BRICS Summit| ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಕೃಷ್ಣ ಭಜನೆ ಮೂಲಕ ಭರ್ಜರಿ ಸ್ವಾಗತ; ಸಭೆಯ ಪ್ರಮುಖ ಅಂಶಗಳು ಹೀಗಿದೆ

PM Modi Russia
Published on

ಕಜಾನ್: ರಷ್ಯಾದ ಕಜಾನ್​ನಲ್ಲಿ ಆಯೋಜನೆಗೊಳ್ಳುತ್ತಿರುವ 16ನೇ ಬ್ರಿಕ್ಸ್​ ಶೃಂಗಸಭೆಯಲ್ಲಿ (BRICS Summit) ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಭಾಗಿಯಾಗುತ್ತಿದ್ದು, ಮೋದಿ ಅವರನ್ನು ರಷ್ಯಾದ ನಾಗರೀಕರು ಕೃಷ್ಣನ ಭಜನೆ ಹಾಡುವ ಮೂಲಕ ಸ್ವಾಗತಿಸಿ ಪ್ರಧಾನಿ ಅವರ ಮೆಚ್ಚುಗೆಗೆ ಪಾತ್ರರಾದರು.

ಪ್ರಧಾನಿ ಮೋದಿ (PM Modi) ಅವರನ್ನು ರಿಪಬ್ಲಿಕ್ ಆಫ್ ಟಾರ್ಟನ್ ಮುಖ್ಯಸ್ಥ ರುಸ್ತುಮ್ ಮನಿಖಾಮ್ ಅವರು ಆತ್ಮಿಯವಾಗಿ ಬರಮಾಡಿಕೊಂಡರು. ಈ ಬಗ್ಗೆ ವಿದೇಶಾಂಗ ಇಲಾಖೆ ತನ್ನ ಸಾಮಾಜಿಕ ಜಾಲತಾಣ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿದೆ.

ಬ್ರಿಕ್ಸ್​ ಶೃಂಗಸಭೆಯಲ್ಲಿ (BRICS Summit) ಪ್ರಧಾನಿ ಪಾಲ್ಗೊಳ್ಳುತ್ತಿದ್ದು, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಮತ್ತು ಇತರ ಬ್ರಿಕ್ಸ್ ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸಬಹುದು. ರಷ್ಯಾ-ಉಕ್ರೇನಿಯನ್ ಯುದ್ಧ ಮತ್ತು ನಡೆಯುತ್ತಿರುವ ಜಾಗತಿಕ ಪ್ರಕ್ಷುಬ್ಧತೆಯಂತಹ ಪ್ರಮುಖ ವಿಷಯಗಳನ್ನು ಒಳಗೊಂಡಿರುವ ಸಾಧ್ಯತೆಯಿದೆ.

ನಾನು ಬ್ರಿಕ್ಸ್ ಶೃಂಗಸಭೆಯಲ್ಲಿ (BRICS Summit) ಭಾಗವಹಿಸಲು ರಷ್ಯಾದ ಕಜಾನಗೆ ಹೊರಟಿದ್ದೇನೆ. ಭಾರತವು ‘ಬ್ರಿಕ್ಸ್‌’ಗೆ ಅಪಾರ ಪ್ರಾಮುಖ್ಯತೆಯನ್ನು ನೀಡುತ್ತದೆ. ನಾನು ಪ್ರಮುಖ ವಿಷಯಗಳ ಕುರಿತು ವ್ಯಾಪಕವಾದ ಚರ್ಚೆಗಳನ್ನು ಎದುರು ನೋಡುತ್ತಿದ್ದೇನೆ. ಜತೆಗೆ, ವಿವಿಧ ದೇಶಗಳ ನಾಯಕರನ್ನು ಭೇಟಿ ಮಾಡಲು ಬಯಸಿದ್ದೇನೆ ಎಂದು ಪ್ರಧಾನಿ ಮೋದಿ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದಾರೆ.

ಪಾಶ್ಚಿಮಾತ್ಯ ರಾಷ್ಟ್ರಗಳ ಒಕ್ಕೂಟಕ್ಕೆ ಪರ್ಯಾಯವಾಗಿ ಈ ಮಿತ್ರಕೂಟ ರಚನೆಯಾಗಿದೆ ಎಂದು ಹೇಳಲಾಗಿದೆ. ಆರಂಭದಲ್ಲಿ ಬ್ರೆಜಿಲ್‌, ರಷ್ಯಾ, ಭಾರತ, ಚೀನಾ ಹಾಗೂ ದಕ್ಷಿಣ ಆಫ್ರಿಕಾ ರಾಷ್ಟ್ರಗಳು ಮಾತ್ರ ಸದಸ್ಯತ್ವ ಹೊಂದಿದ್ದವು. ಈ ವರ್ಷ ಇರಾನ್‌, ಈಜಿಪ್ಟ್‌, ಇಥಿಯೋಪಿಯಾ, ಯುನೈಟೆಡ್‌ ಅರಬ್‌ ಎಮಿರೇಟ್ಸ್‌, ಸೌದಿ ಅರೇಬಿಯಾ ರಾಷ್ಟ್ರಗಳು ಸೇರ್ಪ‍ಡೆಯಾದವು. ಟರ್ಕಿ, ಅಜರ್‌ಬೈಜಾನ್‌, ಮಲೇಷ್ಯಾ ಕೂಡ ಔಪಚಾರಿಕವಾಗಿ ಸೇರ್ಪಡೆಗೆ ಅರ್ಜಿ ಸಲ್ಲಿಸಿದ್ದು, ಇನ್ನಷ್ಟು ರಾಷ್ಟ್ರಗಳು ಸೇರ್ಪಡೆಯಾಗಲು ಒಪ್ಪಿಗೆ ಸೂಚಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net