಿಗೆ ಪ್ರಧಾನಿ ಮೋದಿ ಸೂಚನೆ ನೀಡಿದ್ದರು ಎಂದು ವರದಿಯಾಗಿತ್ತು. ಹೀಗಾಗಿ ಕಾಡುಮಲ್ಲೇಶ್ವರ ದೇಗುಲದಲ್ಲಿ ಪ್ರಧಾನಿ ಮೋದಿ ದರ್ಶನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಅಲ್ಲದೆ, ಕಾಡುಮಲ್ಲೇಶ್ವರ ದೇವಸ್ಥಾನದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ದೇವಸ್ಥಾನಕ್ಕೆ ಸಾರ್ವಜನಿಕರಿಗೆ ನಿರ್ಬಂಧ ಸಹ ಹೇರಲಾಗಿತ್ತು. ಆದರೆ, ಬೇರೆ ಕಾರ್ಯಕ್ರಮ ಇರುವುದರಿಂದ ದೇಗುಲಕ್ಕೆ ಭೇಟಿ ನೀಡದೆ ಪ್ರಧಾನಿ ತೆರಳಿದರು.

    ಇದನ್ನೂ ಓದಿ: ಮೋದಿ ಮೆಗಾ ರೋಡ್​ ಶೋ: ಬಿಜೆಪಿ ಬಾವುಟಗಳನ್ನು ತೆರವುಗೊಳಿಸಿದ ಚುನಾವಣಾ ಅಧಿಕಾರಿಗಳು

    ಜೆಪಿ ನಗರದ ಸೋಮೇಶ್ವರ ಸಭಾಭವನದಿಂದ ಆರಂಭವಾದ ರೋಡ್​ ಶೋ ಸುಮಾರು 26 ಕಿ.ಮೀ ಸಾಗಿ ಮಲ್ಲೇಶ್ವರದ ಸಂಪಿಗೆರಸ್ತೆಯಲ್ಲಿ ಅಂತ್ಯಗೊಂಡಿದೆ.

    ರೋಡ್​ ಶೋ ಹಿನ್ನೆಲೆಯಲ್ಲಿ ನಗರದ ರಾಜಭವನ ರಸ್ತೆ, ರಮಣ ಮಹರ್ಷಿ ರಸ್ತೆ, ಮೇಖ್ರಿ ವೃತ್ತ, ಆರ್​ಬಿಐ ಲೇಔಟ್, ಜೆ.ಪಿ. ನಗರ, ರೋಸ್ ಗಾರ್ಡನ್, ಜೆ.ಪಿ. ನಗರ, ಸಿರ್ಸಿ ಸರ್ಕಲ್, ಜೆ.ಜೆ. ನಗರ, ಬಿನ್ನಿಮಿಲ್ ರಸ್ತೆ, ಶಾಲಿನಿ ಮೈದಾನ, ಸೌತ್ ಎಂಡ್ ರಸ್ತೆ, ಆಮುಗಂ ಸರ್ಕಲ್, ಬುಲ್ ಟೆಂಪಲ್ ರಸ್ತೆ, ರಾಮಕೃಷ್ಣಾಶ್ರಮ, ಉಮಾ ಟಾಕೀಸ್, ಟಿ.ಆರ್. ಮಿಲ್, ಚಾಮರಾಜಪೇಟೆ ಮುಖ್ಯ ರಸ್ತೆ, ಬಾಳೇಕಾಯಿ ಮಂಡಿ, ಕೆ.ಪಿ. ಅಗ್ರಹಾರ, ಮಾಗಡಿ ಮುಖ್ಯರಸ್ತೆ, ಚೋಳೂರುಪಾಳ್ಯ, ಎಂ.ಸಿ. ವೃತ್ತ, ಪಶ್ಚಿಮ ಕಾರ್ಡ್ ರಸ್ತೆ, ಎಂ.ಸಿ. ಲೇಔಟ್, ನಾಗರಬಾವಿ ಮುಖ್ಯರಸ್ತೆ, ಬಿಜಿಎಸ್ ಮೈದಾನ, ಹಾವನೂರು ಸರ್ಕಲ್, ಬಸವೇಶ್ವರನಗರ 8ನೇ ಮುಖ್ಯರಸ್ತೆ ಮತ್ತು 15ನೇ ಮುಖ್ಯರಸ್ತೆ, ಶಂಕರಮಠ, ಮೋದಿ ಆಸ್ಪತ್ರೆ ರಸ್ತೆ, ನವರಂಗ್ ವೃತ್ತ, ಎಂಕೆಕೆ ರಸ್ತೆ, ಮಲ್ಲೇಶ್ವರ ಸರ್ಕಲ್, ಸಂಪಿಗೆ ರಸ್ತೆ ಮತ್ತು ಸ್ಯಾಂಕಿ ರಸ್ತೆಯಲ್ಲಿ ಸಂಚಾರ ಬಂದ್​ ಮಾಡಲಾಗಿತ್ತು.

    ಮೋದಿ ರೋಡ್​ ಶೋನಿಂದ ಜನರಿಗೆ ತೊಂದರೆ ಹೊರತು ಬಿಜೆಪಿಗೆ ಲಾಭ ಇಲ್ಲ: ಮಾಜಿ ಸಿಎಂ ಎಚ್​ಡಿಕೆ ಟೀಕೆ

    ಕಾಂಗ್ರೆಸ್ ಪರ ಶಿವರಾಜ್ ಕುಮಾರ್ ಪ್ರಚಾರ, ಪ್ರತಾಪ್ ಸಿಂಹ ವ್ಯಂಗ್ಯ; ಸಿಎಂ ಬೊಮ್ಮಾಯಿ ಹೇಳಿದ್ದಿಷ್ಟು…

    LIVE| ಬೆಂಗಳೂರಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್​ ಶೋ: ನೇರಪ್ರಸಾರ ಇಲ್ಲಿದೆ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts