ಕನ್ನಡದಲ್ಲಿ ಯುಗಾದಿ ಹಬ್ಬದ ಶುಭಾಶಯ ಕೋರಿರುವ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಾದ್ಯಂತ ಶನಿವಾರ ಹೊಸ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಂಡರು. ದಕ್ಷಿಣದಲ್ಲಿ ಯುಗಾದಿ ಹಬ್ಬವಾಗಿ, ಮಹಾರಾಷ್ಟ್ರದಲ್ಲಿ ಗುಡಿಪಡವಾ ಎಂಬ ಹೆಸರಿನಲ್ಲಿ ಉತ್ತರ ಭಾರತದಲ್ಲಿ ವಸಂತ ನವರಾತ್ರಿ ರೂಪದಲ್ಲಿ ಹೊಸ ವರ್ಷಾಚರಿಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕನ್ನಡ ಸೇರಿ ಬಹುತೇಕ ಎಲ್ಲ ಭಾಷೆಗಳಲ್ಲೂ ಹೊಸ ವರ್ಷದ ಶುಭಾಶಯ ಕೋರಿದ್ದಾರೆ.

ಕನ್ನಡದಲ್ಲಿ ಶುಭ ಕೋರುತ್ತಾ, ಹೊಸ ವರ್ಷದ ಶುಭ ಸಂದರ್ಭದಲ್ಲಿ ನಿಮ್ಮೆಲ್ಲರ ಎಲ್ಲ ಕನಸುಗಳು ನನಸಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಹೇಳಿದ್ದಾರೆ. ನಿಮ್ಮೆಲ್ಲರ ಜೀವನ ಸುಖ, ಸಂತೋಷಗಳಿಂದ ತುಂಬಿರಲಿ ಎಂದು ಹಾರೈಸಿದ್ದಾರೆ.