More

    ಮಾಜಿ ಪ್ರಧಾನಿ ವಾಜಪೇಯಿ ಜನ್ಮ ವಾರ್ಷಿಕೋತ್ಸವ: ಸದೈವ್​ ಅಟಲ್​ ಸ್ಮಾರಕಕ್ಕೆ ನಮಸ್ಕರಿಸಿದ ಗಣ್ಯರು

    ನವದೆಹಲಿ: ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಅವರ 96ನೇ ಜನ್ಮ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಸೇರಿದಂತೆ ಪ್ರಮುಖ ಗಣ್ಯರು ವಾಜಪೇಯಿ ಅವರಿಗೆ ಗೌರವ ಸಲ್ಲಿಸಿದರು.

    ದೆಹಲಿಯ ರಾಷ್ಟ್ರೀಯ ಸ್ಮೃತಿ ಸ್ಥಳದ ಬಳಿ ನಿರ್ಮಾಣ ಮಾಡಲಾಗಿರುವ ಸದೈವ್​ ಅಟಲ್​ ಸ್ಮಾರಕಕ್ಕೆ ತೆರಳಿದ ಗಣ್ಯರು ವಾಜಪೇಯಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. ಈ ವೇಳೆ ಗೃಹ ಸಚಿವ ಅಮಿತ್​ ಷಾ, ರಕ್ಷಣಾ ಸಚಿವ ರಾಜನಾಥ್​ ಸಿಂಗ್, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಮತ್ತು ಪಿಯೂಷ್​ ಗೋಯೆಲ್​ ಉಪಸ್ಥಿತರಿದ್ದರು.

    ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಹಿನ್ನೆಲೆಯಲ್ಲಿ ಇಂದು ಬಿಜೆಪಿ ರೈತರ ದಿನಾಚರಣೆಯನ್ನು ಹಮ್ಮಿಕೊಂಡಿದೆ. ಇಂದು ಮಧ್ಯಾಹ್ನ 12ಕ್ಕೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಕರ್ನಾಟಕದ 58 ಲಕ್ಷ ರೈತರು ಸೇರಿದಂತೆ ದೇಶದ 9.50 ಕೋಟಿ ರೈತರ ಬ್ಯಾಂಕ್ ಖಾತೆಗೆ ‘ಕಿಸಾನ್ ಸಮ್ಮಾನ್ ಯೋಜನೆ’ಯಡಿ ತಲಾ 2,000 ರೂ.ಗಳನ್ನು ಆನ್​ಲೈನ್ ಮುಖೇನ ಜಮಾ ಮಾಡಲಿದ್ದಾರೆ.

    ನೂತನ 3 ಕೃಷಿ ಕಾಯ್ದೆಗಳ ಉದ್ದೇಶವನ್ನು ಮನವರಿಕೆ ಮಾಡಿಕೊಟ್ಟು, ಗೊಂದಲ ನಿವಾರಿಸುವುದು ಹಾಗೂ ರೈತರ ಪ್ರತಿಭಟನೆಯ ಕಾವು ತಣಿಸುವುದು ಕಾರ್ಯಕ್ರಮದ ಗುರಿಯಾಗಿದೆ. ಕೇಂದ್ರ ಸರ್ಕಾರ ಮತ್ತು ಬಿಜೆಪಿಗೆ ಇದು ಮಹತ್ವದ ಕಾರ್ಯಕ್ರಮವಾಗಿರುವ ಕಾರಣ ರಾಜ್ಯಾದ್ಯಂತ ಅಚ್ಚುಕಟ್ಟಾಗಿ ನಿರ್ವಹಿಸಲು ಸಿದ್ಧತೆ ಆಗಿದೆ.

    ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವಾಜಪೇಯಿ ಅವರು 2018 ಆಗಸ್ಟ್​ 16ರಂದು ದೆಹಲಿಯಲ್ಲಿ ಕೊನೆಯುಸಿರೆಳೆದರು. ಸಕಲ ಗೌರವಗಳೊಂದಿಗೆ ವಾಜಪೇಯಿ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ಅಲ್ಲದೆ, ದೇಶದ ಪ್ರಮುಖ ನದಿಗಳಲ್ಲಿ ವಾಜಪೇಯಿ ಅವರ ಚಿತಾಭಸ್ಮವನ್ನು ಬಿಡಲಾಯಿತು. (ಏಜೆನ್ಸೀಸ್​)

    ಇಂದು ರೈತೋತ್ಸವ: ಅಟಲ್ ಜನ್ಮದಿನದ ಪ್ರಯುಕ್ತ ಆಚರಣೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts