ಅಮರ್​ ಜವಾನ್​ ಜ್ಯೋತಿ ಸ್ಮಾರಕಕ್ಕೆ ಆಗಮಿಸಿ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

ಅಮರ್ ಜವಾನ್ ಜ್ಯೋತಿ
Published on

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಮರ್​ ಜವಾನ್​ ಜ್ಯೋತಿಗೆ ಆಗಮಿಸಿ ವೀರ ಮರಣವನ್ನಪ್ಪಿದ ಸೈನಿಕರಿಗೆ ಗೌರವ ಸಲ್ಲಿಸಿದರು. ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಅವರು ಅಮರ್ ಜವಾನ್ ಜ್ಯೋತಿ ಬಳಿ ಪ್ರಧಾನಿಯನ್ನು ಆತ್ಮೀಯವಾಗಿ ಬರ ಮಾಡಿಕೊಂಡರು. 

ಹುತಾತ್ಮ ಯೋಧರ ನೆನಪಿಗಾಗಿ ಕಟ್ಟಿಸಿರುವ ಅಮರ್ ಜವಾಬ್ ಜ್ಯೋತಿಯಲ್ಲಿ ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್​ ಸಿಂಗ್​, 3 ಸೇನಾ ಮುಖ್ಯಸ್ಥರು ಗೌರವ ನಮನ ಸಲ್ಲಿಸಿದರು.  ಗೌರವ ಸಲ್ಲಿಸಿದರು. ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಂತರ ಕರ್ತವ್ಯಪಥದತ್ತ ಮೋದಿ ಸಾಗಿದರು.

74ನೇ ಗಣರಾಜ್ಯೋತ್ಸವ ಪರೇಡ್​ನಲ್ಲಿ ಮುಖ್ಯ ಅತಿಥಿಯಾಗಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್​​​​ ಫತ್ತಾಹ್​ ಅಲ್ ಸಿಸಿ ಆಗಮಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net