More

    ಪೋಕ್ಸೋ ಪ್ರಕರಣ: ಮುರುಘಾಶ್ರೀ ಬಂಧನಕ್ಕೆ ಹೈಕೋರ್ಟ್ ತಡೆ; ಕಾರಣ ಏನು?

    ಬೆಂಗಳೂರು: ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಎರಡನೇ ಪ್ರಕರಣದಲ್ಲಿ ಪೊಲೀಸರು ಮುರುಘಾ ಮಠದ ಶ್ರೀ ಶಿವಮೂರ್ತಿ ಶರಣರನ್ನು ಬಂಧಿಸಿದ್ದಕ್ಕೆ ಹೈಕೋರ್ಟ್ ತಡೆ ನೀಡಿದ್ದು, ಇದೀಗ ಮುರುಘಾಶ್ರೀ ಈ ಪ್ರಕರಣದಿಂದ ಸ್ವಲ್ಪ ನಿರಾಳಗೊಂಡಂತಾಗಿದೆ.

    ಎರಡನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ನ್ಯಾಯಾಲಯದ ಅರೆಸ್ಟ್ ವಾರೆಂಟ್ ಜಾರಿ ಮೇರೆಗೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಮುರುಘಾಶ್ರಿಯನ್ನು ದಾವಣಗೆರೆಯಲ್ಲಿ ಬಂಧಿಸಿದ ಬೆನ್ನಿಗೇ ಈ ಮಹತ್ವದ ಬೆಳವಣಿಗೆ ನಡೆದಿದೆ. ಹೀಗಾಗಿ ಎರಡನೇ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮುರುಘಾಶ್ರೀ ಬಂಧಮುಕ್ತರಾಗಲಿದ್ದಾರೆ.

    ಪೋಕ್ಸೋ ಪ್ರಕರಣದ ಮೊದಲನೇ ಕೇಸಿಗೆ ಸಂಬಂಧಿಸಿದಂತೆ ಮುರುಘಾಶ್ರೀಗೆ ಚಿತ್ರದುರ್ಗ ಪ್ರವೇಶ ಮಾಡದಂತೆ ನಿರ್ಬಂಧ ವಿಧಿಸಲಾಗಿದೆ. ಆದರೆ ಪೋಕ್ಸೋ ಪ್ರಕರಣದ ಎರಡನೇ ಕೇಸಿಗೆ ಸಂಬಂಧಿಸಿದಂತೆ ಕೋರ್ಟ್​​ಗೆ ಹಾಜರಾಗಬೇಕು ಎಂದು ಜಿಲ್ಲಾ ನ್ಯಾಯಾಲಯದ ಆದೇಶದ ಮೇರೆಗೆ ಈ ಬಂಧನವಾಗಿತ್ತು.

    ಇದನ್ನೂ ಓದಿ: ಪೋಕ್ಸೋ ಪ್ರಕರಣ; ಮೊನ್ನೇ ಅಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಮುರುಘಾಶ್ರೀ ದಾವಣಗೆರೆಯಲ್ಲಿ ಅರೆಸ್ಟ್​

    ಇದನ್ನು ಪ್ರಶ್ನಿಸಿ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ಒಂದು ಕೇಸಲ್ಲಿ ಷರತ್ತು ಇರುವಾಗ ಅಂಥದ್ದೇ ಇನ್ನೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಖುದ್ದಾಗಿ ಹಾಜರಾಗಲು ಸೂಚಿಸಿರುವುದು ಸರಿಯಲ್ಲ ಎಂಬುದನ್ನು ಉಲ್ಲೇಖಿಸಿ ಹೈಕೋರ್ಟ್ ಈ ಬಂಧನಕ್ಕೆ ತಡೆಯೊಡ್ಡಿ ಆದೇಶ ಹೊರಡಿಸಿದೆ ಎಂಬುದಾಗಿ ಮುರುಘಾಶ್ರೀ ವಕೀಲರು ಮಾಹಿತಿ ನೀಡಿದ್ದಾರೆ.

    ಇದನ್ನೂ ಓದಿ: ಪ್ರೀತಿ ಇದ್ದರೂ ಪತ್ನಿ ಯಾಕೆ ಪತಿಯಿಂದ ವಿಮುಖಳಾಗುತ್ತಾಳೆ?; ಇದು ವಿವಾಹಿತರಿಗೊಂದು ಕಿವಿಮಾತು, ಎಚ್ಚರಿಕೆ ಕೂಡ!

    ಪ್ರಕರಣವೇನು?: ಚಿತ್ರದುರ್ಗ ಮಠದ ವಸತಿ ಶಾಲೆಯ ಬಾಲಕಿಯರಿಬ್ಬರು ಆಗಸ್ಟ್ 26ರಂದು ಮೈಸೂರಿನ ಒಡನಾಡಿ ಸಂಸ್ಥೆಯ ಮೂಲಕ ಮೈಸೂರಿನ ನಜರಬಾದ್ ಪೊಲೀಸ್ ಠಾಣೆಗೆ ತೆರಳಿ ಶರಣರ ವಿರುದ್ಧ ದೂರು ನೀಡಿದ್ದರು. ಮಕ್ಕಳ ಕಲ್ಯಾಣ ಸಮಿತಿ ಎದುರು ಸಂತ್ರಸ್ತ ಬಾಲಕಿಯರನ್ನು ಹಾಜರುಪಡಿಸಿ ಹೇಳಿಕೆ ಪಡೆದ ಬಳಿಕ ಶರಣರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

    ಆ ನಂತರದ ಬೆಳವಣಿಗೆಯಲ್ಲಿ ಪ್ರಕರಣವನ್ನು ಮೈಸೂರಿನಿಂದ ಚಿತ್ರದುರ್ಗದ ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿತ್ತು. ಪ್ರಕರಣದಲ್ಲಿ ಸ್ವಾಮೀಜಿ, ವಾರ್ಡನ್, ಕಾರ್ಯದರ್ಶಿ, ವಕೀಲ, ಮಠದ ಉತ್ತರಾಧಿಕಾರಿ ಸೇರಿ ಐವರ ವಿರುದ್ಧ ಆರೋಪ ಮಾಡಲಾಗಿತ್ತು. ಬಳಿಕ ಪೋಕ್ಸೋ ಪ್ರಕರಣದ ಅಡಿಯಲ್ಲಿ ಮುರುಘಾ ಶರಣರನ್ನು 2022ರ ಸೆಪ್ಟೆಂಬರ್ 1ರಂದು ಚಿತ್ರದುರ್ಗ ಪೊಲೀಸರು ಬಂಧಿಸಿದ್ದರು.

    ಖ್ಯಾತ ಬೌಲರ್​ಗೆ ಮೋದಿಯ ಸಾಂತ್ವನದ ಅಪ್ಪುಗೆ: ನಾವು ಮತ್ತೆ ಪುಟಿದೇಳುತ್ತೇವೆ ಎಂದ ಶಮಿ; ವೈರಲ್ ಆಗುತ್ತಿದೆ ಫೋಟೋ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts