ಹಿರಿಯ ಸಾಹಿತಿ .ಹಂ.ಪಾ ನಾಗರಾಜಯ್ಯರಿಂದ ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

Dasara 2024
Published on

ಮೈಸೂರು: ಹೆಸರಾಂತ ಹಿರಿಯ ಸಾಹಿತಿ ಹಂ.ಪಾ.ನಾಗರಾಜಯ್ಯ ಅವರನ್ನು ಈ ಬಾರಿಯ ದಸರಾ ಉದ್ಘಾಟನೆಗೆ ಆಹ್ವಾನಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಈ ಬಾರಿ ನಾಡಹಬ್ಬ ದಸರಾವನ್ನು ಹಿರಿಯ ಸಾಹಿತಿ ಹಂ.ಪಾ.ನಾಗರಾಜಯ್ಯ ಅವರಿಂದ ಉದ್ಘಾಟಿಸಲು ಸರ್ಕಾರ ತೀರ್ಮಾನಿಸಿದೆ. ಶೀಘ್ರದಲ್ಲೇ ಅವರನ್ನು ಆಹ್ವಾನಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಶಾಸಕ ಮುನಿರತ್ನ ಅವರ ಮೇಲೆ ಮೇಲಿನ ಮೂರು ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಎಸ್.ಐ ಟಿಗೆ ವಹಿಸಬೇಕೆಂದು ಕಾಂಗ್ರೆಸ್​ ಸರ್ಕಾರದ ಒಕ್ಕಲಿಗ ಸಚಿವರು ಹಾಗೂ ಶಾಸಕರ ನಿಯೋಗವು ಮನವಿ ಮಾಡಿದೆ. ಈ ಬಗ್ಗೆ ಗೃಹಸಚಿವ ಪರಮೇಶ್ವರ್​ ಅವರೊಂದಿಗೆ ಮಾತನಾಡಿದ ನಂತರ ತೀರ್ಮಾನಿಸಲಾಗುವುದು.

CM Siddaramaiah

ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರು ಪರೀಕ್ಷೆಯನ್ನು ಆದಷ್ಟೂ ಶೀಘ್ರದಲ್ಲಿಯೇ ಏರ್ಪಡಿಸುವಂತೆ ಕೆ.ಪಿ.ಎಸ್.ಸಿ ಗೆ ಸೂಚಿಸಲಾಗಿದೆ ಎಂದರು. ಕಾನ್ ಸ್ಟಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆ ಬಗ್ಗೆ ಮಾತನಾಡಿ ಈ ಕುರಿತು ಒಂದು ಬಾರಿಯ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವರಿಗೆ ತಿಳಿಸಿದ್ದೇನೆ.

ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಕಲ್ಲು ತೂರಾಟ ಬಗ್ಗೆ ಮಾತನಾಡಿ, ಈ ಬಾರಿ ಅರವತ್ತು ಸಾವಿರ ಗಣೇಶಗಳ ಪ್ರತಿಷ್ಠಾಪನೆಯಾಗಿತ್ತು. ದಾವಣಗೆರೆಯಲ್ಲಿ ಕಲ್ಲು ತೂರಾಟ ನಡೆದಿದ್ದು, ನಾಗಮಂಗಲದಲ್ಲಿ ಗಲಭೆ ನಡೆದಿದೆ. ಇಲ್ಲಿ ಪೊಲೀಸರ ಕರ್ತವ್ಯ ನಿರ್ಲಕ್ಷ್ಯ ಕಂಡುಬಂದಿದ್ದು, ಡಿ.ವೈ.ಎಸ್.ಪಿ ಅವರನ್ನು ಅಮಾನತು ಮಾಡಲಾಗಿದೆ. ಕೋಮು ಗಲಭೆಗಳಿಗೆ ಬಿಜೆಪಿ ಪ್ರಚೋದನೆ ನೀಡುತ್ತಿದೆ. ಇದಕ್ಕೆ ಬಿಜೆಪಿ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net