ಪ್ರಧಾನಿ ಮೋದಿಗೆ 'ನಮೋ' ಹೆಸರಿನ ಟೀಮ್​ ಇಂಡಿಯಾ ಜೆರ್ಸಿ ಉಡುಗೊರೆ ನೀಡಿದ BCCI

namo
Published on

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ವಿಶ್ವಕಪ್ ಗೆದ್ದ ಚಾಂಪಿಯನ್ಸ್​ ಟೀಮ್ ಇಂಡಿಯಾ ಇಂದು (ಜುಲೈ 04) ಬಿಸಿಸಿಐ ಏರ್ಪಡಿಸಿದ್ದ ವಿಶೇಷ ವಿಮಾನದಲ್ಲಿ ಭಾರತಕ್ಕೆ ಬಂದಿಳಿದಿದೆ. ಆಟಗಾರರಿಗೆ ಬಿಸಿಸಿಐ ಅಧಿಕಾರಿಗಳು ಮತ್ತು ಅಭಿಮಾನಿಗಳು ಭವ್ಯ ಸ್ವಾಗತ ಕೋರಿದರು.

ದೆಹಲಿಗೆ ಆಗಮಿಸಿದ ಆಟಗಾರರು ಬಳಿಕ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ವಿಶ್ವಕಪ್​ ಗೆಲುವಿನ ಕುರಿತು ಆಟಗಾರರು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು.

ಟಿ20 ವಿಶ್ವಕಪ್ ಟ್ರೋಫಿ ಗೆದ್ದು ತವರಿಗೆ ಮರಳಿದ ಟೀಮ್​ ಇಂಡಿಯಾ ಆಟಗಾರರನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ನಿವಾಸದಲ್ಲಿ ಸನ್ಮಾನಿಸಿದರು. ಈ ವೇಳೆ ಬಿಸಿಸಿಐ ಕಡೆಯಿಂದ ಮೋದಿಗೆ ನಮೋ ನಂ.1 ಎಂದು ಬರೆದ ಟೀಮ್​ ಇಂಡಿಯಾ ಜೆರ್ಸಿಯನ್ನು ಉಡುಗೊರೆಯಾಗಿ ನೀಡಲಾಯಿತು.

ವಿಶ್ವ ಕಪ್​ ಟ್ರೋಫಿ ಜತೆ ಆಟಗಾರರೊಂದಿಗೆ ಗ್ರೂಫ್​ ಫೋಟೋ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟವನ್ನು ಕೂಡ ಏರ್ಪಡಿಸಲಾಗಿತ್ತು. ಈ ಎಲ್ಲ ಕಾರ್ಯಕ್ರಮದ ಬಳಿಕ ಬಿಸಿಸಿಐ ಅಧ್ಯಕ್ಷ ರೋಜರ್​ ಬಿನ್ನಿ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಅವರು ನಮೋ ಎಂದು ಬರೆದ ಟೀಮ್​ ಇಂಡಿಯಾ ಜೆರ್ಸಿಯನ್ನು ನೆನಪಿನ ಕಾಣಿಕೆಯಾಗಿ ನೀಡಿದರು. ಈ ಫೋಟೊವನ್ನು ಬಿಸಿಸಿಐ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಶೇರ್​ ಮಾಡಿದೆ.

ವಿಶ್ವ ವಿಜೇತ ತಂಡವನ್ನು ಭೇಟಿ ಮಾಡಿದ ಫೋಟೊವನ್ನು ಮೋದಿ ಕೂಡ ತನ್ನ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದು, ನಮ್ಮ ಚಾಂಪಿಯನ್‌ಗಳೊಂದಿಗೆ ಉತ್ತಮ ಸಭೆ!…ಪಂದ್ಯಾವಳಿಯ ಸ್ಮರಣೀಯ ಸಂಭಾಷಣೆ ಅನುಭವವನ್ನು ಕೇಳಿ ನಿಜವಾಗಿಯೂ ಸಂತಸ ತಂದಿತು ಎಂದು ಬರೆದುಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net