17 C
Bangalore
Friday, December 13, 2019

ಪಿಎನ್​ಬಿ ಹಗರಣ: ಹಾಂಗ್​ಕಾಂಗ್​ನಲ್ಲಿನ ನೀರವ್​ ಮೋದಿಯ 255 ಕೋಟಿ ರೂ. ಆಸ್ತಿ ವಶಕ್ಕೆ ಪಡೆದ ಇ.ಡಿ.

Latest News

ಸಂಭ್ರಮದ ಅಮೃತೇಶ್ವರ ರಥೋತ್ಸವ

ಅಣ್ಣಿಗೇರಿ: ಪಟ್ಟಣದ ಆರಾಧ್ಯದೈವ ಶ್ರೀ ಅಮೃತೇಶ್ವರ ಮಹಾರಥೋತ್ಸವ ಗುರುವಾರ ಸಂಜೆ ಸಹಸ್ರಾರು ಭಕ್ತರ ಜಯಘೊಷಗಳ ಮಧ್ಯ ಸಡಗರ, ಸಂಭ್ರಮದಿಂದ ಜರುಗಿತು.

ಗಣರಾಜ್ಯೋತ್ಸವಕ್ಕೆ ಬ್ರೆಜಿಲ್ ಪ್ರಧಾನಿ ಬೇಡ

ವಿಜಯವಾಣಿ ಸುದ್ದಿಜಾಲ ಧಾರವಾಡ 2020ರ ಜ. 26ರ ಗಣರಾಜ್ಯೋತ್ಸವದ ಅತಿಥಿಯಾಗಿ ಬ್ರೆಜಿಲ್ ಪ್ರಧಾನಿ ಬೊಲ್ಸೇನಾರೋ ಬರುತ್ತಿರುವುದನ್ನು ರೈತ ಸಂಘ...

ಡಿಸಿಪಿಯಾಗಿ ಬಿ.ಎಸ್. ನೇಮಗೌಡ ಅಧಿಕಾರ ಸ್ವೀಕಾರ

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್​ನ ಅಪರಾಧ ಮತ್ತು ಸಂಚಾರ ವಿಭಾಗಕ್ಕೆ ವರ್ಗವಾಗಿ ಬಂದಿರುವ ಉಪ ಪೊಲೀಸ್ ಆಯುಕ್ತ(ಡಿಸಿಪಿ) ಬಿ.ಎಸ್. ನೇಮಗೌಡ ಗುರುವಾರ...

ಸೇವೆ ಸ್ಥಗಿತಗೊಳಿಸಿ ಧರಣಿ

ವಿಜಯವಾಣಿ ಸುದ್ದಿಜಾಲ ಕುಂದಗೋಳ ಬಾಕಿ ವೇತನ ಪಾವತಿಗೆ ಆಗ್ರಹಿಸಿ ತಾಲೂಕಾಸ್ಪತ್ರೆ ಡಿ ದರ್ಜೆ ಗುತ್ತಿಗೆ ನೌಕರರು ಗುರುವಾರ ಸೇವೆ...

ಜ್ಞಾನ ಸಂಸತ್ ಅಧಿವೇಶನ ನಾಳೆ

ವಿಜಯವಾಣಿ ಸುದ್ದಿಜಾಲ ಧಾರವಾಡ ಹುಬ್ಬಳ್ಳಿಯ ವರದಶ್ರೀ ಫೌಂಡೇಷನ್​ನಿಂದ ನಗರದ ಕರ್ನಾಟಕ ಕಾಲೇಜು ಮೈದಾನದಲ್ಲಿ ಡಿ. 14ರಂದು ಸಂಜೆ 4ಕ್ಕೆ...

ನವದೆಹಲಿ: ಪಂಜಾಬ್​ ನ್ಯಾಷನಲ್​ ಬ್ಯಾಂಕ್​ನಲ್ಲಿ ಸಾವಿರಾರು ಕೋಟಿ ರೂ. ಸಾಲ ಮಾಡಿ ಹಿಂದಿರುಗಿಸದೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಂಚಕ ನೀರವ್​ ಮೋದಿ ಅವರಿಗೆ ಸಂಬಂಧಿಸಿದ ಹಾಂಗ್​ಕಾಂಗ್​ ಮೂಲದ ಅಂದಾಜು 255 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ(Enforcement Directorate) ಗುರುವಾರ ಮುಟ್ಟುಗೋಲು ಹಾಕಿಕೊಂಡಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ ಅಡಿ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ. ಪಿಎನ್​ಬಿ ಹಗರಣ ದಿನದಿಂದ ಇಲ್ಲಿಯವರೆಗೂ ನೀರವ್​ ಮೋದಿಗೆ ಸಂಬಂಧಿಸಿದ ಅಂದಾಜು 4,744 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಇ.ಡಿ. ಮುಟ್ಟುಗೋಲು ಹಾಕಿಕೊಂಡಿದೆ.

ಈ ವರ್ಷದ ಆರಂಭದಲ್ಲಿ ಬೆಳಕಿಗೆ ಬಂದ ಬಹುದೊಡ್ಡ ಪಿಎನ್​ಬಿ ಹಗರಣದಲ್ಲಿ ನೀರವ್​ ಮೋದಿ ಹೆಸರು ಕೇಳಿ ಬರುತ್ತಿದ್ದಂತೆಯೇ ನೀರವ್​, ವಿದೇಶಕ್ಕೆ ಹಾರಿ ತಲೆಮರೆಸಿಕೊಂಡಿದ್ದಾನೆ. ಈತನ ವಿರುದ್ಧ ಇಂಟರ್ಪೋಲ್ ಅಧಿಕಾರಿಗಳು ಬಂಧನದ ವಾರಂಟ್​ ಕೂಡ ಜಾರಿಗೊಳಿಸಿದೆ. ಇದೇ ತಿಂಗಳ ಆರಂಭದಲ್ಲಿ ಭಾರತ ಸೇರಿ 5 ದೇಶಗಳಲ್ಲಿ ನೀರವ್​ ಸಂಬಂಧಿಸಿದ ಅಂದಾಜು 637 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿತ್ತು.

6,400 ಕೋಟಿ ರೂ. ಬ್ಯಾಂಕ್​ ನಿಧಿಯನ್ನು ತನ್ನ ಮತ್ತು ಕುಟುಂಬದ ಅಧೀನದಲ್ಲಿರುವ ನಕಲಿ ಕಂಪನಿಗಳಿಗೆ ಮನಿ ಲಾಂಡರಿಂಗ್ ಮತ್ತು ಡೈವರ್ಟ್​ ಮಾಡಿದ ಆರೋಪದಡಿಯಲ್ಲಿ ನೀರವ್​ ವಿರುದ್ಧ ಇ.ಡಿ. ಚಾರ್ಜ್​ಶೀಟ್​ ಕೂಡ ದಾಖಲಿಸಿದೆ.

ಪ್ರಕರಣದಡಿಯಲ್ಲಿ ನೀರವ್​ ಮೋದಿ ಹಾಗೂ ಆತನ ಅಂಕಲ್​ ಮೆಹುಲ್​ ಛೋಕ್ಸಿ ಸೇರಿದಂತೆ ಇನ್ನಿತರರ ವಿರುದ್ಧ ವಿವಿಧ ವಿವಿಧ ಅಪರಾಧ ಕಾನೂನುಗಳ ಅಡಿಯಲ್ಲಿ ಹಾಗೂ ಪಂಜಾಬ್​ ನ್ಯಾಷನಲ್​ ಬ್ಯಾಂಕ್​ ದೂರಿನ ಅನ್ವಯ ತನಿಖೆ ನಡೆಯುತ್ತಿದೆ.

ಪಂಜಾಬ್​ ನ್ಯಾಷನಲ್​ ಬ್ಯಾಂಕ್​ ಹಗರಣ ಈ ವರ್ಷದ ಬಹುದೊಡ್ಡ ಹಗರಣ ಎಂಬ ಕುಖ್ಯಾತಿಗೆ ಒಳಗಾಗಿದ್ದು, ಪ್ರಕರಣದ ರೂವಾರಿ ನೀರವ್​ ಮೋದಿ ಹಾಗೂ ಅವರ ಅಂಕಲ್​ ಛೋಕ್ಸಿ 13,400 ಕೋಟಿ ರೂ. ಸಾಲ ಪಡೆದು ಹಿಂದಿರುಗಿಸಿಲ್ಲ. (ಏಜೆನ್ಸೀಸ್​)

Stay connected

278,749FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...