More

    ವಿವಾದದಲ್ಲಿ ನಟ ಧೃವ ಸರ್ಜಾ ಅಭಿನಯದ ಪೊಗರು ಸಿನಿಮಾ: ನಿರ್ದೇಶಕ-ನಿರ್ಮಾಪಕರಿಂದ ಕ್ಷಮೆಯಾಚನೆ

    ಬೆಂಗಳೂರು: ಇತ್ತೀಚೆಗಷ್ಟೇ ತೆರೆಕಂಡು ಯಶಸ್ವಿ ಪ್ರದರ್ಶನ ಕಾಣುತ್ತಿರುವ ನಟ ಧೃವ ಸರ್ಜಾ ಅಭಿನಯದ ‘ಪೊಗರು’ ಸಿನಿಮಾಗೆ ವಿವಾದದ ಕಿಡಿ ಹೊತ್ತಿದ್ದು, ಅದನ್ನು ಆರಿಸಲು ಬ್ರಾಹ್ಮಣ ಸಮುದಾಯದ ಬಳಿ ಚಿತ್ರ ನಿರ್ದೇಶಕ ನಂದ ಕಿಶೋರ್ ಕ್ಷಮೆಯಾಚಿಸಿದ್ದಾರೆ. ಅಲ್ಲದೆ, ವಿವಾದಿತ ದೃಶ್ಯಗಳನ್ನು ಕತ್ತರಿಸಲು ಪೊಗರು ಟೀಂ ನಿರ್ಧರಿಸಿದೆ.

    ಪೊಗರು ಚಿತ್ರದಲ್ಲಿ ಚಪ್ಪಲಿ ಕಾಲಿನಿಂದ ಜನಿವಾರ ಹಾಕಿರುವ ಬ್ರಾಹ್ಮಣನನ್ನ ಕಾಲಿನಿಂದ ಒದೆಯುವ ದೃಶ್ಯವಿದೆ. ಇಂತಹ ಸೀನ್​ಗಳು ಬ್ರಾಹ್ಮಣರ ಭಾವನೆಗೆ ಧಕ್ಕೆ ತಂದಿದ್ದು, ನೋವುಂಟು ಮಾಡಿದೆ ಎಂದು ಚಿತ್ರತಂಡದ ವಿರುದ್ಧ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಮಂಗಳವಾರ ಬ್ರಾಹ್ಮಣ ಸಮುದಾಯ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದೆ. ಅಲ್ಲದೆ ಎರಡ್ಮೂರು ದಿನದಿಂದ ಸಾಮಾಜಿಕ ಜಾಲತಾಣದಲ್ಲೂ ಈ ಬಗ್ಗೆ ಆಕ್ರೋಶ ಭುಗಿಲೆದ್ದಿತ್ತು. ಇದನ್ನೂ ಓದಿರಿ ಒಂದೂವರೆ ವರ್ಷದ ಮಗು ಕೊಂದಿದ್ದ ಪಾಪಿ ತಂದೆಗೆ ಗಲ್ಲುಶಿಕ್ಷೆ!

    ಬ್ರಾಹ್ಮಣ ಸಮುದಾಯದವರ ಪ್ರತಿಭಟನೆ ಹಿನ್ನೆಲೆಯಲ್ಲಿ ಫಿಲ್ಮ್ ಚೇಂಬರ್​ನಲ್ಲಿ ಪೊಗರು ಚಿತ್ರದ ನಿರ್ದೇಶಕ ನಂದಕಿಶೋರ್ ಹಾಗೂ ನಿರ್ಮಾಪಕ ಬಿ.ಕೆ.ಗಂಗಾಧರ್ ಸುದ್ದಿಗೋಷ್ಠಿ ನಡೆಸಿದರು. ಬ್ರಾಹ್ಮಣ ಸಮುದಾಯದವರ ಪ್ರತಿಭಟನೆ ಹಿನ್ನೆಲೆಯಲ್ಲಿ ಫಿಲ್ಮ್ ಚೇಂಬರ್ ನಲ್ಲಿ ಸಿನಿಮಾ ತಂಡ ಸುದ್ದಿಗೋಷ್ಠಿ ನಡೆಸಿದ ಪೊಗರು ಚಿತ್ರದ ನಿರ್ದೇಶಕ ನಂದಕಿಶೋರ್ ಹಾಗೂ ನಿರ್ಮಾಪಕ ಬಿ.ಕೆ.ಗಂಗಾಧರ್, ವಿರೋಧ ವ್ಯಕ್ತವಾಗಿರುವ ದೃಶ್ಯ ತೆಗೆಯುವುದಾಗಿ ಹೇಳಿದರು.

    ವಿವಾದದಲ್ಲಿ ನಟ ಧೃವ ಸರ್ಜಾ ಅಭಿನಯದ ಪೊಗರು ಸಿನಿಮಾ: ನಿರ್ದೇಶಕ-ನಿರ್ಮಾಪಕರಿಂದ ಕ್ಷಮೆಯಾಚನೆಬ್ರಾಹ್ಮಣ ಸಮುದಾಯದ ಬಳಿ ಕ್ಷಮೆ ಕೇಳಿದ ನಂದ ಕಿಶೋರ್, ಆ ದೃಶ್ಯವನ್ನ ಕಟ್ ಮಾಡಿಸುತ್ತೇನೆ. ತಿಳಿದೋ ತಿಳಿಯದೇ ಆ ತಪ್ಪಾಗಿದೆ. ದಯವಿಟ್ಟು ಕ್ಷಮೆ ಇರಲಿ. 13-14 ಸೀನ್​ಗಳಿವೆ. ಅವೆಲ್ಲವನ್ನೂ ಈಗ ಕಟ್‌ ಮಾಡಿಸಬೇಕು. ಟೆಕ್ನಿಕಲಿ ಎಷ್ಟು ಬೇಗ ಆಗುತ್ತೋ ಅಷ್ಟು ಬೇಗ ಮಾಡಿಸ್ತೀವಿ. ಚಪ್ಪಲಿ ಕಾಲಿನಿಂದ ಜನಿವಾರ ಹಾಕಿರುವ ಬ್ರಾಹ್ಮಣನನ್ನು ಕಾಲಿನಿಂದ ಒದೆಯುವ ದೃಶ್ಯಗಳಿವೆ. ಅದನ್ನು ತೆಗೆದು ಹಾಕ್ಬೇಕು ಅಂತ ಹೇಳಲಾಗಿದೆ. ಆ ದೃಶ್ಯಗಳಿಗೆ ಕತ್ತರಿ ಹಾಕಲಾಗುವುದು ಎಂದರು. ನಿರ್ಮಾಪಕ ಬಿ.ಎನ್.ಗಂಗಾಧರ್ ಕೂಡ ಬ್ರಾಹ್ಮಣ ಸಮುದಾಯಕ್ಕೆ ಬಹಿರಂಗವಾಗಿ ಕ್ಷಮೆ ಕೇಳಿದ್ದು, ನಾಳೆಯಿಂದ‌ ಸಿನಿಮಾದಲ್ಲಿ ಆ ದೃಶ್ಯ ಇರುವುದಿಲ್ಲ ಅಂತಾ ನಿರ್ಮಾಪಕ ಸೂರಪ್ಪ ಬಾಬು ಭರವಸೆ ನೀಡಿದ್ದಾರೆ. ಇದನ್ನೂ ಓದಿರಿ ಹತ್ತು ಆನೆ ಬೇಕಾದ್ರು ಸಾಕ್ತೀನಿ.. ನಮ್ಮಪ್ಪ ಮದ್ವೆ ಆಗು ಅಂತಿದ್ದಾರೆ.. ಏನು ಮಾಡಲಿ?: ಪ್ರಜ್ವಲ್​ ರೇವಣ್ಣ

    ಪೊಗರು ಸಿನಿಮಾ ವಿರುದ್ಧ ಬ್ರಾಹ್ಮಣ ಮಹಾಸಭಾ ಮಂಡಳಿ ವತಿಯಿಂದ ಫಿಲಂ ಚೇಂಬರ್​ಗೆ ದೂರು ನೀಡಲಾಗಿತ್ತು. ಈ ಕುರಿತು ಬ್ರಾಹ್ಮಣ ಮಹಾಸಭಾ ಮಂಡಳಿಯ ಸದಸ್ಯರೊಂದಿಗೆ ಫಿಲ್ಮ್ ಚೇಂಬರ್​ನಲ್ಲಿ ಅಧ್ಯಕ್ಷ ಜಯರಾಜ್, ಉಪಾಧ್ಯಕ್ಷ ಉಮೇಶ್ ಬಣಕಾರ್, ಗೌರವ ಕಾರ್ಯದರ್ಶಿ ಎನ್.ಎಂ.ಸುರೇಶ್, ನಿರ್ಮಾಪಕ ಸೂರಪ್ಪ ಬಾಬು ಹಾಗೂ ಪೊಗರು ಸಿನಿಮಾದ ನಿರ್ಮಾಪಕ ಬಿ.ಎನ್.ಗಂಗಾಧರ್ ಸಮ್ಮುಖದಲ್ಲಿ ಸಮಸ್ಯೆ ಬಗೆಹರಿಸಿದ್ದಾರೆ.

    ವಿವಾಹಿತೆ ಜತೆ ಯುವಕನ ಸಲ್ಲಾಪ, ತಡರಾತ್ರಿ ಸಿಕ್ಕಿಬಿದ್ದ ಜೋಡಿಯನ್ನ ಟ್ರ್ಯಾಕ್ಟರ್​ಗೆ ಕಟ್ಟಿಹಾಕಿದ ಗ್ರಾಮಸ್ಥರು!

    ಕೋಟಿ ಮೌಲ್ಯದ ಜಮೀನು ದಾನ ಕೊಡ್ತೀನಿ, ತಾಕತ್​ ಇದ್ರೆ ರಾಮಮಂದಿರ ಕಟ್ಟಿಸಿ: ಸಿದ್ದುಗೆ ರೈತನ ಸವಾಲು

    ವಿವಾಹಿತೆ ಜತೆ ಯುವಕನ ಸಲ್ಲಾಪ, ತಡರಾತ್ರಿ ಸಿಕ್ಕಿಬಿದ್ದ ಜೋಡಿಯನ್ನ ಟ್ರ್ಯಾಕ್ಟರ್​ಗೆ ಕಟ್ಟಿಹಾಕಿದ ಗ್ರಾಮಸ್ಥರು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts