ಸ್ವಾತಂತ್ರ್ಯದ ಅಮೃತ ಮಹೋತ್ಸವ: ಧ್ವಜಾರೋಹಣಕ್ಕೂ ಮುನ್ನ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

PM modi
Published on

ನವದೆಹಲಿ: ದೇಶಾದ್ಯಂತ ಮನೆಮನೆಯಲ್ಲೂ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರಮ ಮನೆ ಮಾಡಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ದೆಹಲಿ ಕೆಂಪುಕೋಟೆಯ ಮೇಲೆ ಸತತ 9ನೇ ಬಾರಿ ರಾಷ್ಟ್ರ ಧ್ವಜಾರೋಹಣ ಮಾಡಲಿದ್ದಾರೆ. ಅದಕ್ಕೂ ಮುನ್ನ ಮೋದಿ ಅವರು ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.

ದೆಹಲಿಯ ರಾಜ್​ಘಾಟ್​ಗೆ ತೆರಳಿದ ಪ್ರಧಾನಿ ಮೋದಿ ಗಾಂಧಿ ಸ್ಮಾರಕಕ್ಕೆ ನಮನ ಸಲ್ಲಿಸಿ ಕೆಂಪುಕೋಟೆಯತ್ತ ಹೊರಟರು. ಇನ್ನು ಕೆಲವೇ ಕ್ಷಣಗಳಲ್ಲಿ ಮೋದಿ ಧ್ವಜಾರೋಹಣ ಮಾಡಲಿದ್ದಾರೆ.

ನವದೆಹಲಿ: ದೇಶಾದ್ಯಂತ ಸ್ವಾತಂ ತ್ರ್ಯದ ಅಮೃತ ಮಹೋತ್ಸವ ಸಂಭ್ರಮ ಮನೆ ಮಾಡಿರುವಂತೆಯೇ, ಉಗ್ರಭೀತಿಯೂ ಆವರಿಸಿದೆ. ಆ.15ರ ದಿನವನ್ನೇ ಗುರಿಯಾಗಿಸಿಕೊಂಡು ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಲಾಗಿದೆ ಎಂದು ಕೇಂದ್ರೀಯ ಗುಪ್ತಚರ ಪಡೆಯ ವರದಿ ಎಚ್ಚರಿಸಿದ್ದು, ಕೆಲ ಷಡ್ಯಂತ್ರಗಳು ಬಯಲಾಗಿವೆ. ದೆಹಲಿಯಲ್ಲಿ 2 ದಿನಗಳ ಹಿಂದಷ್ಟೇ ಅಪಾರ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಬೆನ್ನಲ್ಲೇ, ಭಾನುವಾರ ಪಂಜಾಬ್​ನಲ್ಲಿ ನಾಲ್ವರು ಉಗ್ರರನ್ನು ಬಂಧಿಸಲಾಗಿದ್ದು, ಸ್ಪೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಾಕ್ ಐಎಸ್​ಐನೊಂದಿಗೆ ನಂಟು ಹೊಂದಿರುವುದು ಬಯಲಾಗಿದೆ. ಈ ಕಾರಣಕ್ಕಾಗಿ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಪ್ರಧಾನಿ ಮೋದಿ ಪಾಲ್ಗೊಳ್ಳಲಿರುವ ದೆಹಲಿ ಕೆಂಪುಕೋಟೆಯ ಕಾರ್ಯಕ್ರಮಕ್ಕೆ ಅತಿ ಹೆಚ್ಚಿನ ಭದ್ರತೆ ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net