More

    ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ; 1,400ಕ್ಕೂ ಅಧಿಕ ಕಲಾವಿದರಿಂದ ಸ್ವಾಗತ!

    ಉತ್ತರಪ್ರದೇಶ: ಅಯೋಧ್ಯೆಯಲ್ಲಿ ಜನವರಿ 22ರಂದು ಅದ್ದೂರಿಯಾಗಿ ನಡೆಯಲಿರುವ ರಾಮಮಂದಿರ ವಿಗ್ರಹ ಪ್ರತಿಷ್ಠಾಪನೆ ಸಮಾರಂಭಕ್ಕೂ ಮೊದಲು ರಾಜ್ಯದಲ್ಲಿ ಪುನರಾಭಿವೃದ್ಧಿಗೊಂಡ ರೈಲು ನಿಲ್ದಾಣ ಮತ್ತು ಹೊಸ ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಆಗಮಿಸಲಿದ್ದು, ಅವರನ್ನು ಸ್ವಾಗತಿಸಲು 1400ಕ್ಕೂ ಅಧಿಕ ವಿವಿಧ ಕಲಾವಿದರು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.

    ಇದನ್ನೂ ಓದಿ: ಲಕ್ಷ ರೂ.ಗೆ ರಾಜೀವ್ ಗಾಂಧಿ ವಸತಿಭಾಗ್ಯ; ಸರ್ಕಾರವೇ ಭರಿಸಲಿದೆ ಬಾಕಿ ಮೊತ್ತ

    ವಿಮಾನ ನಿಲ್ದಾಣದಿಂದ ರೈಲ್ವೆ ನಿಲ್ದಾಣ, ರಾಮ್ ಪಥ್​ವರೆಗಿನ ಮಾರ್ಗದಲ್ಲಿ ನಿರ್ಮಿಸಲಾದ ಒಟ್ಟು 40 ವೇದಿಕೆಗಳಲ್ಲಿ 1,400ಕ್ಕೂ ಹೆಚ್ಚು ಕಲಾವಿದರು ಜಾನಪದ ಕಲೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಲಿದ್ದಾರೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಚೇರಿ ಹೊರಡಿಸಿರುವ ಅಧಿಕೃತ ಪ್ರಕಟಣೆಯಲ್ಲಿ ಉಲ್ಲೇಖವಾಗಿದೆ.

    ಮಾಹಿತಿಯ ಪ್ರಕಾರ, ಅಯೋಧ್ಯೆಯ ವೈಭವ್ ಮಿಶ್ರಾ ಅವರು ಶಂಖಗಳನ್ನು ಊದುವ ಮೂಲಕ ರಾಮಲಾಲಾ ಭೂಮಿಗೆ ಪ್ರಧಾನಿಯನ್ನು ಸ್ವಾಗತಿಸಲಿದ್ದಾರೆ. ಮೋದಿ ಅವರು ಅಯೋಧ್ಯೆ ರೈಲ್ವೆ ನಿಲ್ದಾಣ, ಹೊಸದಾಗಿ ನಿರ್ಮಿಸಲಾದ ಅಯೋಧ್ಯೆ ವಿಮಾನ ನಿಲ್ದಾಣವನ್ನು ಉದ್ಘಾಟಿಸುವುದರ ಜತೆಗೆ 15,700 ಕೋಟಿ ರೂ.ಗಿಂತ ಹೆಚ್ಚಿನ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ, ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ,(ಏಜೆನ್ಸೀಸ್).

    ದಿಲ್ ರಾಜು ನಿರ್ಮಾಣದ ಮೂರು ಚಿತ್ರಕ್ಕೂ ವೈಷ್ಣವಿ ಚೈತನ್ಯ ನಾಯಕಿ! ಒಪ್ಪಂದಕ್ಕೆ ಸಹಿ ಮಾಡಿದ್ರಾ ‘ಬೇಬಿ’ ನಟಿ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts