More

    ಕರೋನಾ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಇಂದು ಸಂಜೆ 4.30ಕ್ಕೆ ಪ್ರಧಾನಿ ಮೋದಿ ಮಹತ್ವದ ಸಭೆ…

    ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯ ಕಳೆದ ವಾರ ಆರು ರಾಜ್ಯಗಳಿಗೆ ಕೋವಿಡ್ -19 ಪ್ರಕರಣಗಳ ಹೆಚ್ಚಳವನ್ನು ವರದಿ ಮಾಡಿದೆ. ಸೋಂಕಿನ ಹರಡುವಿಕೆಯನ್ನು ತಡೆಗಟ್ಟಲು ಅಪಾಯದ ಮೌಲ್ಯಮಾಪನವನ್ನು ಮಾಡಲಾಗಿದ್ದು ಅದನ್ನು ಆಧರಿಸಿದ ವಿಧಾನವನ್ನು ಅನುಸರಿಸುವಂತೆ ಕೇಳಿಕೊಂಡಿದೆ.

    ಇದನ್ನೂ ಓದಿ: ದೆಹಲಿಯ ಹಲವೆಡೆ ಮೋದಿ ವಿರೋಧಿ ಪೋಸ್ಟರ್: 44 ಪ್ರಕರಣ ದಾಖಲು, ನಾಲ್ವರ ಬಂಧನ​, ಎಎಪಿ ಆಕ್ರೋಶ

    ಕರೋನಾ ಪ್ರಕರಣಗಳ ಹೆಚ್ಚಳದ ನಡುವೆ ಸಾರ್ವಜನಿಕ ಆರೋಗ್ಯ ಸನ್ನದ್ಧತೆಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 4.30ಕ್ಕೆ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ. ಬುಧವಾರ, ಕೇಂದ್ರ ಆರೋಗ್ಯ ಸಚಿವಾಲಯದ ನವೀಕರಿಸಲ್ಪಟ್ಟ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ 1,134 ಹೊಸ ಸೋಂಕುಗಳು ದಾಖಲಾಗಿದ್ದು ಸಕ್ರಿಯ ಪ್ರಕರಣಗಳು 7,026 ಕ್ಕೆ ಏರಿವೆ.

    ಇನ್ನೂ ಐದು ಸಾವುಗಳೊಂದಿಗೆ ಕೋವಿಡ್-ಸಂಬಂಧಿತ ಸಾವಿನ ಸಂಖ್ಯೆ 5,30,813 ಕ್ಕೆ ಏರಿದೆ. ಛತ್ತೀಸ್‌ಗಢ, ದೆಹಲಿ, ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ತಲಾ ಒಂದು ಸಾವು ವರದಿಯಾಗಿದ್ದು, ಕೇರಳದಲ್ಲಿ ಒಂದು ಸಾವು ಸಂಭವಿಸಿದೆ. ಕೇಂದ್ರ ಆರೋಗ್ಯ ಸಚಿವಾಲಯವು ಕಳೆದ ವಾರ ಆರು ರಾಜ್ಯಗಳಿಗೆ ಕೋವಿಡ್ ಪ್ರಕರಣಗಳ ಹೆಚ್ಚಳವನ್ನು ವರದಿ ಮಾಡುತ್ತಿದೆ ಎಂದು ಪತ್ರ ಬರೆದಿದೆ.

    ಇದನ್ನೂ ಓದಿ: ನೀರವ್​ ಮೋದಿ ಕಂಪನಿಯ ಖಾತೆಯಲ್ಲಿ ಇರೋದು ಕೇವಲ 236 ರೂ. ಮಾತ್ರ!.

    ಕೇಂದ್ರ ಆರೋಗ್ಯ ಸಚಿವಾಲಯ ಮಹಾರಾಷ್ಟ್ರ, ಗುಜರಾತ್, ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಕರ್ನಾಟಕಕ್ಕೆ ಪತ್ರ ಬರೆದಿದ್ದು “ಕೆಲವು ರಾಜ್ಯಗಳು ಹೆಚ್ಚಿನ ಸಂಖ್ಯೆಯ ಪ್ರಕರಣಗಳನ್ನು ವರದಿ ಮಾಡುತ್ತಿವೆ. ಇದು ಸ್ಥಳೀಯವಾಗಿ ಸೋಂಕು ಹರಡುತ್ತಿದೆ ಎನ್ನುವುದನ್ನು ಸೂಚಿಸುತ್ತದೆ. ಕರೋನಾ ಸೋಂಕನ್ನು ತಡೆಗಟ್ಟಲು ಅಪಾಯದ ಮೌಲ್ಯಮಾಪನ ಆಧಾರಿತ ವಿಧಾನವನ್ನು ಅನುಸರಿಸುವ ಅವಶ್ಯಕತೆಯಿದೆ” ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಹೇಳಿದ್ದಾರೆ.

    “ರಾಜ್ಯವು ಕಟ್ಟುನಿಟ್ಟಾದ ನಿಗಾ ವಹಿಸಿ ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸಲು ಯಾವುದೇ ಅಗತ್ಯ ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಭೂಷಣ್ ಹೇಳಿದರು. (ಏಜೆನ್ಸೀಸ್)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts