More

  ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮ ದಿನಾಚರಣೆ: ಏಕತಾ ಪ್ರತಿಮೆಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

  ನವದೆಹಲಿ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 148 ನೇ ಜನ್ಮದಿನದ ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಗುಜರಾತ್ ಪ್ರವಾಸದಲ್ಲಿದ್ದಾರೆ. ಮಂಗಳವಾರ ಮೋದಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಗೆ ಪುಷ್ಪ ನಮನ ಸಲ್ಲಿಸಿದರು.

  ಎಕ್ಸ್​​​​​​ನಲ್ಲಿ (ಈ ಹಿಂದೆ ಟ್ವಿಟರ್) ಪೋಸ್ಟ್ ಮಾಡಿರುವ ಮೋದಿಯವರು, ಪಟೇಲ್ ಅವರನ್ನು ಸ್ಮರಿಸುತ್ತಾ, “ಸರ್ದಾರ್ ಪಟೇಲ್ ಅವರ ಜನ್ಮ ವಾರ್ಷಿಕೋತ್ಸವದಂದು, ಅವರ ಅದಮ್ಯ ಮನೋಭಾವ, ನಮ್ಮ ದೇಶದ ಭವಿಷ್ಯವನ್ನು ರೂಪಿಸಿದ ಅಸಾಧಾರಣ ಸಮರ್ಪಣೆಯನ್ನು ನಾವು ನೆನಪಿಸಿಕೊಳ್ಳುತ್ತೇವೆ. ಅವರ ಸೇವೆಗೆ ನಾವು ಸದಾ ಋಣಿಯಾಗಿರುತ್ತೇವೆ” ಎಂದು ತಿಳಿಸಿದ್ದಾರೆ.

  ರಾಷ್ಟ್ರ ರಾಜಧಾನಿಯಾದ ದೆಹಲಿಯ ಪಟೇಲ್ ಚೌಕ್‌ನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ, ರಾಷ್ಟ್ರಪತಿಗಳು, ಧಂಖರ್, ಶಾ ಮತ್ತು ಇತರರು ಭಾರತದ ಮೊದಲ ಗೃಹ ಸಚಿವರಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಇದನ್ನು ‘ರಾಷ್ಟ್ರೀಯ ಏಕತಾ ದಿನ’ ಎಂದು ಸಹ ಆಚರಿಸಲಾಗುತ್ತದೆ. ಭಾರತದ ಏಕತೆ ಮತ್ತು ಸಮೃದ್ಧಿಯು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜೀವನದ ಏಕೈಕ ಗುರಿಯಾಗಿತ್ತು ಎಂದು ‘ಎಕ್ಸ್’ ಪೋಸ್ಟ್‌ನಲ್ಲಿ ಶಾ ಹೇಳಿದ್ದಾರೆ.

  ಪಟೇಲ್ ಚೌಕ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಮತ್ತು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಸೇರಿದಂತೆ ಹಲವರು ಭಾಗವಹಿಸಿದ್ದರು.

  ಈ ಎರಡು ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ; ಎಲ್ಲೆಲ್ಲಿ ಬಿಸಿಲು?

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts