More

    ಒಡಿಶಾ ರೈಲು ದುರಂತ: 288ಕ್ಕೇರಿದ ಮೃತರ ಸಂಖ್ಯೆ, ಘಟನಾ ಸ್ಥಳಕ್ಕೆ ಇಂದು ಪ್ರಧಾನಿ ಮೋದಿ ಭೇಟಿ

    ನವದೆಹಲಿ: ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ನಡೆದ ಎಕ್ಸ್‌ಪ್ರೆಸ್ ರೈಲು ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಸದ್ಯಕ್ಕೆ ಸಾವಿನ ಸಂಖ್ಯೆ 288ಕ್ಕೆ ಏರಿಕೆಯಾಗಿದೆ. ಅವಘಡದಲ್ಲಿ ಸುಮಾರು 900ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಅವರಿಂದು ಭೇಟಿ ನೀಡಲಿದ್ದಾರೆ.

    ಮೂಲಗಳ ಪ್ರಕಾರ, ಪ್ರಧಾನಿ ಮೋದಿ ಅವರು ಮೊದಲು ರೈಲು ಅಪಘಾತದ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಆ ಬಳಿಕ ಗಾಯಾಳುಗಳು ದಾಖಲಾಗಿರುವ ಕಟಕ್‌ನಲ್ಲಿರುವ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಇಂದು ಮುಂಜಾನೆ ಒಡಿಶಾ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ಸಭೆಯನ್ನು ಕರೆದಿದ್ದರು ಎಂದು ಸರ್ಕಾರದ ಮೂಲಗಳು ತಿಳಿಸಿವೆ.

    ಇದನ್ನೂ ಓದಿ: ಒಡಿಶಾ ರೈಲು ದುರಂತ: ಭಾರತ ಇತಿಹಾಸದಲ್ಲಿ ಸಂಭವಿಸಿರುವ ಭೀಕರ ರೈಲು ಅಪಘಾತಗಳ ಚಿತ್ರಣ ಇಲ್ಲಿದೆ…

    ಪ್ರಧಾನಿ ಸಂತಾಪ

    ರೈಲು ದುರಂತದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಕೂಡ ಟ್ವೀಟ್​ ಮೂಲಕ ಪ್ರತಿಕ್ರಿಯೆ ನೀಡಿದ್ದು, ಸಂತಾಪ ವ್ಯಕ್ತಪಡಿಸಿದ್ದಾರೆ. ಒಡಿಶಾದಲ್ಲಿ ಸಂಭವಿಸಿದ ರೈಲು ದುರಂತದಿಂದ ಆಘಾತಕ್ಕೆ ಒಳಗಾಗಿದ್ದೇನೆ ಮತ್ತು ತೀವ್ರವಾಗಿ ನೊಂದಿದ್ದೇನೆ. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದೇನೆ. ಸ್ಥಳದಲ್ಲಿ ರಕ್ಷಣಾ ಕಾರ್ಯಗಳು ನಡೆಯುತ್ತಿವೆ ಮತ್ತು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

    ರಕ್ಷಣಾ ಕಾರ್ಯ ಬಿರುಸು

    ಸದ್ಯ ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಬಿರುಸಿನಿಂದ ನಡೆಯುತ್ತಿದೆ. ಈಗಾಗಲೇ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್​ಡಿಆರ್​ಎಫ್​)ಯ 3 ಘಟಕ, ಒಡಿಶಾದ ವಿಪತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ (ಒಡಿಆರ್​ಎಫ್​)ಯ 4 ಘಟಕ, 15ಕ್ಕೂ ಹೆಚ್ಚು ಅಗ್ನಿಶಾಮಕ ತಂಡ, 30ಕ್ಕೂ ಹೆಚ್ಚು ವೈದ್ಯರು, 200ಕ್ಕೂ ಹೆಚ್ಚು ಪೊಲೀಸ್​ ಸಿಬ್ಬಂದಿ ಮತ್ತು 60ಕ್ಕೂ ಹೆಚ್ಚು ಆಂಬ್ಯುಲೆನ್ಸ್​ಗಳು ಸ್ಥಳದಲ್ಲಿ ಬೀಡುಬಿಟ್ಟಿರುವುದಾಗಿ ಒಡಿಶಾ ಸರ್ಕಾರದ ಮುಖ್ಯಕಾರ್ಯದರ್ಶಿ ಪ್ರದೀಪ್​ ಜೆನಾ ಅವರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

    ಅಪಘಾತ ಹೇಗೆ ಸಂಭವಿಸಿತು?

    ಪಶ್ಚಿಮ ಬಂಗಾಳದ ಹೌರಾ ನಗರದಿಂದ ತಮಿಳುನಾಡಿನ ಚೆನ್ನೈಗೆ ತೆರಳುತ್ತಿದ್ದ ಕೊರಮಂಡಲ್​​ ಎಕ್ಸ್​ಪ್ರೆಸ್​ ರೈಲಿನ ಕೆಲವು ಬೋಗಿಗಳು ಹಳಿತಪ್ಪಿ ಪಕ್ಕದ ಹಳಿಗಳ ಮೇಲೆ ಬಿದ್ದಿತು. ಈ ವೇಳೆ ಮತ್ತೊಂದು ಕಡೆಯಿಂದ ಬರುತ್ತಿದ್ದ ಯಶವಂತಪುರ-ಹೌರ ಸೂಪರ್​ಪಾಸ್ಟ್​ ಟ್ರೈನ್​ ಹಳಿಗಳ ಮೇಲೆ ಬಿದ್ದಿದ್ದ ಕೋರಮಂಡಲ್​ ಎಕ್ಸ್​ಪ್ರೆಸ್​ ಟ್ರೈನ್​ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ ಎಂದು ರೈಲ್ವೆ ಸಚಿವಾಲಯದ ವಕ್ತಾರ ಅಮಿತಾಬ್​ ಶರ್ಮ ಅವರು ತಿಳಿಸಿದ್ದಾರೆ.

    ಇದನ್ನೂ ಓದಿ: ಒಡಿಶಾ ರೈಲು ದುರಂತ: 18 ರೈಲುಗಳ ಸಂಚಾರ ರದ್ದು, ಏಳು ರೈಲುಗಳ ಮಾರ್ಗ ಬದಲಾವಣೆ

    ಪರಿಹಾರ ಘೋಷಣೆ

    ಅಪಘಾತದಲ್ಲಿ ಮೃತಪಟ್ಟವರಿಗೆ ತಲಾ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂ. ಹಾಗೂ ಸಣ್ಣಪುಟ್ಟ ಗಾಯಗಳಾದವರಿಗೆ 50,000 ಪರಿಹಾರ ನೀಡುವುದಾಗಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಘೋಷಿಸಿದ್ದಾರೆ.

    ರೈಲು ಅಪಘಾತ | ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಒಡಿಶಾಗೆ ಸಂತೋಷ್ ಲಾಡ್

    ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈಡ್ರಾಮಾ ಮಾಡಿದ ಮಹಿಳೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts