

ನವದೆಹಲಿ: ಪ್ರಸಕ್ತ ಪ್ಯಾರಿಸ್ನಲ್ಲಿ ನಡೆಯುತ್ತಿರುವ ನಾಲ್ಕನೇ ದಿನದ ಒಲಿಂಪಿಕ್ ಗೇಮ್ಸ್ 2024ರಲ್ಲಿ ಮನು-ಸರಬ್ಜೋತ್ ಸಿಂಗ್ ಜೋಡಿ ಮಂಗಳವಾರ(ಜುಲೈ 30) 10 ಮೀಟರ್ ಏರ್ ಪಿಸ್ತೂಲ್ ಡಬಲ್ಸ್ ಶೂಟಿಂಗ್ ಸ್ಪರ್ಧೆಯಲ್ಲಿ ದಕ್ಷಿಣ ಕೊರಿಯಾವನ್ನು ಸೋಲಿಸಿ ಕಂಚಿನ ಪದಕ ಗೆದ್ದಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿರುವ ಮನು-ಸರಬ್ಜೋತ್ ಸಿಂಗ್ಗೆ ಪ್ರಧಾನಿ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಒಲಿಂಪಿಕ್ಸ್‌ನಲ್ಲಿ 10 ಮೀಟರ್ ಏರ್ ಪಿಸ್ತೂಲ್ ಡಬಲ್ಸ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದಕ್ಕಾಗಿ @realmanubhaker ಮತ್ತು ಸರಬ್ಜೋತ್ ಸಿಂಗ್ ಅವರಿಗೆ ಅಭಿನಂದನೆಗಳು. ಇಬ್ಬರೂ ಉತ್ತಮ ಕೌಶಲ ಮತ್ತು ಟೀಮ್ವರ್ಕ್ ತೋರಿದ್ದಾರೆ. ನಮ್ಮ ಶೂಟರ್ಗಳು ಭಾರತವನ್ನು ಹೆಮ್ಮೆಪಡಿಸುತ್ತಲೆ ಇದ್ದಾರೆ ಎಂದು ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಈ ಹಿಂದೆ ನಡೆದ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮನು ಭಾಕರ್ ಕಂಚಿನ ಪದಕ ಗೆದ್ದಿದ್ದರು. ಇದೀಗ ಏರ್ ಪಿಸ್ತೂಲ್ ಡಬಲ್ಸ್ ಶೂಟಿಂಗ್ ಸ್ಪರ್ಧೆಯಲ್ಲಿ ಜಯ ಸಾಧಿಸಿ ಎರಡನೇ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ.( ಏಜೆನ್ಸೀಸ್)