ಪೋಕ್ಸೋ ಕೇಸು ಸುಳ್ಳು ನ್ಯಾಯಾಲಯದಲ್ಲಿ ಸಾಬೀತು – ಪರಿಹಾರದ ಹಣ ಹಿಂಪಡೆಯಲು ಜಿಲ್ಲಾಧಿಕಾರಿಗೆ ನಿರ್ದೇಶನ

blank

 

ಮಂಗಳೂರು: ಜಾತಿನಿಂದನೆ ಹಾಗೂ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಯುವಕನೊಬ್ಬನ ಮೇಲೆ ಸುಳ್ಳು ಕೇಸು ದಾಖಲಿಸಿದ್ದಲ್ಲದೆ, ಇದನ್ನೇ ನೆಪವಾಗಿಟ್ಟು ಸಮಾಜ ಕಲ್ಯಾಣ ಇಲಾಖೆಯಿಂದ 2.50ಲಕ್ಷ ರೂ. ಪರಿಹಾರ ಪಡೆದ ಸಂತ್ರಸ್ತೆ ಮತ್ತು ಆಕೆಯ ಕುಟುಂಬದಿಂದ ಪರಿಹಾರ ಹಣ ವಾಪಾಸ್ ಪಡೆದುಕೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಹೆಚ್ಚವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರ್ದೇಶನ ನೀಡಿದೆ.

ಪ್ರಕರಣ ವಿವರ: ಸಂತ್ರಸ್ತ ಅಪ್ರಾಪ್ತ ಬಾಲಕಿಯ ಮನೆಗೆ 2024ರ ಮಾ.21ರಂದು ಸಂಜೆ 6.45ರ ವೇಳೆಗೆ ಬಂಟ್ವಾಳ ತಾಲೂಕಿನ ತೇಜಸ್ (26) ಎಂಬಾತ ಅಕ್ರಮ ಪ್ರವೇಶ ಮಾಡಿ ವಾಗ್ವಾದ ನಡೆಸಿದ್ದ. ಇದಾದ ಬಳಿಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಈ ವೇಳೆ ಬಾಲಕಿ ಬೊಬ್ಬೆ ಹಾಕಿ ಆಕೆಯ ಮಾವನನ್ನು ಕರೆದಿದ್ದಳು. ಈ ವೇಳೆ ರಕ್ಷಣೆಗೆ ಬಂದ ಮಾವನಿಗೂ ಯುವಕ ತೇಜಸ್ ಹಲ್ಲೆ ನಡೆಸಿದ್ದ. ಇದಾದ ಬಳಿಕ ಜಾತಿ ನಿಂದನೆ ಮಾಡಿ, ಮನೆಯಲ್ಲಿದ್ದವರಿಗೆ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಹೆಚ್ಚವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶರಾದ ವಿನಯ ದೇವರಾಜ್ ಅವರು ಸಮಗ್ರ ವಿಚಾರಣೆ ನಡೆಸಿದ್ದರು. ಈ ವೇಳೆ ಸಂತ್ರಸ್ತ ಯುವತಿ, ಆಕೆಯ ಮಾವ, ಮನೆಯವರು, ಸಾಕ್ಷಿದಾರರನ್ನು ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿದ್ದರು.

* ಸುಳ್ಳು ಕೇಸು ಯಾಕಾಗಿ?: ಸಂತ್ರಸ್ತ ಅಪ್ರಾಪ್ತ ಬಾಲಕಿಯ ತಾಯಿ ಯುವಕನಿಂದ ಸಾಲ ಮತ್ತು ಚಿನ್ನಾಭರಣ ಸೇರಿದಂತೆ 5.50ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಪಡೆದುಕೊಂಡಿದ್ದರು. ಇದನ್ನು ಯುವಕ ಮರಳಿ ಕೇಳುತ್ತಿದ್ದು, ಇದೇ ವಿಚಾರದಲ್ಲಿ ಯುವಕ ಹಾಗೂ ಅಪ್ರಾಪ್ತೆಯ ಕುಟುಂಬದ ಮಧ್ಯೆ ವಾಗ್ವಾದ ಆಗುತ್ತಿತ್ತು. ಇದನ್ನೇ ಬಂಡವಾಳವಾಗಿಸಿಕೊಂಡ ಅಪ್ರಾಪ್ತ ಬಾಲಕಿಯ ತಾಯಿ ಯುವಕನ ಮೇಲೆ ಲೈಂಗಿಕ ಕಿರುಕುಳ, ಜಾತಿ ನಿಂದನೆ, ಹಲ್ಲೆ ದೂರು ನೀಡಿದ್ದರು. ಪ್ರಕರಣ ದಾಖಲಾದ ಬಳಿಕ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಹಾರವನ್ನು ಪಡೆದುಕೊಂಡಿದ್ದರು.

ಈ ಪ್ರಕರಣದ ಬಗ್ಗೆ ಕೋರ್ಟ್‌ನಲ್ಲಿ ವಿಚಾರಣೆ ನಡೆಸುವಾಗ ಬಾಲಕಿಯ ತಾಯಿ ಯುವಕನಿಂದ ಸಾಲ, ಚಿನ್ನಾಭರಣ ತೆಗೆದುಕೊಂಡ ಬಗ್ಗೆ ಒಪ್ಪಿಕೊಂಡಿದ್ದರು. ನ್ಯಾಯಾಲಯದಲ್ಲಿ ಮತ್ತಷ್ಟು ವಿಚಾರಣೆ ನಡೆಸಿದಾಗ ಯುವಕನ ಮೇಲೆ ಸುಳ್ಳು ಕೇಸು ದಾಖಲಿಸಿದ ಬಗ್ಗೆ, ಸಮಾಜ ಕಲ್ಯಾಣ ಇಲಾಖೆಯಿಂದ 2.50ಲಕ್ಷ ರೂ. ಪರಿಹಾರ ಪಡೆದುಕೊಂಡ ಸತ್ಯಾಂಶ ಬಹಿರಂಗವಾಗಿತ್ತು.
* ನ್ಯಾಯಾಧೀಶರ ನಿರ್ದೇಶನ: ಜಾತಿ ನಿಂದನೆ, ಪೋಕ್ಸೋ ಸುಳ್ಳು ಪ್ರಕರಣ ದಾಖಲಿಸಿ ಸರ್ಕಾರದಿಂದ ಪರಿಹಾರ ಪಡೆದುಕೊಂಡದ್ದನ್ನು ನ್ಯಾಯಾಧೀಶರು ಗಂಭೀರವಾಗಿ ಪರಿಗಣಿಸಿ ಸಂತ್ರಸ್ತ ಯುವತಿ ಹಾಗೂ ಆಕೆಯ ಕುಟುಂಬಕ್ಕೆ ನೀಡಿದ್ದ 2.50 ಲಕ್ಷ ರೂ. ಪರಿಹಾರ ಮರಳಿ ಪಡೆಯುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದಾರೆ.

Share This Article

ಕಲ್ಲಂಗಡಿ ಹಣ್ಣು ತಿಂದು ಸಿಪ್ಪೆ ಬಿಸಾಡ್ತೀರಾ? ಹಣ್ಣಿನ ಸಿಪ್ಪೆ ತಿಂದ್ರೆ ಪುರುಷರಿಗೆ ಆ ಸಾಮರ್ಥ್ಯ ಹೆಚ್ಚಾಗುವುದು! watermelon

watermelon: ಬೇಸಿಗೆ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು  ಕಲ್ಲಂಗಡಿ ಹಣ್ಣು. ನಾವು ಕಲ್ಲಂಗಡಿ ಹಣ್ಣುಗಳನ್ನು…

ಕುತ್ತಿಗೆ-ತಲೆ ನೋವನ್ನು ನಿರ್ಲಕ್ಷಿಸುತ್ತಿದ್ದೀರಾ?; ಎಚ್ಚರದಿಂದಿರಿ.. ಇದು ಅಪಾಯದ ಮುನ್ಸೂಚನೆ | Health Tips

ಕುತ್ತಿಗೆ ಮತ್ತು ಭುಜದ ಸುತ್ತಲಿನ ಪ್ರದೇಶದಲ್ಲಿನ ನೋವನ್ನು ನಿರ್ಲಕ್ಷಿಸುವ ತಪ್ಪನ್ನು ಮಾಡಬೇಡಿ. ಏಕೆಂದರೆ ಇದು ಸರ್ವಿಕಲ್…

ಅಳದಿದ್ದರು ಕಣ್ಣೀರು ಬರುತ್ತಿದೆಯೇ; ತಜ್ಞರು ಸೂಚಿಸಿರುವ ಸಿಂಪಲ್ ಪರಿಹಾರ ಹೀಗಿದೆ.. Health Tips

ಸೌಂದರ್ಯವನ್ನು ಅಳೆಯಲು ಕಣ್ಣುಗಳು ಒಂದು ಪ್ರಮುಖ ಮಾನದಂಡವಾಗಿದೆ. ಇದು ಪ್ರಮುಖ ಇಂದ್ರಿಯಗಳಲ್ಲಿ ಒಂದಾಗಿದೆ. ಅದಿಲ್ಲದೆ ಜೀವನವನ್ನು…