More

    VIDEO| ಅಜಾತಶತ್ರು ವಾಜಪೇಯಿ ಪುಣ್ಯಸ್ಮರಣೆ: ಸದೈವ ಅಟಲ್​ ಸ್ಮಾರಕಕ್ಕೆ ಪ್ರಧಾನಿ ಮೋದಿ ಪುಷ್ಪನಮನ

    ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಅಟಲ್​ ಬಿಹಾರ ವಾಜಪೇಯಿ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರಿಂದು “ಸದೈವ ಅಟಲ್​” ಸ್ಮಾರಕಕ್ಕೆ ಭೇಟಿ ನೀಡಿ ಗೌರವ ಸಮರ್ಪಿಸಿದರು.

    ಇದಕ್ಕೂ ಮುನ್ನ ಟ್ವಿಟರ್​ನಲ್ಲಿ ವಾಜಪೇಯಿ ಅವರ ವಿಡಿಯೋವೊಂದನ್ನು ಪೋಸ್ಟ್​ ಮಾಡಿರುವ ಪ್ರಧಾನಿ ಮೋದಿ, ಅಟಲ್​ ಜೀ ಅವರ ಪುಣ್ಯಸ್ಮರಣೆಯಂದು ನನ್ನದೊಂದು ಕಾಣಿಕೆ. ಅವರ ಅತ್ಯುತ್ತಮ ಸೇವೆ ಮತ್ತು ರಾಷ್ಟ್ರದ ಅಭಿವೃದ್ಧಿಯೆಡೆಗಿನ ಅವರ ಶ್ರಮವನ್ನು ಭಾರತ ಎಂದಿಗೂ ಮರೆಯುವುದಿಲ್ಲ ಎಂದು ಸ್ಮರಿಸಿದ್ದಾರೆ

    ಸದೈವ ಅಟಲ್​ನಲ್ಲಿ ವಾಜಪೇಯಿ ಅವರ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಿ ಪ್ರಧಾನಿ ಮೋದಿ ನಮಸ್ಕರಿಸಿದರು. ಈ ವೇಳೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಹಾಗೂ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಸಹ ಉಪಸ್ಥಿತರಿದ್ದರು.

    ದೀರ್ಘಕಾಲಿಕ ಅನಾರೋಗ್ಯದಿಂದ ಬಳಲುತ್ತಿದ್ದ ವಾಜಪೇಯಿ ಅವರು 2018 ಆಗಸ್ಟ್‌ 16ರಂದು ದೆಹಲಿಯ ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸಸ್‌ ಆಸ್ಪತ್ರೆಯಲ್ಲಿ ತಮ್ಮ 93ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದರು.

    1998-2004ರವರೆಗೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್‌ಡಿಎ) ಸರ್ಕಾರವನ್ನು ಮುನ್ನಡೆಸಿದ ವಾಜಪೇಯಿ ಅವರು ಬಿಜೆಪಿಯಿಂದ ದೇಶದ ಪ್ರಧಾನಿಯಾದ ಮೊದಲ ನಾಯಕರಾಗಿದ್ದರು. ಮೂರು ಭಾರಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಅವರು, 1996ರಲ್ಲಿ ಮೊದಲ ಬಾರಿಗೆ ಮತ್ತು 1998 ರಿಂದ 2004 ನಡುವೆ ಎರಡು ಭಾರಿ ಪ್ರಧಾನಿಯಾಗಿದ್ದರು.

    ಡಿಸೆಂಬರ್‌ 25ರ ವಾಜಪೇಯಿ ಅವರ ಜನ್ಮದಿನವನ್ನು ಕೇಂದ್ರ ಸರ್ಕಾರವು ‘ಉತ್ತಮ ಆಡಳಿತ ದಿನ’ವನ್ನಾಗಿ ಆಚರಿಸುತ್ತಿದೆ. 2014ರಲ್ಲಿ ವಾಜಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. (ಏಜೆನ್ಸೀಸ್) (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts