ರಷ್ಯಾ - ಯೂಕ್ರೇನ್ ಯುದ್ಧ; ಅಂದು ಭಾರತದ ಪ್ರಧಾನಿ ಮೋದಿ ಹೇಳಿದ್ದು ನಿಜ ಎಂದ ಫ್ರಾನ್ಸ್ ಅಧ್ಯಕ್ಷ

New Project (6)
Published on

ವಿಶ್ವಸಂಸ್ಥೆ: ಇದು ಯುದ್ಧದ ಕಾಲವಲ್ಲ. ಶಾಂತಿ ಸ್ಥಾಪಿಸುವ ಕಾಲ ಎಂದು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದು ಸರಿಯಾಗಿದೆ ಎಂದು ನ್ಯೂಯಾರ್ಕ್​​ನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರೊನ್ ಅಭಿಪ್ರಾಯಪಟ್ಟಿದ್ದಾರೆ.

ದ್ವಿಪಕ್ಷೀಯ ಮಾತುಕತೆ ಸಂದರ್ಭದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುತಿನ್ ಅವರ ಜೊತೆ ಮಾತುಕತೆ ನಡೆದ ಸಂದರ್ಭದಲ್ಲಿ ''ಇದು ಯುದ್ಧದ ಸಮಯವಲ್ಲ. ಯೂಕ್ರೇನ್ ಜತೆಗಿನ ಸಂಘರ್ಷ ಕೊನೆಗೊಳಿಸಿ. ಜಾಗತಿಕ ಸವಾಲುಗಳನ್ನು ಎಲ್ಲಾ ರಾಷ್ಟ್ರಗಳು ಒಗ್ಗಟ್ಟಾಗಿ ಎದುರಿಸಬೇಕು. ಶಾಂತಿಯುತ ಮಾತುಕಥೆಯಿಂದ ಸಮಸ್ಯೆ ಬಗೆಹರಿಸಿಕೊಳ್ಳಬೇಕು" ಎಂದು ಪ್ರಧಾನಿ ನರೇಂದ್ರ ಮೋದಿ ಅಂದು ಹೇಳಿದ ಮಾತು ಸತ್ಯವಾದದ್ದು ಎಂದು ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರೊನ್ ಅಭಿಪ್ರಾಯಪಟ್ಟಿದ್ದಾರೆ.

ಇದು ಪಶ್ಚಿಮದ ದೇಶಗಳ ವಿರುದ್ಧ ಸೇಡು ತೀರಿಸಿಕೊಳ್ಳುವುದಕ್ಕಾಗಲೀ ಅಥವಾ ಪೂರ್ವದ ವಿರುದ್ಧ ಪಶ್ಚಿಮವನ್ನು ಎತ್ತಿಕಟ್ಟುವುದಕ್ಕಾಗಲೀ ಅಲ್ಲ. ಇದು ವಿಶ್ವದ ಎಲ್ಲ ದೇಶಗಳಿಗೆ ಅನ್ವಯಿಸುವ ಸಮಾನ ಸಂಗತಿಯಾಗಿದೆ. ನಾವೆಲ್ಲರೂ ಜತೆಗೂಡಿ ಸವಾಲುಗಳನ್ನು ನಿಭಾಯಿಸಬೇಕು’ ಎಂದು ಮೋದಿ ಪುತಿನ್​ ಅವರಿಗೆ ಹೇಳಿದ್ದರು. ಈ ಮಾತನ್ನು ಮ್ಯಾಕ್ರೋನ್​ ಉಲ್ಲೇಖಿಸಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net