ಲೋಕಸಭೆ ಚುನಾವಣೆಯಲ್ಲಿ ಪರಾಭವಗೊಂಡ ಬಳಿಕ ಪ್ರಧಾನಿ ಮೋದಿ ವಿದೇಶದಲ್ಲಿ ನೆಲೆಸುತ್ತಾರೆ: ಲಾಲು ಪ್ರಸಾದ್ ಯಾದವ್

lalu and pm
Published on

ದೆಹಲಿ: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಸೋತ ನಂತರ ಪ್ರಧಾನಿ ನರೇಂದ್ರ ಮೋದಿ ವಿದೇಶದಲ್ಲಿ ಆಶ್ರಯ ಪಡೆಯಲ್ಲಿದ್ದಾರೆ ಎಂದು ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ಲಾಲು ಪ್ರಸಾದ್ ಹೇಳಿದ್ದಾರೆ.

ಇದನ್ನೂ ಓದಿ: ಕಸದ ತೊಟ್ಟಿಯಲ್ಲಿ 2 ಹೆಣ್ಣು ಭ್ರೂಣಗಳು ಪತ್ತೆ: ಶಾಲೆಯ ಬಳಿಯೇ ಬಿಸಾಡಿ ಹೋದ ನಿರ್ದಯಿಗಳು..

ವಿಪಕ್ಷಗಳ ಹೊಸ ಒಕ್ಕೂಟವಾದ I.N.D.I.Aದ ಪಕ್ಷಗಳು ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ತುಷ್ಟೀಕರಣದ ರಾಜಕೀಯ ಮಾಡುತ್ತಿವೆ ಎಂದು ಪ್ರಧಾನಿ ಮೋದಿ ಆರೋಪಿಸಿ, ಕೆಲವು ದಿನಗಳ ಹಿಂದೆ "ಕ್ವಿಟ್ ಇಂಡಿಯಾ" ಹೇಳಿಕೆಯನ್ನು ನೀಡಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಲಾಲು ಪ್ರಸಾದ್​, ಪ್ರಧಾನಿ ಮೋದಿ ದೇಶ ಬಿಡಲು ಯೋಜಿಸುತ್ತಿದ್ದು, ಇದೇ ಕಾರಣಕ್ಕಾಗಿ ಅವರು ಹಲವಾರು ದೇಶಗಳಿಗೆ ಭೇಟಿ ನೀಡುತ್ತಿದ್ದಾರೆ. ವಿದೇಶಗಳಲ್ಲಿ ತಮಗೆ ಇಷ್ಟವಾಗುವ ಪಿಜ್ಜಾ, ಮೊಮೊಸ್ ಮತ್ತಿತರ ಆಹಾರಗಳನ್ನು ಆನಂದದಿಂದ ಸೇವಿಸಲು ತಂಪಾಗಿರುವ ಜಾಗ ಹುಡುಕುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಹಿರಿಯ ಪುತ್ರ ಮತ್ತು ಬಿಹಾರದ ಸಚಿವರಾಗಿರುವ ತೇಜ್ ಪ್ರತಾಪ್ ಯಾದವ್ ಆಯೋಜಿಸಿದ್ದ ಸಮಾರಂಭದಲ್ಲಿ ಭಾಗವಹಿಸಿದ್ದ ಲಾಲು ಪ್ರಸಾದ್​​​, ಮುಂದಿನ ತಿಂಗಳು ಮುಂಬೈನಲ್ಲಿ ನಡೆಯಲಿರುವ I.N.D.I.A ದ ಮುಂದಿನ ಸಭೆಯನ್ನು ತಾನು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ. ಈ ಸಭೆಯಲ್ಲಿ ಅವರು ತಮ್ಮ ಪ್ರತಿಸ್ಪರ್ಧಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಜತೆಗೆ ಪಾಲ್ಗೊಳ್ಳಲಿದ್ದಾರೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net