

ಒಡಿಶಾ: ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ನಡೆದ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು ಸಾವಿನ ಸಂಖ್ಯೆ 300ಕ್ಕೆ ಏರಿಕೆಯಾಗಿದೆ.
ರೈಲು ಅಪಘಾತದಲ್ಲಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಪ್ರಯಾಣಿರು ಗಾಯಗೊಂಡಿದ್ದು ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ಧಾರೆ.
ಬಳಿಕ ಗಾಯಾಳುಗಳು ದಾಖಲಾಗಿರುವ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಲಿದ್ದಾರೆ ಎಂದು ವರದಿಯಾಗಿದೆ.