More

    10 ದಿನಗಳು, 12 ರಾಜ್ಯಗಳು, 29 ಕಾರ್ಯಕ್ರಮಗಳು… ಮೋದಿಯವರ ಬಿರುಸಿನ ಪ್ರವಾಸದ ಮೆಗಾ ಪ್ಲಾನ್ ಏನು?

    ನವದೆಹಲಿ: ಪ್ರಧಾನಿ ಮೋದಿ ಅವರು ಇಂದಿನಿಂದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ದೇಶಾದ್ಯಂತ 10 ದಿನಗಳ ಪ್ರವಾಸ ಕೈಗೊಂಡಿದ್ದು, 29 ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಚುನಾವಣೆಯ ಕಾವು ಹೆಚ್ಚಿಸುವ ಉದ್ದೇಶದಿಂದ ಮೋದಿ ಮುಂದಿನ 10 ದಿನಗಳಲ್ಲಿ ತೆಲಂಗಾಣ, ತಮಿಳುನಾಡು, ಒಡಿಶಾ, ಪಶ್ಚಿಮ ಬಂಗಾಳ, ಬಿಹಾರ, ಜಮ್ಮು ಮತ್ತು ಕಾಶ್ಮೀರ, ಅಸ್ಸಾಂ, ಅರುಣಾಚಲ ಪ್ರದೇಶ, ಉತ್ತರ ಪ್ರದೇಶ, ಗುಜರಾತ್, ರಾಜಸ್ಥಾನ ಮತ್ತು ದೆಹಲಿಗೆ ಭೇಟಿ ನೀಡಲಿದ್ದಾರೆ.

    ಮಾರ್ಚ್ 4 ರಂದು, ಪ್ರಧಾನಿ ಮೋದಿ ಅವರು ತೆಲಂಗಾಣಕ್ಕೆ ಭೇಟಿ ನೀಡಲಿದ್ದು, ಹಲವಾರು ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಲಿದ್ದಾರೆ ಮತ್ತು ಅದಿಲಾಬಾದ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದಾದ ನಂತರ ತಮಿಳುನಾಡಿನ ಕಲ್ಪಾಕ್ಕಂಗೆ ಹೋಗುತ್ತಾರೆ. ಅಲ್ಲಿ ಭಾರತೀಯ ನಾಭಿಕಿಯಾ ವಿದ್ಯುತ್ ನಿಗಮ್ ಲಿಮಿಟೆಡ್ (ಭಾವಿನಿ) ಗೆ ಭೇಟಿ ನೀಡುತ್ತಾರೆ ಮತ್ತು ಚೆನ್ನೈನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾರೆ. ಬಳಿಕ ಹೈದರಾಬಾದ್‌ಗೆ ತೆರಳಲಿದ್ದಾರೆ.

    ಮಾರ್ಚ್ 5 ರಂದು ತೆಲಂಗಾಣದ ಸಂಗಾರೆಡ್ಡಿಯಲ್ಲಿ ಹಲವಾರು ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ನಂತರ ಸಾರ್ವಜನಿಕ ಭಾಷಣ ಮಾಡಲಿದ್ದಾರೆ. ಇದಾದ ಬಳಿಕ ಒಡಿಶಾಗೆ ತೆರಳಿ ಅಲ್ಲಿ ಚಂಡಿಖೋಲೆಯಲ್ಲಿ ಸಾರ್ವಜನಿಕ ಭಾಷಣ ಮಾಡಿದ ನಂತರ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ಪಶ್ಚಿಮ ಬಂಗಾಳಕ್ಕೆ ತೆರಳಲಿದ್ದಾರೆ.

    ಮಮತಾ ಬ್ಯಾನರ್ಜಿಯವರ ಭದ್ರಕೋಟೆಯಲ್ಲಿ ಘರ್ಜನೆ 
    ಬುಧವಾರ ಮಾರ್ಚ್ 6 ರಂದು ಮೋದಿ ಅವರು ಮಮತಾ ಬ್ಯಾನರ್ಜಿಯವರ ಭದ್ರಕೋಟೆಯಾದ ಪಶ್ಚಿಮ ಬಂಗಾಳದಲ್ಲಿ ಇರುತ್ತಾರೆ. ಅಲ್ಲಿ ಕೋಲ್ಕತ್ತಾ ಮೆಟ್ರೋದ ಹೌರಾ ಮೈದಾನ-ಎಸ್ಪ್ಲಾನೇಡ್ ಮೆಟ್ರೋ ವಿಭಾಗವನ್ನು ಉದ್ಘಾಟಿಸಿದ ನಂತರ ಬರಾಸತ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಬಿಹಾರಕ್ಕೆ ತೆರಳಲಿದ್ದಾರೆ. ಬಿಹಾರದ ಬೆಟ್ಟಿಯಾದಲ್ಲಿ 12,800 ಕೋಟಿ ರೂ.ಗಳ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.

    ಕಾಶ್ಮೀರ ಕಣಿವೆಗೆ ಮೊದಲ ಭೇಟಿ 
    ಮಾರ್ಚ್ 7 ರಂದು ತಮ್ಮ ಭೇಟಿಯ ನಾಲ್ಕನೇ ದಿನ. ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ, ಅಲ್ಲಿ ಶ್ರೀನಗರದ ಬಕ್ಷಿ ಕ್ರೀಡಾಂಗಣದಲ್ಲಿ ಸಾರ್ವಜನಿಕ ರಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ. ಆಗಸ್ಟ್ 2019 ರಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಕಾಶ್ಮೀರ ಕಣಿವೆಗೆ ಮೋದಿಯವರ ಮೊದಲ ಭೇಟಿ ಇದಾಗಿದೆ. ಆದರೆ, ಕಳೆದ ತಿಂಗಳು ಜಮ್ಮುವಿಗೆ ಭೇಟಿ ನೀಡಿ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ್ದರು.

    ಅಸ್ಸಾಂ ಮತ್ತು ಅರುಣಾಚಲ ಪ್ರದೇಶಕ್ಕೆ ಭೇಟಿ 
    ಮಾರ್ಚ್ 8, 5 ರಂದು ದೆಹಲಿಯಲ್ಲಿ ಮೊದಲ ನ್ಯಾಷನಲ್ ಕ್ರಿಯೇಟರ್ಸ್ ಅವಾರ್ಡ್​​​​ನಲ್ಲಿ ಭಾಗವಹಿಸಲಿದ್ದಾರೆ. ಸಂಜೆ ಅಸ್ಸಾಂಗೆ ತೆರಳಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಮಾರ್ಚ್ 9 ರಂದು ಈಶಾನ್ಯ ರಾಜ್ಯವಾದ ಅರುಣಾಚಲ ಪ್ರದೇಶದಲ್ಲಿ ಪಶ್ಚಿಮ ಕಮೆಂಗ್‌ನಲ್ಲಿ ಸೆಲಾ ಸುರಂಗವನ್ನು ಉದ್ಘಾಟಿಸಲಿದ್ದಾರೆ. ಇದಾದ ಬಳಿಕ ರಾಜಧಾನಿ ಇಟಾನಗರದಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಪಶ್ಚಿಮ ಬಂಗಾಳಕ್ಕೂ ಭೇಟಿ ನೀಡಲಿದ್ದಾರೆ. ಸಿಲಿಗುರಿಯಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ನಂತರ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವ ಕಾರ್ಯಕ್ರಮವೂ ಇದೆ.

    ಮಾರ್ಚ್ 10 ರಂದು ಎಸ್ಪಿಯ ಭದ್ರಕೋಟೆಯಲ್ಲಿ ಘರ್ಜನೆ
    ಮಾರ್ಚ್ 10 ರಂದು ಮೋದಿ ಉತ್ತರ ಪ್ರದೇಶದಲ್ಲಿ ಇರಲಿದ್ದಾರೆ. ಪ್ರಧಾನಮಂತ್ರಿಯವರು ಅಜಂಗಢದಲ್ಲಿ ವಿವಿಧ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಮಾರ್ಚ್ 11 ರಂದು ದೆಹಲಿಯಲ್ಲಿ ನಮೋ ಡ್ರೋನ್ ದೀದಿ ಮತ್ತು ಲಖ್ಪತಿ ದೀದಿ ಕಾರ್ಯಕ್ರಮಗಳಿಗೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದಾದ ನಂತರ ದ್ವಾರಕಾ ಎಕ್ಸ್‌ಪ್ರೆಸ್‌ವೇಯ ಹರಿಯಾಣ ವಿಭಾಗವನ್ನು ಉದ್ಘಾಟಿಸಲಿದ್ದಾರೆ. ಅದೇ ದಿನ ಸಂಜೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 

    ಮಾರ್ಚ್ 12 ರಂದು ಗುಜರಾತ್‌ನ ಸಬರಮತಿಗೆ ಭೇಟಿ ನೀಡಲಿದ್ದಾರೆ. ನಂತರ ರಾಜಸ್ಥಾನಕ್ಕೆ ಹೋಗುತ್ತಾರೆ. ಅಲ್ಲಿ ಜೈಸಲ್ಮೇರ್ ಜಿಲ್ಲೆಯ ಪೋಖ್ರಾನ್‌ಗೆ ಭೇಟಿ ನೀಡಲಿದ್ದಾರೆ. ಮಾರ್ಚ್ 13 ರಂದು ತಮ್ಮ ಭೇಟಿಯ ಕೊನೆಯ ಹಂತದಲ್ಲಿ ಅವರು ಗುಜರಾತ್ ಮತ್ತು ಅಸ್ಸಾಂನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮೂರು ಸೆಮಿಕಂಡಕ್ಟರ್ ಯೋಜನೆಗಳಿಗೆ ಅಡಿಗಲ್ಲು ಹಾಕಲಿದ್ದಾರೆ, ನಂತರ ಸಮಾಜದ ಹಿಂದುಳಿದ ವರ್ಗಗಳೊಂದಿಗೆ ಔಟ್‌ರೀಚ್ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.  

    Vote For Note Case: 1998ರ ತೀರ್ಪನ್ನು ರದ್ದುಪಡಿಸಿದ ಸುಪ್ರೀಂ; ಎಂಪಿ, ಎಂಎಲ್‌ಎಗಳಿಗೆ ವಿನಾಯಿತಿ ಇಲ್ಲ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts