More

    5800 ಕೋಟಿ ರೂ. ಮೌಲ್ಯದ ಯೋಜನೆ ಲೋಕಾರ್ಪಣೆ ಮಾಡಲಿರುವ ಪ್ರಧಾನಿ ಮೋದಿ

    ದೆಹಲಿ: ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ವರ್ಷದ ರಾಷ್ಟ್ರೀಯ ತಂತ್ರಜ್ಞಾನ ದಿನದ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದಾರೆ. 25ನೇ ರಾಷ್ಟ್ರೀಯ ತಂತ್ರಜ್ಞಾನ ದಿನದ ಹಿನ್ನಲೆಯಲ್ಲಿ ಈ ಕಾರ್ಯಕ್ರಮಗಳನ್ನು ಮೇ 11 ರಿಂದ 14ರವರೆಗೆ ಆಯೋಜಿಸಲಾಗಿದೆ.

    ಪ್ರಧಾನಿ ಮೋದಿ, ದೇಶದ ವೈಜ್ಞಾನಿಕ ಮತ್ತು ತಾಂತ್ರಿಕ ಪ್ರಗತಿಗೆ ಸಂಬಂಧಿಸಿದ 5800 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಅನೇಕ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದು, ಹಿಂಗೋಲಿಯ ಲೇಸರ್ ಇಂಟರ್ಫೆರೋಮೀಟರ್ ಗ್ರಾವಿಟೇಷನಲ್-ವೇವ್ ಅಬ್ಸರ್ವೇಟರಿ-ಇಂಡಿಯಾ (LIGO-ಇಂಡಿಯಾ), ಒಡಿಶಾದ ಹೋಮಿ ಭಾಭಾ ಕ್ಯಾನ್ಸರ್ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ, ಮತ್ತು ಮುಂಬೈನ ಟಾಟಾ ಮೆಮೋರಿಯಲ್ ಆಸ್ಪತ್ರೆಯ ಪ್ಲಾಟಿನಂ ಜುಬಿಲಿ ಬ್ಲಾಕ್ ಯೋಜನೆಗಳಿಗೆ ಅಡಿಪಾಯ ಹಾಕಲಿದ್ದಾರೆ.

    ಇದನ್ನೂ ಓದಿ: ದಿ ಎಲಿಫೆಂಟ್​ ವಿಸ್ಪರರ್ಸ್; ಬೊಮ್ಮನ್-ಬೆಳ್ಳಿಗೆ ವಿಶೇಷ ಗಿಫ್ಟ್​​​​ ನೀಡಿದ ಎಮ್​.ಎಸ್​.ಧೋನಿ

    ಭಾರತದ ವೈಜ್ಞಾನಿಕ ಮತ್ತು ತಾಂತ್ರಿಕ ಪ್ರಗತಿಗೆ ಶ್ರಮಿಸಿದ ಹಾಗೂ ಮೇ 1998ರಲ್ಲಿ ಪೋಖ್ರಾನ್ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದ ಭಾರತೀಯ ವಿಜ್ಞಾನಿಗಳು, ಎಂಜಿನಿಯರ್‌ಗಳು ಮತ್ತು ತಂತ್ರಜ್ಞರನ್ನು ಗೌರವಿಸಲು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ 1999ರಲ್ಲಿ ರಾಷ್ಟ್ರೀಯ ತಂತ್ರಜ್ಞಾನ ದಿನಾಚರಣೆಯನ್ನು ಆಚರಿಸಿದರು. ಅಂದಿನಿಂದ, ಪ್ರತಿ ವರ್ಷ ಮೇ 11ರಂದು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಗುತ್ತಿದೆ.

    ಪ್ರತಿ ವರ್ಷ ಹೊಸ ಮತ್ತು ವಿಭಿನ್ನ ಥೀಮ್‌ನೊಂದಿಗೆ ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಗುತ್ತದೆ. ಈ ವರ್ಷದ ಥೀಮ್ ‘ಸ್ಕೂಲ್ ಟು ಸ್ಟಾರ್ಟಪ್ಸ್- ಇಗ್ನೈಟಿಂಗ್ ಯಂಗ್ ಮೈಂಡ್ಸ್ ಟು ಇನ್ನೋವೇಟ್’.(ಏಜೆನ್ಸೀಸ್)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts