More

    ಜಮ್ಮು-ಕಾಶ್ಮೀರ ಪ್ರಧಾನಿ ಮೋದಿ ಭೇಟಿ: 30 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ!

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ (ಫೆ.20) ರಂದು ಜಮ್ಮುಗೆ ಭೇಟಿ ನೀಡಲಿದ್ದಾರೆ. ತಮ್ಮ ಎರಡನೇ ಅಧಿಕಾರಾವಧಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಮೋದಿಯವರ ಎರಡನೇ ಭೇಟಿ ಇದಾಗಿದೆ. ಮೋದಿ ಮಂಗಳವಾರ ಜಮ್ಮುವಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ.

    ಇದನ್ನೂ ಓದಿ:ಕಾಂಗ್ರೆಸ್‌ ಶಾಸಕರಿಗೆ ಕುಮಾರಸ್ವಾಮಿ ಆಫರ್‌, ಒಪ್ಪದಿದ್ರೆ ಧಮ್ಕಿ; ಡಿಕೆ ಶಿವಕುಮಾರ್‌ ಗಂಭೀರ ಆರೋಪ

    ಪ್ರಧಾನ ಮಂತ್ರಿ ಮೋದಿ ಅವರ ಕಚೇರಿಯ ಪತ್ರಿಕಾ ಪ್ರಕಟಣೆಯ ಪ್ರಕಾರ, ಅಂದು ಬೆಳಗ್ಗೆ 11.30ರ ಸುಮಾರಿಗೆ ಜಮ್ಮುವಿನ ಮೌಲಾನಾ ಆಜಾದ್ ಮೈದಾನದಲ್ಲಿ ಪ್ರಧಾನಮಂತ್ರಿ ಮೋದಿ ಅವರು ಆರೋಗ್ಯ, ಶಿಕ್ಷಣ, ರೈಲು, ರಸ್ತೆ, ವಿಮಾನಯಾನ, ಪೆಟ್ರೋಲಿಯಂ, ನಾಗರಿಕ ಮೂಲಸೌಕರ್ಯ ಸೇರಿದಂತೆ ಹಲವಾರು ಕ್ಷೇತ್ರಗಳಿಗೆ ಸಂಬಂಧಿಸಿದ ಸುಮಾರು 30.500 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

    ಈ ಕಾರ್ಯಕ್ರಮದಲ್ಲಿ ಜಮ್ಮು ಮತ್ತು ಕಾಶ್ಮೀರದ ಸುಮಾರು 1500 ಹೊಸ ಸರ್ಕಾರಿ ನೇಮಕಾತಿಗಳಿಗೆ ಪ್ರಧಾನಿ ನೇಮಕಾತಿ ಆದೇಶಗಳನ್ನು ವಿತರಿಸಲಿದ್ದಾರೆ. ನಂತರ ಮೋದಿ ಅವರು ‘ವಿಕ್ಷಿತ್ ಭಾರತ್ ವಿಕ್ಷಿತ್ ಜಮ್ಮು’ ಕಾರ್ಯಕ್ರಮದ ಭಾಗವಾಗಿ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

    ಜಮ್ಮು ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡ: ತಮ್ಮ ಭೇಟಿಯ ಸಮಯದಲ್ಲಿ ಜಮ್ಮುವಿನಲ್ಲಿ 2000 ಪ್ರಯಾಣಿಕರಿಗೆ ಪೀಕ್ ಅವರ್‌ನಲ್ಲಿ ಸೇವೆ ಸಲ್ಲಿಸುವ ಜಮ್ಮು ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡದ ಶಂಕುಸ್ಥಾಪನೆಯನ್ನು ಪ್ರಧಾನಿ ಮೋದಿ ನೆರವೇರಿಸಲಿದ್ದಾರೆ. ಈ ಯೋಜನೆಯು 40,000 ಚದರ ಮೀಟರ್ ಪ್ರದೇಶದಲ್ಲಿದೆ. ಹೊಸ ಟರ್ಮಿನಲ್ ಕಟ್ಟಡ ಆಧುನಿಕ ಸೌಲಭ್ಯಗಳೊಂದಿಗೆ ಸುಸಜ್ಜಿತವಾಗಿದೆ.

    ಜಮ್ಮು-ಕಾಶ್ಮೀರಕ್ಕೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ, ಬಿಗಿ ಭದ್ರತೆ!

    ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಜಮ್ಮುವಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಪೊಲೀಸರು ಮತ್ತು ಅರೆಸೇನಾ ಪಡೆಗಳು ನಗರ ಮತ್ತಿತರ ಕಡೆಗಳಲ್ಲಿ ವಾಹನಗಳ ತಪಾಸಣೆ ನಡೆಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದರು.

    ಜಮ್ಮು-ಕಾಶ್ಮೀರ ಪ್ರಧಾನಿ ಮೋದಿ ಭೇಟಿ: 30 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ!

    ಮುನ್ನೆಚ್ಚರಿಕೆ ಕ್ರಮವಾಗಿ ಶ್ರೀನಗರದ ವಿವಿಧ ಸ್ಥಳಗಳ ಪ್ರವೇಶ ಮತ್ತು ನಿರ್ಗಮನ ಸ್ಥಳಗಳಲ್ಲಿ ವಿಶೇಷ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಪ್ರಧಾನಿ ಜಮ್ಮುವಿಗೆ ಭೇಟಿ ನೀಡುತ್ತಿದ್ದರೂ, ಕೇಂದ್ರಾಡಳಿತ ಪ್ರದೇಶದಲ್ಲಿ ಭಯೋತ್ಪಾದಕರು ಯಾವುದೇ ವಿಧ್ವಂಸಕ ಚಟುವಟಿಕೆಗಳನ್ನು ನಡೆಸದಂತೆ ನೋಡಿಕೊಳ್ಳಲು ಕಣಿವೆಯಲ್ಲಿ ಭದ್ರತಾ ಏಜೆನ್ಸಿಗಳನ್ನು ಅಲರ್ಟ್ ಮಾಡಲಾಗಿದೆ ಎಂದು ಉನ್ನತ ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

    ಸ್ಟಾರ್ ಹೀರೋಯಿನ್ ಮಗಳ ಜೊತೆ ರಾಮ್ ಚರಣ್ ರೊಮ್ಯಾನ್ಸ್…!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts