ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರ ರಕ್ಷಣೆ; ರಕ್ಷಣಾ ತಂಡ, ಕಾರ್ಮಿಕರನ್ನು ಶ್ಲಾಘಿಸಿದ ಪ್ರಧಾನಿ

rescue Tunnel
Published on

ನವದೆಹಲಿ: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಿಲ್ಕ್​ಯಾರ್​ ಸುರಂಗದೊಳಗೆ ಸಿಲುಕಿ, ಕಳೆದ 17 ದಿನಗಳಿಂದ ಜೀವ ಕೈಯಲ್ಲಿ ಹಿಡಿದುಕೊಂಡು ಹೊಸ ಬದುಕಿಗಾಗಿ ಆಸೆಗಣ್ಣುಗಳಿಂದ ಎದುರು ನೋಡುತ್ತಿದ್ದ ಎಲ್ಲ 41 ಕಾರ್ಮಿಕರನ್ನು ಸುರಕ್ಷಿತವಾಗಿ ಸುರಂಗದಿಂದ ಇಂದು ಹೊರಕರೆತರಲಾಗಿದೆ. 17 ದಿನಗಳ ನಿರಂತರ ಶ್ರಮ ಮತ್ತು ಅಸಂಖ್ಯಾತ ಜನಗಳ ಪ್ರಾರ್ಥನೆಗೆ ಫಲ ಸಿಕ್ಕಿದ್ದು, ಬಹುದೊಡ್ಡ ರಕ್ಷಣಾ ಕಾರ್ಯಾಚರಣೆ ದೊಡ್ಡ ಯಶಸ್ಸು ಸಾಧಿಸಿದೆ.

ಈ ಕುರಿತು ಟ್ವೀಟ್​ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಉತ್ತರಖಾಶಿಯಲ್ಲಿ ಸಿಲುಕಿದ್ದ ನಮ್ಮ ಕಾರ್ಮಿಕರನ್ನು ರಕ್ಷಿಸಿರುವ ವಿಚಾರ ಎಲ್ಲರನ್ನೂ ಭಾವುಕರನ್ನಾಗಿಸುತ್ತಿದೆ ಎಂದು ಬರೆದುಕೊಂಡಿದ್ದಾರೆ.

ನಿಮ್ಮ ಧೈರ್ಯ ಮತ್ತು ತಾಳ್ಮೆ ಎಲ್ಲರಿಗೂ ಸ್ಪೂರ್ತಿದಾಯಕವಾಗಿದೆ ಎಂದು ಸುರಂಗದಲ್ಲಿ ಸಿಕ್ಕಿಬಿದ್ದ ಸ್ನೇಹಿತರಿಗೆ ನಾನು ಹೇಳಲು ಬಯಸುತ್ತೇನೆ. ನಾನು ನಿಮ್ಮೆಲ್ಲರಿಗೂ ಒಳ್ಳೆಯ ಮತ್ತು ಉತ್ತಮ ಆರೋಗ್ಯವನ್ನು ಬಯಸುತ್ತೇನೆ. ದೀರ್ಘಾವಧಿಯ ಕಾಯುವಿಕೆಯ ನಂತರ ನಮ್ಮ ಈ ಸ್ನೇಹಿತರು ಈಗ ತಮ್ಮ ಪ್ರೀತಿಪಾತ್ರರನ್ನು ಭೇಟಿಯಾಗುತ್ತಾರೆ ಎಂಬುದು ತುಂಬಾ ತೃಪ್ತಿಯ ವಿಷಯ. ಈ ಸವಾಲಿನ ಸಮಯದಲ್ಲಿ ಈ ಎಲ್ಲಾ ಕುಟುಂಬಗಳು ತೋರಿದ ತಾಳ್ಮೆ ಮತ್ತು ಧೈರ್ಯ ಪ್ರಶಂಸನೀಯ.

ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಪ್ರತಿಯೊಬ್ಬರಿಗೂ ನಾನು ನಮಸ್ಕರಿಸುತ್ತೇನೆ. ಅವರ ಶೌರ್ಯ ಮತ್ತು ಸ್ಥೈರ್ಯ ನಮ್ಮ ಕಾರ್ಮಿಕ ಬಂಧುಗಳಿಗೆ ಹೊಸ ಬದುಕನ್ನು ನೀಡಿದೆ. ಈ ಕಾರ್ಯಾಚರಣೆಯಲ್ಲಿ ತೊಡಗಿದ್ದ ತಂಡದ ಪ್ರತಿಯೊಬ್ಬ ಸದಸ್ಯನ ಕೆಲಸಗಳು ಮಾನವೀಯತೆಯ ಅತ್ಯುತ್ತಮ ಉದಾಹರಣೆ ಎಂದು ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net