ಪ್ರಧಾನಿ ಆಗಮನಕ್ಕೆ ಸಕಲ ಸಿದ್ಧತೆ: ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್​ ವೇದಿಕೆ ನಿರ್ಮಾಣ

Modi Visit
Published on

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರು ಪ್ರವಾಸ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಭರದ ಸಿದ್ಧತೆ ಕೈಗೊಳ್ಳಲಾಗಿದೆ. ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗುತ್ತಿದ್ದು, ಸುಮಾರು 1 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ.

ಕೇಂದ್ರ ಪುರಸ್ಕೃತ ಯೋಜನೆಗಳ ಫಲಾನುಭವಿಗಳೊಂದಿಗೂ ಪ್ರಧಾನಿ ಮೋದಿ ಮೋದಿ ಸಂವಾದ ನಡೆಸಲಿದ್ದಾರೆ. 20 ಮಂದಿ ಫಲಾನುಭವಿಗಳು ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ.

ವೇದಿಕೆ ಮುಂಭಾಗ ಬ್ಯಾರಿಕೇಡ್ ವ್ಯವಸ್ಥೆ, ಮಾಡಲಾಗಿದ್ದು, ವಾಟರ್ ಪ್ರೂಫ್ ಶಾಮಿಯಾನ, ಚೇರ್, ಬೃಹತ್ ಎಲ್ಇಡಿ ವ್ಯವಸ್ಥೆ ಮಾಡಲಾಗುತ್ತಿದ್ದು, ಅಂತಿಮ ಹಂತದ ಸಿದ್ಧತೆ ನಡೆಯುತ್ತಿದೆ.

ಸುಮಾರು 1 ಲಕ್ಷ ಜನ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ, ಪ್ರತಿಯೊಬ್ಬರನ್ನೂ ತಪಾಸಣೆ ಮಾಡಿ ಮೈದಾನ ಪ್ರವೇಶಕ್ಕೆ ಅನುಮತಿ ನೀಡಲಾಗುವುದು. ಇಂದು ಬಾಂಬ್ ನಿಷ್ಕ್ರಿಯ ದಳ, ಶ್ವಾನದಳದಿಂದ ಪರಿಶೀಲನೆ ನಡೆಸಲಾಯಿತು. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net