ಅನಂತ್-ರಾಧಿಕಾ ಮದುವೆಯಲ್ಲಿ ಪ್ರಧಾನಿ ಭಾಗಿ; ನವದಂಪತಿಗೆ ಪ್ರಧಾನಿ ಮೋದಿ ಶುಭಾಶೀರ್ವಾದ!

modi
Published on

ಮುಂಬೈ: ಶನಿವಾರ ಸಂಜೆ ಮುಂಬೈನಲ್ಲಿ ಭಾರತ, ಏಷ್ಯಾ ಅಷ್ಟೇ ಅಲ್ಲದೇ ಜಾಗತಿಕ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ಉದ್ಯಮಿ, ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಹಾಗೂ ರಿಲಯನ್ಸ್ ಫೌಂಡೇಷನ್ ಅಧ್ಯಕ್ಷೆ ನೀತಾ ಅಂಬಾನಿ ದಂಪತಿಯ ಕಿರಿಯ ಮಗ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಮಹೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿ ನವವಿವಾಹಿತರಿಗೆ ಆಶೀರ್ವದಿಸಿದ್ದಾರೆ.

ಶುಕ್ರವಾರ​ದಂದು ಸಿರಿವಂತಿಕೆಯ ಸೊಬಗಿನಲ್ಲಿ ಅನಂತ್​ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್​ ಅದ್ಧೂರಿ ಕಲ್ಯಾಣವಾಗಿದೆ. ಮುಂಬೈನ ಜಿಯೋ ವರ್ಲ್ಡ್ ಕನ್ವೆಷನ್‌ ಸೆಂಟರ್‌ ಈ ವರ್ಷದ ಅತಿ ಐಷಾರಾಮಿ ಮದುವೆಗೆ ಸಾಕ್ಷಿಯಾಗಿತ್ತು. ನರೇಂದ್ರ ಮೋದಿ ಅವರು ಜಿಯೋ ವರ್ಲ್ಡ್‌ ಕನ್ವೆನ್ಶನ್‌ ಸೆಂಟರ್‌ಗೆ ಆಗಮಿಸುತ್ತಲೇ ಮುಕೇಶ್‌ ಅಂಬಾನಿ ಅವರು ಸ್ವಾಗತಿಸಿದರು. ಇದಾದ ಬಳಿಕ ಪ್ರಧಾನಿ ಮೋದಿ ಅವರು ನೂತನ ವಧು-ವರರಿಗೆ ಆಶೀರ್ವಾದ ಮಾಡಿದರು.

ಇದಾದ ಬಳಿಕ ಅನಂತ್‌ ಅಂಬಾನಿ ಹಾಗೂ ಆಕಾಶ್‌ ಅಂಬಾನಿ ಅವರು ಮೋದಿ ಅವರ ಕಾಲಿಗೆ ನಮಸ್ಕರಿಸಿದರು. ಸುಮಾರು 29 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ ನೀಡಲು ಮೋದಿ ಅವರು ಶನಿವಾರ ಮುಂಬೈಗೆ ಆಗಮಿಸಿದ್ದಾರೆ. ಕಾರ್ಯಕ್ರಮ ಮುಗಿದ ಬಳಿಕ ಅವರು ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.

ಪ್ರಧಾನಿ ಮೋದಿ ಅವರು ಶನಿವಾರ ಸುಮಾರು 29 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ ನೀಡಲು ಮುಂಬೈಗೆ ತೆರಳಿದ್ದರು. ಈ ವೇಳೆ ಅನಂತ್‌-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವ ಭಾಗವಾಗಿ ನಡೆದ ಶುಭ ಆಶೀರ್ವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ವೇಳೆ ಸಂಭ್ರಮದಲ್ಲಿ ಪಾಲ್ಗೊಂಡಿದ್ದ ಇತರ ಗಣ್ಯರನ್ನೂ ಮೋದಿ ಭೇಟಿಯಾದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net