21.7 C
Bengaluru
Tuesday, January 21, 2020

ಪೇಜಾವರ ಶ್ರೀಗಳಿಗೆ ಮೋದಿ ಗುರುವಂದನೆ

Latest News

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಮುಂಬೈ ಸಿದ್ಧಿವಿನಾಯಕನಿಗೆ 35 ಕಿಲೋ ಚಿನ್ನ | ದೆಹಲಿ ಮೂಲದ ಉದ್ಯಮಿಯ ಕಾಣಿಕೆಯ ಮೌಲ್ಯ 14 ಕೋಟಿ ರೂಪಾಯಿ!

ಮುಂಬೈ: ಕಳೆದ 200ಕ್ಕೂ ಹೆಚ್ಚು ವರ್ಷಗಳ ಅವಧಿಯಲ್ಲಿ ಮುಂಬೈ ಸಿದ್ಧಿವಿನಾಯಕ ದೇವರಿಗೆ ಇದೇ ಮೊದಲ ಬಾರಿಗೆ 35 ಕಿಲೋ ಚಿನ್ನ ಕಾಣಿಕೆ ರೂಪದಲ್ಲಿ...

ಉಡುಪಿ: ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರನ್ನು ಗುರುಸ್ಥಾನದಲ್ಲಿ ಕಾಣುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪಾಲಿಗೆ ಈ ಗುರುಪೂರ್ಣಿಮೆ ಗುರುಗಳ ಆಶೀರ್ವಾದ ಪಡೆಯುವ ಅವಕಾಶವನ್ನು ಒದಗಿಸಿತು.

ಮಂಗಳವಾರ ಸಂಜೆ ದೆಹಲಿಯ ಪ್ರಧಾನಿ ನಿವಾಸದಲ್ಲಿ ಮೋದಿಯವರನ್ನು ಭೇಟಿ ಮಾಡಿದ ಶ್ರೀಗಳು ಆತ್ಮೀಯವಾಗಿ ಮಾತನಾಡಿ ಶುಭ ಹಾರೈಸಿದರು. ಗಾಲಿಕುರ್ಚಿಯಲ್ಲಿ ಆಗಮಿಸಿದ ಶ್ರೀಗಳನ್ನು ಮನೆ ಬಾಗಿಲಿನಿಂದ ತಾವೇ ಕೈಹಿಡಿದು ಕರೆದುಕೊಂಡು ಹೋದ ಮೋದಿ ವಿಶೇಷ ರೀತಿಯಲ್ಲಿ ಗೌರವಿಸಿ, ಗುರುಪೂರ್ಣಿಮೆ ದಿನವನ್ನು ಅರ್ಥಪೂರ್ಣವಾಗಿಸಿದರು.

ಮೋದಿಯವರು ಶಾಲು ಹೊದಿಸಿ ಶ್ರೀಗಳನ್ನು ಗೌರವಿಸಿದರು. ಹಿತ್ತಾಳೆಯ ಅಟ್ಟೆ ಪ್ರಭಾವಳಿ ಸಹಿತ ಕಡೆಗೋಲು ಹಿಡಿದ ಉಡುಪಿ ಶ್ರೀಕೃಷ್ಣನ ವಿಗ್ರಹದ ಸ್ಮರಣಿಕೆ ನೀಡಿ ಶ್ರೀಗಳು ಪ್ರಧಾನಿಯನ್ನು ಆಶೀರ್ವದಿಸಿದರು.

ಈ ಹಿಂದೆ, 2014ರ ಜು.22ರಂದು ಶ್ರೀಗಳು ಪ್ರಧಾನಿ ನಿವಾಸದಲ್ಲಿ ಮೋದಿಯನ್ನು ಭೇಟಿಯಾಗಿದ್ದರು. 2ನೇ ಅವಧಿಯಲ್ಲಿ ಭೇಟಿಯಾಗುತ್ತಿರುವುದು ಇದೇ ಮೊದಲಾಗಿದೆ.

ಕೃಷ್ಣ ಮಠಕ್ಕೆ ಭೇಟಿ ಭರವಸೆ: ಕಾರ್ಯದೊತ್ತಡದಿಂದ ಪಂಚಮ ಪರ್ಯಾಯ ಸಂದರ್ಭದಲ್ಲಿ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಲು ಸಾಧ್ಯವಾಗಲಿಲ್ಲ. ಮುಂದಿನ ದಿನಗಳಲ್ಲಿ ಮಂಗಳೂರು ಅಥವಾ ಉಡುಪಿಗೆ ಬಂದಾಗ ಕೃಷ್ಣ ಮಠಕ್ಕೆ ಭೇಟಿ ನೀಡುವುದಾಗಿ ಪ್ರಧಾನಿ ತಿಳಿಸಿದರು. ಈ ಸಂದರ್ಭ ಪೇಜಾವರ ಶ್ರೀಗಳು ಪ್ರಧಾನಿಯವರ ಜನಹಿತ ಕಾರ್ಯಕ್ರಮಗಳನ್ನು ಪ್ರಶಂಸಿಸಿದರು.

ಏನೇನು ಚರ್ಚೆ?: 15 ನಿಮಿಷಗಳ ಈ ಭೇಟಿಯಲ್ಲಿ ಹಲವು ವಿಚಾರಗಳು ಚರ್ಚೆಗೆ ಬಂದವು. ಗಂಗಾ ನದಿ ಶುದ್ಧೀಕರಣ ಮತ್ತು ರಾಮ ಮಂದಿರ ವಿಷಯವನ್ನು ಶ್ರೀಗಳು ಪ್ರಸ್ತಾಪಿಸಿದರು. ಗಂಗಾ ಶುದ್ಧೀಕರಣದಲ್ಲಿ ಸಾಕಷ್ಟು ಕೆಲಸ ನಡೆದಿದೆ. ಕಾರ್ಖಾನೆಗಳಿಂದ ನದಿಗೆ ಹರಿದು ಬರುವ ತ್ಯಾಜ್ಯ ನೀರನ್ನು ಸಂಪೂರ್ಣ ನಿಲ್ಲಿಸಲಾಗಿದೆ. 5 ವರ್ಷದಲ್ಲಿ ಶುದ್ಧೀಕರಣ ಕಾರ್ಯ ಪೂರ್ಣಗೊಳ್ಳಲಿದೆ. ರಾಮ ಮಂದಿರ ವಿಷಯ ನ್ಯಾಯಾಲಯ ದಲ್ಲಿದೆ. ಮಂದಿರ ನಿರ್ವಣಕ್ಕೆ ರಾಮನೇ ಅನುಗ್ರಹ ಮಾಡಬೇಕು ಎಂದು ಪ್ರಧಾನಿ ಹೇಳಿದರು. ಶ್ರೀಗಳ ರಾಜಕೀಯ ಕಾರ್ಯದರ್ಶಿ ಡಿ.ಪಿ. ಅನಂತ್ ಉಪಸ್ಥಿತರಿದ್ದರು.

ವಿಶೇಷ ದಿನವೊಂದು ಮತ್ತಷ್ಟು ವಿಶೇಷವಾಯಿತು. ಗುರು ಪೂರ್ಣಿಮೆಯಂದು ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಗಳ ಆಶೀರ್ವಾದ ಪಡೆಯುವ ಸೌಭಾಗ್ಯ, ಅವರೊಂದಿಗೆ ಕಾಲ ಕಳೆಯುವ ಗೌರವ ಲಭಿಸಿತು. ಅವರ ಚಿಂತನೆಗಳನ್ನು ಆಲಿಸುವುದು ಮತ್ತು ಅವರಿಂದ ಕಲಿಯುವುದು ವಿಶೇಷ ಅನುಭವ ನೀಡಿದೆ.

| ನರೇಂದ್ರ ಮೋದಿ ಪ್ರಧಾನಿ (ಟ್ವೀಟ್)

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...