More

    ತಿರುಚಿರಾಪಳ್ಳಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಉದ್ಘಾಟಿಸಲಿರುವ ಮೋದಿ; ಕಟ್ಟಡದ ಕಲಾಕೃತಿಗಳಲ್ಲಿ ದೇಶದ ಪರಂಪರೆ ಗೋಚರ

    ತಮಿಳುನಾಡು: ಪ್ರಧಾನಿ ಮೋದಿ ತಮಿಳುನಾಡಿನ ತಿರುಚಿರಾಪಳ್ಳಿ ತಲುಪಿದ್ದು, ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಅವರನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಇನ್ನೂ ಅನೇಕ ಗಣ್ಯರು ಉಪಸ್ಥಿತರಿದ್ದರು. ತಿರುಚಿರಾಪಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಕಟ್ಟಡವನ್ನು ಇಂದು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. 1100 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿರುವ ಎರಡು ಹಂತದ ಹೊಸ ಅಂತಾರಾಷ್ಟ್ರೀಯ ಟರ್ಮಿನಲ್ ಕಟ್ಟಡವು ವಾರ್ಷಿಕ 44 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರಿಗೆ ಸೇವೆ ಒದಗಿಸುವ ಸಾಮರ್ಥ್ಯವನ್ನು ಹೊಂದಿದೆ.

    ತಿರುಚಿರಾಪಳ್ಳಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಉದ್ಘಾಟಿಸಲಿರುವ ಮೋದಿ; ಕಟ್ಟಡದ ಕಲಾಕೃತಿಗಳಲ್ಲಿ ದೇಶದ ಪರಂಪರೆ ಗೋಚರ

    ತಮಿಳುನಾಡು, ಲಕ್ಷದ್ವೀಪ ಮತ್ತು ಕೇರಳ ಪ್ರವಾಸದಲ್ಲಿರುವ ಪ್ರಧಾನಿ
    ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 2 ರಿಂದ ಎರಡು ದಿನಗಳ ಕಾಲ ತಮಿಳುನಾಡು, ಲಕ್ಷದ್ವೀಪ ಮತ್ತು ಕೇರಳ ಪ್ರವಾಸದಲ್ಲಿದ್ದಾರೆ. ಈ ಅವಧಿಯಲ್ಲಿ ಪ್ರಧಾನಿ ಮೋದಿ ಅವರು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಮತ್ತು ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.

    ಬರೋಬ್ಬರಿ 19 ಸಾವಿರ ಕೋಟಿ ರೂ.
    ಮೊದಲ ದಿನವಾದ ಇಂದು ಪ್ರಧಾನಿ ಮೋದಿ ತಮಿಳುನಾಡಿನ ತಿರುಚಿರಾಪಳ್ಳಿ ತಲುಪಲಿದ್ದಾರೆ. ಅಲ್ಲಿ ಅವರು ಭಾರತಿದಾಸನ್ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಾದ ನಂತರ, ಪ್ರಧಾನಿ ಮೋದಿ ತಿರುಚಿರಾಪಳ್ಳಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಅನ್ನು ಸಹ ಉದ್ಘಾಟಿಸಲಿದ್ದಾರೆ. ಸಿಕ್ಕಿರುವ ಮಾಹಿತಿಯ ಪ್ರಕಾರ, ಪ್ರಧಾನಿ ಮೋದಿ ತಿರುಚಿರಾಪಳ್ಳಿಗೆ ಸುಮಾರು 19 ಸಾವಿರ ಕೋಟಿ ರೂ. ಉಡುಗೊರೆಯಾಗಿ ನೀಡಲಿದ್ದಾರೆ.

    ತ್ರಿಶೂರ್‌ನ ಸಾಂಸ್ಕೃತಿಕ ಪರಂಪರೆ
    ಹೊಸ ಟರ್ಮಿನಲ್‌ನಲ್ಲಿ ತ್ರಿಶೂರ್‌ನ ಸಾಂಸ್ಕೃತಿಕ ಪರಂಪರೆ ಗೋಚರಿಸುತ್ತದೆ. ದೇವಾಲಯದ ವಿನ್ಯಾಸವನ್ನು ತಿರುಚಿರಾಪಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೂ ಮಾಡಲಾಗಿದೆ. ವಿಮಾನ ನಿಲ್ದಾಣದ ಗೋಡೆಗಳ ಮೇಲೂ ಕಲಾಕೃತಿಗಳನ್ನು ಮಾಡಲಾಗಿದೆ. ಈ ಕಲಾಕೃತಿಗಳಲ್ಲಿ ರಾಜ್ಯದ ಪರಂಪರೆ ಕಾಣಿಸುತ್ತದೆ.

    ತಿರುಚಿರಾಪಳ್ಳಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಉದ್ಘಾಟಿಸಲಿರುವ ಮೋದಿ; ಕಟ್ಟಡದ ಕಲಾಕೃತಿಗಳಲ್ಲಿ ದೇಶದ ಪರಂಪರೆ ಗೋಚರ

    ಭೇಟಿಗೂ ಮುನ್ನ ಟ್ವೀಟ್ ಮಾಡಿದ್ದ ಪ್ರಧಾನಿ ಮೋದಿ
    ತಮ್ಮ ಭೇಟಿಗೂ ಮುನ್ನ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಪ್ರಧಾನಿ ಮೋದಿ, ‘ಇನ್ನೆರಡು ದಿನಗಳಲ್ಲಿ ನಾನು ತಮಿಳುನಾಡು, ಲಕ್ಷದ್ವೀಪ ಮತ್ತು ಕೇರಳದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೇನೆ. ಕೋಟ್ಯಂತರ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗಳು ಮತ್ತು 1150 ಕೋಟಿ ರೂಪಾಯಿಗಳ ಯೋಜನೆಗಳ ಉದ್ಘಾಟನೆ ಅಥವಾ ಶಂಕುಸ್ಥಾಪನೆ ನಡೆಯಲಿದೆ. ಈ ಕಾರ್ಯಗಳು ಉತ್ತಮ ಇಂಟರ್ನೆಟ್ ಸಂಪರ್ಕ, ಶುದ್ಧ ಕುಡಿಯುವ ನೀರು ಪೂರೈಕೆ, ಸೌರ ಶಕ್ತಿ, ಆರೋಗ್ಯಕ್ಕೆ ಸಂಬಂಧಿಸಿದ ಯೋಜನೆಗಳನ್ನು ಒಳಗೊಂಡಿವೆ” ಎಂದು ಹೇಳಿದರು. ಲಕ್ಷದ್ವೀಪಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು 1,150 ಕೋಟಿ ರೂ.ಗಿಂತ ಹೆಚ್ಚಿನ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.

    10 ವರ್ಷ ಜೈಲು, ₹ 7 ಲಕ್ಷ ದಂಡ….ಹೊಸ ಹಿಟ್ ಆಂಡ್ ರನ್‌ ಕಾನೂನು ವಿರುದ್ಧ ಬೀದಿಗಿಳಿದ ಬಸ್-ಟ್ರಕ್ ಚಾಲಕರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts