More

    ಸಿಎಎ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂದಿದ್ದಕ್ಕೆ ಡೊನಾಲ್ಡ್​ ಟ್ರಂಪ್​ ಹೇಳಿದ್ದು ಹೀಗೆ…

    ನವದೆಹಲಿ: ಈಶಾನ್ಯ ದೆಹಲಿಯಲ್ಲಿ ಹಿಂಸಾತ್ಮಕ ರೂಪ ಪಡೆದುಕೊಂಡಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಮಾತನಾಡಿ, ಈ ಕುರಿತು ಪ್ರಧಾನಿ ಮೋದಿಯೊಂದಿಗೆ ಚರ್ಚಿಸಿದ್ದೇನೆ. ಜನರಿಗೆ ಧಾರ್ಮಿಕ ಸ್ವಾತಂತ್ರ್ಯಬೇಕೆಂದು ಬಯಸಿರುವುದಾಗಿ ತಿಳಿಸಿದರು.

    ದೆಹಲಿಯ ಹಿಂಸಾಚಾರ ವಿಷಯವು ಭಾರತಕ್ಕೆ ಬಿಟ್ಟಿದ್ದು, ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ನಾವು ಚರ್ಚೆ ಮಾಡಿದ್ದೇವೆ. ಮೋದಿಯವರು ಕೂಡ ಆ ಬಗ್ಗೆ ಶ್ರಮಪಟ್ಟು ಕೆಲಸ ಮಾಡುತ್ತಿದ್ದಾರೆ. ವೈಯಕ್ತಿಯವಾಗಿ ದಾಳಿ ಮಾಡಲಾಗಿದೆ ಎಂಬುದನ್ನು ಕೇಳಿದ್ದೇನೆ. ಆದರೆ, ಆ ಬಗ್ಗೆ ನಾನು ಚರ್ಚಿಸಿಲ್ಲ. ಅದೆಲ್ಲ ಭಾರತಕ್ಕೆ ಬಿಟ್ಟ ವಿಚಾರವಾಗಿದೆ ಎಂದು ಹೇಳಿದರು.

    ಸಿಎಎ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂದು ಕೇಳಿದ್ದಕ್ಕೆ ಏನನ್ನು ಮಾತನಾಡಲು ಇಚ್ಛಿಸದೇ, ಅದರ ಬಗ್ಗೆ ಚರ್ಚಿಸಲು ನನಗೆ ಇಷ್ಟವಿಲ್ಲ. ನಾನದನ್ನು ಭಾರತದಲ್ಲೇ ಬಿಡುತ್ತೇನೆ. ಭಾರತದ ಜನರಿಗೆ ಮೋದಿ ಅವರು ಒಳ್ಳೆಯದನ್ನೇ ಮಾಡುತ್ತಾರೆ ಎಂಬ ಭರವಸೆ ಇದೆ ಎಂದರು.

    ಸದ್ಯ ಸಿಎಎ ಪರ-ವಿರೋಧ ಬಣಗಳ ನಡುವೆ ಈಶಾನ್ಯ ದೆಹಲಿಯಲ್ಲಿ ಉಂಟಾಗಿರುವ ಹಿಂಸಾಚಾರಕ್ಕೆ ಪೊಲೀಸ್​ ಸಿಬ್ಬಂದಿ ಸೇರಿದಂತೆ 9 ಮಂದಿ ಸಾವಿಗೀಡಾಗಿದ್ದಾರೆ. ಭಾನುವಾರ ರಾತ್ರಿ ಉಲ್ಬಣಗೊಂಡ ಗಲಭೆ ಮಂಗಳವಾರ ರಾತ್ರಿ ಡೊನಾಲ್ಡ್​ ಟ್ರಂಪ್​ ದೆಹಲಿಗೆ ಆಗಮಿಸುವ ಮುನ್ನವೇ ಹಿಂಸಾತ್ಮಕ ರೂಪಕ್ಕೆ ತಿರುಗಿದೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts