ಪ್ರಧಾನಿ ಮೋದಿಯನ್ನು ಭೇಟಿಯಾದ ಹೆಚ್​ಡಿ ದೇವೇಗೌಡ, ಕುಮಾರಸ್ವಾಮಿ, ರೇವಣ್ಣ

PM Modi Meeting With JDS
Published on

ಬೆಂಗಳೂರು: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಸೀಟು ಹಂಚಿಕೆ ವಿಚಾರವಾಗಿ ಚರ್ಚಿಸಲು ಹೆಚ್​ಡಿ ದೇವೇಗೌಡರ ನೇತೃತ್ವದ ಜೆಡಿಎಸ್ ನಿಯೋಗವು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದೆ.

ಲೋಕಸಭೆ ಚುನಾವಣೆಗೆ ಬಿಜೆಪಿ  ಜತೆ ಮೈತ್ರಿ ಮಾಡಿಕೊಂಡ ಬಳಿಕ ಮೊದಲ ಬಾರಿಗೆ ದಳಪತಿಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಸೀಟು ಹಂಚಿಕೆ ವಿಚಾರವಾಗಿ ಜೆಡಿಎಸ್ ನಿಯೋಗವು ಪ್ರಧಾನಿ ಮೋದಿಯನ್ನು ಭೇಟಿಯಾಗಿದೆ. ಹೆಚ್​ಡಿ ದೇವೇಗೌಡ, ಎಚ್​ಡಿ ಕುಮಾರಸ್ವಾಮಿ, ಸಂಸದ ಪ್ರಜ್ವಲ್ ರೇವಣ್ಣ ಇದ್ದರು.

ಜೆಡಿಎಸ್ ನಾಯಕರನ್ನು ಭೇಟಿಯಾದ ಬಗ್ಗೆ ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿದ್ದು, ಹೆಚ್​ಡಿ ದೇವೇಗೌಡ ಅವರನ್ನು ಭೇಟಿಯಾಗುವುದು ಯಾವಾಗಲೂ ಸಂತಸದ ವಿಚಾರ ಎಂದು ಹೇಳಿಕೊಂಡಿದ್ದಾರೆ. ಕೆಲವು ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಮಾಜಿಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ಅವರು ಟ್ವೀಟ್​​ ಮಾಡಿ, ನವದೆಹಲಿಯ ಸಂಸತ್ ಭವನದ ಪ್ರಧಾನಮಂತ್ರಿಗಳ ಕಾರ್ಯಾಲಯದಲ್ಲಿ ಪ್ರಧಾನಿ ಮೋದಿ  ಅವರನ್ನು ಭೇಟಿ ಮಾಡಲಾಯಿತು. ಈ ಸಂದರ್ಭದಲ್ಲಿ ಪ್ರಸಕ್ತ ರಾಜಕೀಯ ಪರಿಸ್ಥಿತಿಗಳ ಜತೆಗೆ, ಕರ್ನಾಟಕದ ರೈತಾಪಿ ಜನರ ಸಮಸ್ಯೆಗಳನ್ನು ಮಾನ್ಯ ಪ್ರಧಾನಿಗಳ ಗಮನಕ್ಕೆ ತರಲಾಯಿತು. ಅಲ್ಲದೆ, ಕೊಬರಿ ಖರೀದಿಯ ಬಗ್ಗೆ ಅವರಿಗೆ ಅಹವಾಲು ಸಲ್ಲಿಸಲಾಯಿತು. ನಮ್ಮ ಮನವಿಗೆ ಮಾನ್ಯ ಪ್ರಧಾನಿಗಳು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದರು ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net