'ಅವರಿಗೆ ಹೋರಾಡುವ ಧೈರ್ಯವಿಲ್ಲ': ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ವಾಕೌಟ್​ಗೆ ಪ್ರಧಾನಿ ಮೋದಿ ಟೀಕೆ

modi
Published on

ನವದೆಹಲಿ: 'ನನ್ನ ಹತ್ತು ವರ್ಷದ ಆಡಳಿತದಲ್ಲಿ ರೈತರಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿದ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸರ್ಕಾರದ ಪರವಾಗಿ ಮಾತನಾಡಿದರು.

ರೈತರ ಸಬಲೀಕರಣಕ್ಕಾಗಿ ತಮ್ಮ ಸರ್ಕಾರ ಶ್ರಮಿಸುತ್ತಿದೆ. ಬೆಳೆ ಸಾಲ ನೀಡಲಾಗಿದ್ದು, ಕನಿಷ್ಠ ಬೆಂಬಲ ಬೆಲೆಯಲ್ಲಿ ಉತ್ಪನ್ನ ಖರೀದಿಸಲಾಗುತ್ತಿದೆ. ಕಡಿಮೆ ದರದಲ್ಲಿ ರಸಗೊಬ್ಬರ ನೀಡಲಾಗುತ್ತಿದೆ. ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡಲಾಗಿದೆ. ಮೊದಲು ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯುವುದು ಕಷ್ಟಕರವಾಗಿತ್ತು, ಈಗ ಕಿಸಾನ್ ಕ್ರೆಡಿಟ್ ಕಾರ್ಡ್‌ಗಳನ್ನು ಸುಲಭವಾಗಿ ಒದಗಿಸಲಾಗುತ್ತಿದೆ. ಫಸಲ್ ಬಿಮಾ ಯೋಜನೆಯಿಂದ ಎಲ್ಲ ರೈತರು ಪ್ರಯೋಜನ ಪಡೆದಿದ್ದಾರೆ. ಹಿಂದಿನ ಸರ್ಕಾರಗಳು ಸಣ್ಣ ಮತ್ತು ಅತಿಸಣ್ಣ ರೈತರಿಗೆ ಯಾವುದೇ ಪ್ರಯೋಜನಗಳನ್ನು ನೀಡಿಲ್ಲ ಎಂದು ಮೋದಿ ಟೀಕಿಸಿದರು.

ಪ್ರತಿಪಕ್ಷಗಳ ವಾಕ್‌ಔಟ್: ಪ್ರಧಾನಿ ನರೇಂದ್ರ ಮೋದಿ ಅವರು ಸತ್ಯ ಮಾತನಾಡುತ್ತಿಲ್ಲ ಎಂದು ಪ್ರತಿಪಕ್ಷದ ಸದಸ್ಯರು ಸದನದಿಂದ ಹೊರ ನಡೆದರು.

ಹೋರಾಡುವ ಧೈರ್ಯವಿಲ್ಲ: ಪ್ರತಿಪಕ್ಷಗಳ ವಾಕೌಟ್​ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಪ್ರತಿಪಕ್ಷಗಳಿಗೆ ಹೋರಾಟ ಮಾಡುವ ಧೈರ್ಯವಿಲ್ಲ. ದೇಶ ನೀಡಿರುವ ತೀರ್ಪನ್ನು ಅರಗಿಸಿಕೊಳ್ಳಲು ವಿರೋಧ ಪಕ್ಷಗಳಿಗೆ ಸಾಧ್ಯವಾಗುತ್ತಿಲ್ಲ ಸದನಕ್ಕೆ ಅಪಮಾನ ಮಾಡಿದ್ದಾರೆ ಎಂದು ಪ್ರತಿಪಕ್ಷಗಳನ್ನು ಮೋದಿ ಟೀಕಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net