More

    ಫ್ರಾನ್ಸ್​ ಪ್ರವಾಸ ಮುಗಿಸಿ ಯುಎಇಗೆ ಆಗಮಿಸಿದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ

    ದುಬೈ: ಎರಡು ದಿನಗಳ ಫ್ರಾನ್ಸ್​ ಭೇಟಿಯ ಯಶಸ್ಸಿನ ಬಳಿಕ ಶನಿವಾರ ಯುನೈಟೆಡ್​ ಅರಬ್​ ಎಮಿರೇಟ್ಸ್​ (ಯುಎಇ)ಗೆ ಆಗಮಿಸಿದ ಪ್ರಧಾನಿ ಮೋದಿ ಅವರಿಗೆ ಭವ್ಯ ಸ್ವಾಗತ ದೊರೆಯಿತು.

    ಅಬುದಾಬಿ ರಾಜ ಮತ್ತು ಯುನೈಟೆಡ್​ ಅರಬ್​ ಎಮಿರೇಟ್ಸ್​ನ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಜತೆ ಪ್ರಧಾನಿ ಮೋದಿ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ರಕ್ಷಣಾ, ಆಹಾರ ಸುರಕ್ಷತೆ ಮತ್ತು ಇಂಧನದಂತಹ ಪ್ರಮುಖ ಕ್ಷೇತ್ರಗಳಲ್ಲಿನ ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧವನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗುವ ಬಗ್ಗೆ ಉಭಯ ನಾಯಕರುಗಳು ಚರ್ಚೆ ಮಾಡಲಿದ್ದಾರೆ.

    ಇದನ್ನೂ ಓದಿ: Chandrayaan-3: ಬಾಹ್ಯಾಕಾಶ ನೌಕೆಯ ಪ್ರಮುಖ ಬಿಡಿಭಾಗಗಳು ತಯಾರಾಗಿದ್ದು ಕುಂದಾನಗರಿ ಬೆಳಗಾವಿಯಲ್ಲಿ

    ಪ್ರಧಾನಿ ಮೋದಿ ಅವರು ಯುಎಇನಲ್ಲಿ ವಿಮಾನದಿಂದ ಇಳಿಯುತ್ತಿದ್ದಂತೆ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ವಿಡಿಯೋವನ್ನು ಸುದ್ದಿ ಸಂಸ್ಥೆ ಜಾಲತಾಣದಲ್ಲಿ ಶೇರ್ ಮಾಡಿದೆ.

    ಪ್ರಧಾನಿ ಮೋದಿಯವರ ಯುಎಇ ಭೇಟಿಯ ಕುರಿತು ಟ್ವೀಟ್​ ಮಾಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಭಾರತ-ಯುಎಇ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯು ಸ್ಥಿರವಾಗಿ ಬಲಗೊಳ್ಳುತ್ತಿದೆ ಮತ್ತು ಪ್ರಧಾನಿಯವರ ಈ ಭೇಟಿಯು ಇಂಧನ, ಶಿಕ್ಷಣ, ಆರೋಗ್ಯ, ಆಹಾರ ಭದ್ರತೆ, ಹಾಗೂ ರಕ್ಷಣೆ ಮತ್ತು ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿನ ದ್ವಿಪಕ್ಷೀಯ ಸಂಬಂಧವನ್ನು ಮುಂದಕ್ಕೆ ಕೊಂಡೊಯ್ಯುವ ಮಾರ್ಗಗಳನ್ನು ಗುರುತಿಸಲು ಒಂದು ಅವಕಾಶವಾಗಿದೆ ಎಂದಿದೆ.

    ಇದನ್ನೂ ಓದಿ: ಇಳಿಮುಖದತ್ತ ಯಮುನಾ ನದಿಯ ನೀರಿನ ಮಟ್ಟ: ಮೆಟ್ರೋ ರೈಲಿನ ವೇಗಕ್ಕೆ ಹೇರಿದ್ದ ನಿರ್ಬಂಧ ತೆರವು

    ಎರಡು ದಿನಗಳ ಫ್ರಾನ್ಸ್​ ಪ್ರವಾಸ ಕೈಗೊಂಡಿದ್ದ ಪ್ರಧಾನಿ ಮೋದಿ, ಅಲ್ಲಿನ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜತೆ ಸುದೀರ್ಘವಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ಮೋದಿ ಅವರಿಗೆ ಫ್ರಾನ್ಸ್​ ದೇಶದ ಅತ್ಯುನ್ನತ ಗೌರವ ಗ್ರ್ಯಾಂಡ್​ ಕ್ರಾಸ್​ ಆಫ್​ ದಿ ಲೀಜನ್ ಆಫ್ ಆನರ್​ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಈ ಪ್ರಶಸ್ತಿ ಪಡೆದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದಾರೆ. (ಏಜೆನ್ಸೀಸ್​)

    ಪ್ರಧಾನಿ ಮೋದಿಗೆ ಫ್ರಾನ್ಸ್​ನ ಅತ್ಯುನ್ನತ ಗೌರವ: ಈ ಪ್ರಶಸ್ತಿ ಪಡೆದ ಪ್ರಥಮ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts