ಕರೊನಾ ಕಂಟಕ: ಇಂದು ರಾತ್ರಿ 8ಕ್ಕೆ ದೇಶವಾಸಿಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

Modi 26 Feb 20
Published on

ನವದೆಹಲಿ: ಇಡೀ ದೇಶವನ್ನೇ ಸಂಕಷ್ಟಕ್ಕೆ ದೂಡಿರುವ ಮಹಾಮಾರಿ ಕರೊನಾ ವೈರಸ್ ಕುರಿತ ಕೆಲವು ಮಹತ್ವದ ವಿಚಾರಗಳನ್ನು ಹಂಚಿಕೊಳ್ಳಲು ಇಂದು ರಾತ್ರಿ 8 ಗಂಟೆಗೆ ಮತ್ತೊಮ್ಮೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ.

ಇಂದು ಬೆಳಗ್ಗೆ ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ಕೋವಿಡ್​-19 ಭೀತಿ ಕುರಿತ ಮಹತ್ವದ ವಿಷಯಗಳಿಗೆ ಸಂಬಂಧಿಸಿದಂತೆ ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದೇನೆ ಎಂದಿದ್ದಾರೆ.

ನಿನ್ನೆಯಷ್ಟೇ ಟ್ವೀಟ್​ ಮಾಡಿದ್ದ ಪ್ರಧಾನಿ ಮೋದಿ, ಲಾಕ್​ಡೌನ್ ಅನ್ನು ಅನೇಕ ಜನರು ಗಂಭೀರವಾಗಿ ಪರಿಗಣಿಸಿಲ್ಲ. ದಯವಿಟ್ಟು ನಿಮ್ಮನ್ನು ನೀವು ಕಾಪಾಡಿಕೊಂಡು, ನಿಮ್ಮ ಕುಟುಂಬವನ್ನು ಉಳಿಸಿಕೊಳ್ಳಿ. ಇದಕ್ಕಾಗಿ ಸರ್ಕಾರದ ನಿರ್ದೇಶನಗಳನ್ನು ಗಂಭೀರವಾಗಿ ಪಾಲಿಸಿ. ಜನರು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿರುವುದನ್ನು ರಾಜ್ಯ ಸರ್ಕಾರಗಳು ಖಚಿತಪಡಿಸಬೇಕು ಎಂದು ಪ್ರಧಾನಿ ವಿನಂತಿ ಮಾಡಿದ್ದರು.

ದೇಶದಲ್ಲಿ ಈವರೆಗೆ 470ಕ್ಕೂ ಅಧಿಕ ಮಂದಿಗೆ ಕರೊನಾ ಸೋಂಕು ತಗುಲಿದ್ದು, ಓರ್ವ ಇಟಲಿ ಪ್ರಜೆ ಸೇರಿ ಒಟ್ಟು 10 ಮಂದಿ ಬಲಿಯಾಗಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net