More

    ನಾದಿನಿ ಅತ್ಯಾಚಾರಗೈದವನಿಗೆ 10 ವರ್ಷ ಜೈಲು

    ಉಡುಪಿ: ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2018ರಲ್ಲಿ 17 ವರ್ಷದ ನಾದಿನಿ ಮೇಲೆ ಅತ್ಯಾಚಾರಗೈದ ಅಪರಾಧಿಗೆ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ, 20 ಸಾವಿರ ರೂ. ದಂಡ ಹಾಗೂ ದಂಡ ಪಾವತಿಗೆ ವಿಫಲವಾದರೆ 1 ವರ್ಷ ಸಾದಾ ಸಜೆ ವಿಧಿಸಿ ಆದೇಶ ನೀಡಿದೆ.
    ಸುರೇಶ್ ಮರಾಠಿ (29) ಶಿಕ್ಷೆಗೊಳಗಾದ ಅಪರಾಧಿ. ಈತ ತನ್ನ ಹೆಂಡತಿಯ ತಂಗಿಯನ್ನು ಕಾಡಿಗೆ ಕರೆದೊಯ್ದು ಗುಡಿಸಲು ಸಿದ್ಧಪಡಿಸಿ ನಿರಂತರವಾಗಿ ಮೂರು ಅತ್ಯಾಚಾರ ನಡೆಸಿದ್ದ. ಸಂತ್ರಸ್ತ ಯುವತಿ ಈ ಬಗ್ಗೆ ಬೈಂದೂರು ಠಾಣೆಗೆ ದೂರು ನೀಡಿದ್ದು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿತ್ತು. ಆರೋಪಗಳು ರುಜುವಾತು ಆದುದರಿಂದ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಧೀಶೆ ಕಲ್ಪನಾ ಎರ್ಮಾಳ್ ಅವರು ಗುರುವಾರ ಶಿಕ್ಷೆ ಪ್ರಮಾಣ ಪ್ರಕಟಿಸಿದ್ದಾರೆ.

    ಉಲ್ಟಾ ಹೊಡೆದಿದ್ದ ಯುವತಿ: ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಂದೂರಿನ ಅಂದಿನ ಸಿಪಿಐ ಪರಮೇಶ್ವರ ಗುನಗ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಒಟ್ಟು 25 ಸಾಕ್ಷಿಗಳ ಪೈಕಿ ನ್ಯಾಯಾಲಯದಲ್ಲಿ 15 ಮಂದಿ ವಿಚಾರಣೆ ನಡೆದಿತ್ತು. 2018ರ ಅಕ್ಟೋಬರ್ ತಿಂಗಳಲ್ಲಿ ಸುರೇಶ್ ಮರಾಠಿಯನ್ನು ಉಡುಪಿ ಫೋಕ್ಸೋ ನ್ಯಾಯಾಲಯಕ್ಕೆ ಕರೆತಂದು ರೈಲಿನಲ್ಲಿ ಮರಳಿ ಕಾರಾವಾರ ಜೈಲಿಗೆ ಕರೆದೊಯ್ಯುತ್ತಿರುವಾಗ ಬೈಂದೂರು ರೈಲು ನಿಲ್ದಾಣದ ಬಳಿ ವಾಂತಿ ಬರುತ್ತಿದೆ ಎಂಬ ನಾಟಕವಾಡಿ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ. ಎರಡು ವರ್ಷ ತಲೆಮರೆಸಿಕೊಂಡಿದ್ದ ಆತ 6 ತಿಂಗಳ ಹಿಂದೆ ನ್ಯಾಯಾಲಯಕ್ಕೆ ಶರಣಾಗತನಾಗಿದ್ದ. ಆರೋಪಿ ಪರಾರಿಯಾದ ವೇಳೆ ಪ್ರಮುಖ ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ್ದರಿಂದ ಸಂತ್ರಸ್ತ ಯುವತಿ ಸಹಿತ ಪ್ರಮುಖ ಸಾಕ್ಷಿಗಳು ಅಭಿಯೋಜನೆಗೆ ವಿರುದ್ಧವಾಗಿ ಸಾಕ್ಷ್ಯ ನುಡಿದಿದ್ದರು. ಆದರೆ ವೈದ್ಯಕೀಯ ಸಾಕ್ಷ್ಯ, ತನಿಖಾಧಿಕಾರಿ ನ್ಯಾಯಾಲಯದಲ್ಲಿ ಹೇಳಿದ ಸಾಕ್ಷ್ಯ ಹಾಗೂ ಸಾಂದರ್ಭಿಕ ಸಾಕ್ಷ್ಯ ಆಧಾರದಲ್ಲಿ ಸುರೇಶ್ ಅಪರಾಧಿ ಎಂದು ತೀರ್ಪು ನೀಡಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts