ಮಿಜೋರಾಂನಲ್ಲಿ ರೈಲ್ವೆ ಮೇಲ್ಸೇತುವೆ ಕುಸಿತ: 17 ಕಾರ್ಮಿಕರು ಸಾವು, 40 ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ, ಪ್ರಧಾನಿ ಸಂತಾಪ

Bridge
Published on

ಮಿಜೋರಾಂ: ಮಿಜೋರಾಂ ರಾಜಧಾನಿ ಐಜ್ವಾಲ್ ಬಳಿ ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಮೇಲ್ಸೇತುವೆ ಕುಸಿದು ಭಾರಿ ಅನಾಹುತ ಸಂಭವಿಸಿದೆ. ಈ ಅಪಘಾತದಲ್ಲಿ 17 ಕಾರ್ಮಿಕರು ಸಾವನ್ನಪ್ಪಿದ್ದಾರೆ. 30 ರಿಂದ 40 ಕಾರ್ಮಿಕರು ಅವಶೇಷಗಳಡಿ ಹೂತು ಹೋಗಿರಬಹುದು ಎಂದು ಹೇಳಲಾಗುತ್ತಿದೆ. ಈ ಕಾರ್ಮಿಕರನ್ನು ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ಸಾವಿನ ಸಂಖ್ಯೆಯೂ ಹೆಚ್ಚಾಗಬಹುದು. ಮಿಜೋರಾಂನ ರೈಲ್ವೆ ಓವರ್ ಬ್ರಿಡ್ಜ್ ಯೋಜನೆಯಡಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ವರದಿಯಾಗಿದೆ.

ಈ ಅಪಘಾತದ ಬಗ್ಗೆ ಮಿಜೋರಾಂ ಮುಖ್ಯಮಂತ್ರಿ ಝೊರಾಮ್ತಂಗ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಅವರು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಈ ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದು, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುವೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ. ಈ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net