More

    ಮೂರು ರಾಜ್ಯಗಳಲ್ಲಿ ಬಿಜೆಪಿಗೆ ಭರ್ಜರಿ ಗೆಲುವು​: ವಿಶೇಷ ಸಂದೇಶ ರವಾನಿಸಿದ ಪ್ರಧಾನಿ ಮೋದಿ

    ನವದೆಹಲಿ: ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್​ಗಢ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ನೀಡಿದ ಮತದಾರರಿಗೆ ಪ್ರಧಾನಿ ಮೋದಿ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ.

    ಇಂದು ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢ ಮತ್ತು ತೆಲಂಗಾಣ ವಿಧಾನಸಭಾ ಚುನಾವಣೆಯ ಮತಎಣಿಕೆ ನಡೆಯುತ್ತಿದ್ದು, ನಾಲ್ಕರಲ್ಲಿ ತೆಲಂಗಾಣ ಹೊರತುಪಡಿಸಿ ಉಳಿದ ಮೂರು ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತ ದಾಟಿ ಅಧಿಕಾರ ರಚನೆಯತ್ತ ದಾಪುಗಾಲು ಇಟ್ಟಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ತಮ್ಮ ಎಕ್ಸ್​ (ಈ ಹಿಂದೆ ಟ್ವಿಟರ್​) ಖಾತೆಯಲ್ಲಿ ನಾಲ್ಕು ರಾಜ್ಯದ ವಿಶೇಷ ಸಂದೇಶವನ್ನು ರವಾನಿಸಿದ್ದಾರೆ.

    ಜನತೆಗೆ ನಮನ ಎಂದು ಬರವಣಿಗೆ ಆರಂಭಿಸಿರುವ ಪ್ರಧಾನಿ ಮೋದಿ, ಭಾರತದ ಜನರು ಉತ್ತಮ ಆಡಳಿತ ಮತ್ತು ಅಭಿವೃದ್ಧಿಯ ರಾಜಕೀಯದಲ್ಲಿ ಮಾತ್ರ ನಂಬಿಕೆ ಹೊಂದಿದ್ದಾರೆ ಎಂಬುದನ್ನು ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದ ಚುನಾವಣಾ ಫಲಿತಾಂಶಗಳು ತೋರಿಸುತ್ತಿದೆ. ಈ ಅಂಶಗಳ ಮೇಲೆ ಬಿಜೆಪಿ ನಿಂತಿದೆ.

    ಬಿಜೆಪಿಯ ಮೇಲೆ ತಮ್ಮ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದವನ್ನು ಧಾರೆ ಎರೆದಿದ್ದಕ್ಕಾಗಿ ಈ ಎಲ್ಲ ರಾಜ್ಯಗಳ ಕುಟುಂಬ ಸದಸ್ಯರಿಗೆ, ವಿಶೇಷವಾಗಿ ತಾಯಂದಿರು, ಸಹೋದರಿಯರು, ಹೆಣ್ಣುಮಕ್ಕಳು ಮತ್ತು ನಮ್ಮ ಯುವ ಮತದಾರರಿಗೆ ನಾನು ಹೃತ್ಪೂರ್ವಕವಾಗಿ ಧನ್ಯವಾದ ಹೇಳುತ್ತೇನೆ. ನಿಮ್ಮ ಶ್ರೇಯೋಭಿವೃದ್ಧಿಗಾಗಿ ನಾವು ಅವಿರತವಾಗಿ ಶ್ರಮಿಸುತ್ತೇವೆ ಎಂದು ಭರವಸೆ ನೀಡುತ್ತೇನೆ. ಈ ಸಂದರ್ಭದಲ್ಲಿ ಪಕ್ಷದ ಎಲ್ಲ ಕಾರ್ಯಕರ್ತರಿಗೆ ವಿಶೇಷ ಧನ್ಯವಾದಗಳು! ನೀವೆಲ್ಲರೂ ಅದ್ಭುತ ಉದಾಹರಣೆಯನ್ನು ಸ್ಥಾಪಿಸಿದ್ದೀರಿ. ನೀವು ಬಿಜೆಪಿಯ ಅಭಿವೃದ್ಧಿ ಮತ್ತು ಕಲ್ಯಾಣ ಕಾರ್ಯಕ್ರಮಗಳನ್ನು ಜನರಲ್ಲಿ ಕೊಂಡೊಯ್ದ ರೀತಿಯನ್ನು ಪ್ರಶಂಸಿಸಲು ಪದಗಳು ಸಾಲದು ಎಂದು ಕೊಂಡಾಡಿದ್ದಾರೆ.

    ಅಭಿವೃದ್ಧಿ ಹೊಂದಿದ ಭಾರತದ ಗುರಿಯೊಂದಿಗೆ ನಾವು ಮುನ್ನಡೆಯುತ್ತಿದ್ದೇವೆ. ನಾವಿನ್ನೂ ದಣಿದಿಲ್ಲ, ಭಾರತವನ್ನು ವಿಜಯಶಾಲಿಯನ್ನಾಗಿಬೇಕಿದ್ದು, ಈ ದಿಕ್ಕಿನಲ್ಲಿ ಬಲವಾದ ಹೆಜ್ಜೆ ಇಟ್ಟಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

    ತೆಲಂಗಾಣ ಮತದಾರರಿಗೂ ಸಂದೇಶ
    ಬಿಜೆಪಿಯನ್ನು ಬೆಂಬಲಿಸಿದ್ದಕ್ಕಾಗಿ ತೆಲಂಗಾಣದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಧನ್ಯವಾದಗಳು. ಕಳೆದ ಕೆಲವು ವರ್ಷಗಳಿಂದ ಈ ಅಭೂತಪೂರ್ವ ಬೆಂಬಲ ಹೆಚ್ಚಾಗುತ್ತಲೇ ಇದೆ. ಇದೇ ಟ್ರೆಂಡ್​ ಮುಂದುವರಿಯಲಿದ್ದು, ನಮ್ಮ ಸಮಯ ಬಂದೇ ಬರಲಿದೆ. ತೆಲಂಗಾಣ ಜನತೆಯೊಂದಿಗಿನ ನಮ್ಮ ಬಾಂಧವ್ಯ ಮುರಿಯುವುದಿಲ್ಲ ಮತ್ತು ಜನರ ಶ್ರೇಯೋಭಿವೃದ್ಧಿಗಾಗಿ ನಮ್ಮ ಕೆಲಸವನ್ನು ನಾವು ಮುಂದುವರಿಸುತ್ತೇವೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. (ಏಜೆನ್ಸೀಸ್​)

    ಯಾರಾಗಲಿದ್ದಾರೆ ರಾಜಸ್ಥಾನದ ಮುಂದಿನ ಸಿಎಂ? ಮೌನಕ್ಕೆ ಜಾರಿದ ರಾಜೆ, ಎಲ್ಲರ ಬಾಯಲ್ಲಿ ಒಂದೇ ಉತ್ತರ!

    ‘ಸನಾತನ ಸಂಸ್ಥೆಯ ಮೇಲಿನ ದಾಳಿಯ ಹಣೆಬರಹವಿದು’: ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಹೇಳಿಕೆ ವೈರಲ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts