More

    ಮುಂದಿನ 10 ವರ್ಷಗಳಲ್ಲಿ 3 ಕೋಟಿ ಮನೆಗಳ ನಿರ್ಮಾಣ: ಪ್ರಧಾನಿ ಮೋದಿ ಭರವಸೆ

    ಚಿಕ್ಕಬಳ್ಳಾಪುರ: ಇಂದು ಲೋಕಸಭಾ ಚುನಾವಣೆಯ ಹಿನ್ನೆಲೆ ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಇಂಡಿಯಾ ಮೈತ್ರಿಕೂಟದ ವಿರುದ್ಧ ವ್ಯಂಗ್ಯವಾಡಿದ್ದು, ಈ ಒಕ್ಕೂಟಕ್ಕೆ ನಾಯಕರೂ ಇಲ್ಲ, ದೂರದೃಷ್ಟಿಯೂ ಇಲ್ಲ. ಅವರದು ಹಗರಣಗಳ ಚರಿತ್ರೆ ಎಂದು ಹೇಳಿದ್ದಲ್ಲದೆ, ಫಿರ್ ಏಕ್ ಬಾರ್ ಮೋದಿ ಸರಕಾರ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಇದನ್ನೂ ಓದಿ: ಮೃತ ಕಾರ್ಯಕರ್ತನ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಿ

    ಕೋಲಾರ ಲೋಕಸಭಾ ಕ್ಷೇತ್ರಗಳ ಚುನಾವಣಾ ಪ್ರಚಾರ ಸಭೆ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ, ನಾನಿಲ್ಲಿ ರಿಪೋರ್ಟ್ ಕಾರ್ಡ್ ಜೊತೆ ಮತ ಕೇಳಲು ಬಂದಿದ್ದೇನೆ. ಹಗಲಿರುಳೆನ್ನದೆ ನಿಮಗಾಗಿ ಶ್ರಮಿಸಿದ್ದೇನೆ. ನಿಮ್ಮ ಕನಸುಗಳೇ ಮೋದಿಯ ಸಂಕಲ್ಪ ಎಂದರು. 24/7 ಮೂಲಕ 2024ರಲ್ಲಿ ದೇಶವನ್ನು ಮುನ್ನಡೆಸುವ ಗ್ಯಾರಂಟಿ ಕೊಡುತ್ತಿದ್ದೇನೆ ಎಂದು ಆಶ್ವಾಸನೆ ನೀಡಿದರು.

    ಬಡವರಿಗಾಗಿ ಉಚಿತ ಪಡಿತರ ಕೊಟ್ಟಿದ್ದೇವೆ, ಲಕ್ಷಾಂತರ ಜನರಿಗೆ ಉಚಿತ ಪಡಿತರ ಸಿಗುತ್ತಿದೆ. ಇದು ಇನ್ನೂ 5 ವರ್ಷ ಮುಂದುವರಿಯಲಿದೆ. ಉಚಿತ ಚಿಕಿತ್ಸೆಯ ಕನಸನ್ನೂ ಕಾಣದ ಜನರಿಗೆ ಆಯುಷ್ಮಾನ್ ಕಾರ್ಡ್ ಮೂಲಕ ಉಚಿತ ಚಿಕಿತ್ಸೆ ಕೊಡುತ್ತಿದ್ದೇವೆ. ಎಸ್‍ಸಿ, ಎಸ್‍ಟಿ, ಒಬಿಸಿ ಪರಿವಾರಕ್ಕೆ ನನ್ನ ಸರಕಾರದ ಗರಿಷ್ಠ ಲಾಭ ಸಿಕ್ಕಿದೆ. ನೀರಿನ ಸೌಕರ್ಯ, ಮನೆ ಇಲ್ಲದೆ, ವಿದ್ಯುತ್ ಸಂಪರ್ಕವಿಲ್ಲದೆ ಜನರು ಜೀವಿಸುತ್ತಿದ್ದರು. 10 ವರ್ಷಗಳಲ್ಲಿ 25 ಕೋಟಿ ಜನರು ಬಿಪಿಎಲ್ ರೇಖೆಗಿಂತ ಮೇಲಕ್ಕೆ ಬಂದಿದ್ದಾರೆ. ಮುಂದಿನ 10 ವರ್ಷಗಳಲ್ಲಿ 3 ಕೋಟಿ ಮನೆಗಳನ್ನು ನಿರ್ಮಿಸಿಕೊಡುತ್ತೇವೆ ಎಂದು ತಿಳಿಸಿದರು.

    4 ಗಂಟೆಗಳ ಕಾಲ ಅವರಿಬ್ಬರು ಹೀಗೆ ಇದ್ರು! ಅದನ್ನು ನೋಡಿ… ಪ್ರಯಾಣಿಕ ಹರಿಬಿಟ್ಟ ದೃಶ್ಯ ನೋಡಿ ದಂಗಾದ ನೆಟ್ಟಿಗರು

    ನೀನೆಂದಿಗೂ ನನ್ನ ಜತೆಯಲ್ಲೇ ಇರ್ತೀಯಾ ಮಗನೇ; ಭಾವುಕರಾದ ಶಿಖರ್ ಧವನ್​ಗೆ ಫ್ಯಾನ್ಸ್​ ಆಸರೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts