More

    ಕೋವಿನ್​ಪ್ರಮಾಣ ಪತ್ರದಿಂದ ಪ್ರಧಾನಿ ಮೋದಿ ಫೋಟೋ ತೆಗೆದುಹಾಕಲಾಗಿದೆ..ಕಾರಣ ಇದೇನಾ?

    ನವದೆಹಲಿ: ಕೋವಿಶೀಲ್ಡ್ ಲಸಿಕೆ ವಿವಾದದ ನಡುವೆಯೇ ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ತೆಗೆದುಹಾಕಲಾಗಿದೆ. ಕೋವಿಶೀಲ್ಡ್ ಅಪರೂಪದ ಸಂದರ್ಭಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಗಬಹುದು ಎಂದು ಅಸ್ವಾಜೆನೆಕಾ ಅಭಿಪ್ರಾಯಪಟ್ಟ ಹಿನ್ನೆಲೆಯಲ್ಲಿ ಫೋಟೋ ತೆಗೆಯಲಾಗಿದೆ ಎಂದು ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಊಹಿಸಿದ್ದರೂ, ಚುನಾವಣಾ ಮಾದರಿ ನೀತಿ ಸಂಹಿತೆಯ ಭಾಗವಾಗಿ ಫೋಟೋವನ್ನು ತೆಗೆದುಹಾಕಲಾಗಿದೆ ಎಂದು ಅಧಿಕೃತ ಮೂಲಗಳು ಹೇಳಿವೆ.

    ಇದನ್ನೂ ಓದಿ: ಪ್ರಯಾಣಿಕನನ್ನು ಬಸ್​ನಿಂದ ಕೆಳಗಿಳಿಸಿದ್ದಕ್ಕೆ 1ಲಕ್ಷ ಪಾವತಿಸುವಂತೆ ಕೆಎಸ್​ಆರ್​ಟಿಸಿಗೆ ನ್ಯಾಯಾಲಯ ತಾಕೀತು!

    ಲೋಕಸಭಾ ಚುನಾವಣೆ ನಡೆಯುತ್ತಿರುವ ಈ ಸಮಯದಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಭಾರತದ ಚುನಾವಣಾ ಆಯೋಗದ(ಇಸಿಐ) ನಿರ್ದೇಶನದ ಪ್ರಕಾರ ಚಿತ್ರವನ್ನು ತೆಗೆದುಹಾಕಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

    2021 ರಲ್ಲಿ ಕೋವಿಡ್ 19 ವಿರುದ್ಧ ಲಸಿಕೆ ಹಾಕಿದ ನಾಗರಿಕರಿಗೆ ನೀಡಲಾದ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರ ಅಂಟಿಸಿರುವುದನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ವಜಾಗೊಳಿಸಿತ್ತು. ಅರ್ಜಿದಾರರಿಗೆ 1 ಲಕ್ಷ ರೂ. ದಂಡ ವಿಧಿಸಿತ್ತು. ನಮ್ಮ ಪ್ರಧಾನಿಯ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ನ್ಯಾಯಮೂರ್ತಿ ಪಿ.ವಿ.ಕೃಷ್ಣನ್ ಆಗ ಹೇಳಿದ್ದರು.

    ಯುಕೆಯ ಫಾರ್ಮಾ ದೈತ್ಯ ಅಸ್ವಾಜೆನೆಕಾ ಇತ್ತೀಚೆಗೆ ಅತ್ಯಂತ ಅಪರೂಪದ ಸಂದರ್ಭಗಳಲ್ಲಿ ಯುರೋಪ್‌ನಲ್ಲಿ ವ್ಯಾಕ್ಸ್‌ಜೆದ್ರಿಯಾ ಮತ್ತು ಭಾರತದಲ್ಲಿ ಕೋವಿಶೀಲ್ಡ್ ಎಂದು ಕರೆಯಲ್ಪಡುವ ಅದರ ಕೋವಿಡ್​-19 ಲಸಿಕೆ ರಕ್ತ ಹೆಪ್ಪುಗಟ್ಟುವಿಕೆಗೆ ಒಳಗಾಗಿ ಅಡ್ಡ ಪರಿಣಾಮವನ್ನು ಉಂಟುಮಾಡಬಹುದು ಎಂದು ಅಭಿಪ್ರಾಯಪಟ್ಟಿತ್ತು. ಭಾರತದಲ್ಲಿ ಅಸ್ರಾಜೆನೆಕಾ ಲಸಿಕೆಯನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿತ್ತು.

    ಹಷ್ ಮನಿ ಪ್ರಕರಣ: ಟ್ರಂಪ್ ಗೆ 6 ಲಕ್ಷ ದಂಡ ವಿಧಿಸಿದ ಕೋರ್ಟ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts