More

    ಪೊಗರು ಸಿನಿಮಾ ವಿವಾದ ಸುಖಾಂತ್ಯದ ಬಳಿಕ ಲಿಖಿತ ರೂಪದಲ್ಲಿ ಕ್ಷಮೆ ಕೇಳಿದ ಧ್ರುವ ಸರ್ಜಾ

    ಬೆಂಗಳೂರು: ‘ಪೊಗರು’ ಸಿನಿಮಾ ವಿವಾದ ಸುಖಾಂತ್ಯದ ಬಳಿಕ ನಟ ಧ್ರುವ ಸರ್ಜಾ, ಲಿಖಿತ ರೂಪದಲ್ಲಿ ಬ್ರಾಹ್ಮಣ ಸಮುದಾಯದ ಬಳಿ ಕ್ಷಮೆ ಕೇಳಿದ್ದಾರೆ.

    ‘ನಮ್ಮ ಇಡೀ ಕುಟುಂಬ ಹನುಮ ಭಕ್ತರು. ಆಂಜನೇಯನ ಆಶೀರ್ವಾದವೇ ನಮಗೆ ಶ್ರೀರಕ್ಷೆ. ನಮ್ಮ ಇಡೀ ವಂಶವೇ ಹಿಂದುತ್ವದ ಪದ್ಧತಿಯನ್ನು ಆಚರಿಸುತ್ತಾ ಗೌರವಿಸುತ್ತಾ ಬದುಕುತ್ತಿದ್ದೇವೆ. ತಾತನವರ ಕಾಲದಿಂದಲೂ ಹಿಂದುತ್ವದ ಪ್ರತಿಪಾದಕರಾಗಿಯೇ ಬದುಕಿದ್ದೇವೆ. ಕಲೆಯೇ ಧರ್ಮ. ನಾವು ಎಲ್ಲ ಧರ್ಮಗಳನ್ನು ಗೌರವಿಸಿದ್ದೇವೆ. ಚಿತ್ರದ ಕಥೆ, ಪಾತ್ರಪೋಷಣೆಯಲ್ಲಿ ಯಾವುದೇ ಸಮುದಾಯಕ್ಕೆ ಎನ್ನುವಂತಹ ಮಾತು ನಿಜಕ್ಕೂ ನಮ್ಮ ತಂಡಕ್ಕೆ ಬೇಸರ ತಂದಿದೆ. ಈ ಕಾರಣಕ್ಕಾಗಿಯೇ ಬೇಷರತ್ ಕ್ಷಮೆ ಕೇಳುತ್ತೇನೆ’ ಎಂದು ಧ್ರುವ ಟ್ವೀಟ್​ ಮಾಡಿದ್ದಾರೆ. ಇದನ್ನೂ ಓದಿರಿ ಅಂದು ಪೊಲೀಸರು ಅವನನ್ನ ಚಪ್ಪಲಿ ಇಲ್ಲದೆ ನಿಲ್ಲಿಸಿದ್ರು, ಆಗ ಸಹಾಯಕ್ಕೆ ನಾನೇ ಬಂದೆ… ಇದನ್ನ ದರ್ಶನ್​ ನೆನೆಯಲಿ

    ‘ನಿಮಗೆ ಬೇಸರವಾಗಿರೋ ದೃಶ್ಯಗಳನ್ನು ಕತ್ತರಿಸಿದ್ದೇವೆ. ಮತ್ತೆ ಸೆನ್ಸಾರ್ ಆದಮೇಲೆ ನಿಮ್ಮೆದುರು ಮಾತಾಡೋಣ ಎಂದು ನಾನೇ ನಿರ್ಧರಿಸಿದ್ದೆ. ಈಗ ಅದನ್ನು ಸರಿಪಡಿಸಲು ತಂತ್ರಜ್ಞರ ತಂಡ ಸಿದ್ಧವಾಗಿದೆ. ನನ್ನ ಮನವಿಯನ್ನ ಪುರಸ್ಕರಿಸಿ ಎಂದಿನಂತೆ ನಿಮ್ಮ ಆಶೀರ್ವಾದವಿರಲಿ’ ಎಂದು ಆ್ಯಕ್ಷನ್​ ಪ್ರಿನ್ಸ್​ ಧ್ರುವ ಸರ್ಜಾ ಕೋರಿದ್ದಾರೆ.

    ಇದಕ್ಕೂ ಮುನ್ನಾ ಅಂದರೆ ಇಂದು ಬೆಳಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿಗೆ ಏಕಾಏಕಿ ಮುತ್ತಿಗೆ ಹಾಕಿದ್ದ ಧ್ರುವ ಸರ್ಜಾ ಅಭಿಮಾನಿಗಳು ಬ್ರಾಹ್ಮಣ ಸಮುದಾಯದ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಧ್ರುವ ಸರ್ಜಾ ಅಭಿಮಾನಿಗಳಿಗೆ ಅಂಬೇಡ್ಕರ್​ ಸೇನೆ ಸಾಥ್ ನೀಡಿತ್ತು. ಅಂಬೇಡ್ಕರ್ ಸೇನೆ ಅಧ್ಯಕ್ಷ ಮೂರ್ತಿ ಮಾತನಾಡಿ, ಸಿನಿಮಾ ಅಂದರೆ ಕೇವಲ ಕಾಲ್ಪನಿಕ. ಕೆಲವೊಮ್ಮೆ ಇಂತಹ ದೃಶ್ಯಗಳನ್ನು ಮಾಡಬೇಕಾಗುತ್ತದೆ. ಈಗಾಗಲೇ ಚಿತ್ರದ ನಿರ್ದೇಶಕರು ಮತ್ತು ನಿರ್ಮಾಪಕರು ಕ್ಷಮೆ ಕೇಳಿದ್ದಾರೆ. ಪೊಗರು ಸಿನಿಮಾ‌ ಉತ್ತಮ‌ ಪ್ರದರ್ಶನ ಕಾಣುತ್ತಿದೆ. ಇಂತ ದೃಶ್ಯಗಳನ್ನು ಕೆಲವರು ಬಳಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಸಿನಿಮಾ ಬಗ್ಗೆ ಕೆಟ್ಟದಾಗಿ ಪ್ರಚಾರ ಮಾಡುವುದು ಸರಿಯಲ್ಲ ಎಂದಿದ್ದರು.

    ಒಟ್ಟಿನಲ್ಲಿ ಒಂದು ವಾರದಿಂದ ಸ್ಯಾಂಡಲ್​ವುಡ್​ಗೆ ಅಂಟಿದ್ದ ಜಗ್ಗೇಶ್​-ಡಿ ಬಾಸ್​ ಅಭಿಮಾನಿಗಳ ವಿವಾದ, ಪೊಗರು ಸಿನಿಮಾ ವಿವಾದ ಎರಡೂ ತಣ್ಣಗಾದಂತಾಗಿದೆ.

    ಅಂದು ಪೊಲೀಸರು ಅವನನ್ನ ಚಪ್ಪಲಿ ಇಲ್ಲದೆ ನಿಲ್ಲಿಸಿದ್ರು, ಆಗ ಸಹಾಯಕ್ಕೆ ನಾನೇ ಬಂದೆ… ಇದನ್ನ ದರ್ಶನ್​ ನೆನೆಯಲಿ

    ರಾಜ್ಯದಲ್ಲಿ ಈ ಭಾರಿ 110 ಜಿಲ್ಲಾ ಪಂಚಾಯಿತಿ ಕ್ಷೇತ್ರ ಹೆಚ್ಚಳ, 600 ತಾಪಂ ಕ್ಷೇತ್ರಗಳು ರದ್ದು!

    ನಾಟಕ ಪ್ರದರ್ಶನದಲ್ಲಿ ಮೈಮೇಲೆ ಬಂದ ಚಾಮುಂಡಿ ದೇವಿ! ವಿಡಿಯೋ ವೈರಲ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts