ನವದೆಹಲಿ: ಸುಳ್ಳು ನಿರೂಪಣೆಗಳನ್ನು ಹರಡುವವರು’ ಅಭಿವೃದ್ಧಿ, ಹೂಡಿಕೆ ಮತ್ತು ಉದ್ಯೋಗದ ಶತ್ರುಗಳು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ: ಕಬಿನಿ ಜಲಾಶಯದಿಂದ ನದಿಗೆ 20 ಸಾವಿರ ಕ್ಯೂಸೆಕ್ ನೀರು ಬಿಡುಗಡೆ!
ಆರ್ಬಿಐ ಉದ್ಯೋಗಗಳಿಗೆ ಸಂಬಂಧಿಸಿದಂತೆ ವರದಿಯನ್ನು ಬಿಡುಗಡೆ ಮಾಡಿದೆ. ವರದಿಯ ಪ್ರಕಾರ ಕಳೆದ 3-4 ವರ್ಷಗಳಲ್ಲಿ ದೇಶದಲ್ಲಿ ಸುಮಾರು 8 ಕೋಟಿ ಹೊಸ ಉದ್ಯೋಗಗಳು ಸೃಷ್ಟಿಯಾಗಿವೆ. ಈ ಅಂಕಿಅಂಶಗಳು ಸುಳ್ಳು ನಿರೂಪಣೆಗಳನ್ನು ಹರಡುವವರ ಬಾಯಿ ಮುಚ್ಚಿಸಿವೆ ತಿರುಗೇಟು ನೀಡಿದರು.
ಈ ವ್ಯಕ್ತಿಗಳು ಹೂಡಿಕೆ, ಮೂಲಸೌಕರ್ಯ ಮತ್ತು ದೇಶದ ಅಭಿವೃದ್ಧಿಯನ್ನು ವಿರೋಧಿಸುತ್ತಾರೆ. ಈಗ ಅವರ ಬುದ್ಧಿ ಬಯಲಾಗಿದೆ. ದೇಶದ ನಾಗರಿಕರು ಅವರ ಪಿತೂರಿಗಳನ್ನು ತಿರಸ್ಕರಿಸುತ್ತಿದ್ದಾರೆ ಎಂದು ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ಹೇಳಿದ್ದಾರೆ.
ಇಂದು (ಜುಲೈ 13) ಮುಂಬೈಗೆ ಭೇಟಿ ನೀಡಿರುವ ಪ್ರಧಾನಿ 29,400 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು. ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ಮುಂದುವರಿಸಿದ ಪ್ರಧಾನಿ, ಅಟಲ್ ಸೇತು ಸೇತುವೆ ಬಿರುಕು ಬಿಟ್ಟಿದೆ ಎಂಬ ಕಾಂಗ್ರೆಸ್ ಆರೋಪಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
“ನಮ್ಮ ಉದ್ದೇಶ ಮುಂಬೈನಲ್ಲಿ ಜೀವನದ ಗುಣಮಟ್ಟವನ್ನು ಉತ್ತಮಗೊಳಿಸುವುದು. ಆದ್ದರಿಂದ, ಮುಂಬೈ ಸುತ್ತಮುತ್ತಲಿನ ಸಂಪರ್ಕವನ್ನು ಸುಧಾರಿಸಲಾಗುತ್ತಿದೆ. ಮುಂಬೈನಲ್ಲಿ ಕರಾವಳಿ ರಸ್ತೆ ಹಾಗೂ ಅಟಲ್ ಸೇತು ಕಾಮಗಾರಿ ಮುಗಿದಿದ್ದು, ಅಟಲ್ ಸೇತು ಬಗ್ಗೆ ಅಪಪ್ರಚಾರ ಮಾಡಿದ್ದು ನಿಮಗೆ ನೆನಪಿರಬಹುದು. ಅದನ್ನು ನಿಲ್ಲಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಾಗಿತ್ತು, ಆದರೆ ಪ್ರತಿಯೊಬ್ಬರೂ ಅದರಿಂದ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಸಹ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಪ್ರಧಾನಿ ಹೇಳಿದರು.
ಪ್ರತಿದಿನ ಸುಮಾರು 20,000 ವಾಹನಗಳು ಇದನ್ನು ಬಳಸುತ್ತಿವೆ ಎಂದು ನನಗೆ ಹೇಳಲಾಗಿದೆ. ಅಲ್ಲದೆ, ದಿನಕ್ಕೆ ಸುಮಾರು 20,000-25000 ಲಕ್ಷ ಮೌಲ್ಯದ ಇಂಧನ ಉಳಿತಾಯವಾಗುತ್ತಿದೆ” ಎಂದು ಮೋದಿ ಹೇಳಿದರು. ಮುಂಬೈನಲ್ಲಿ ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಅವರೊಂದಿಗೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸನ್ಮಾನಿಸಿದರು.
ಮುಂಬೈನಲ್ಲಿ 29,400 ಕೋಟಿ ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ!