ವಿವಾದದಲ್ಲಿ ನಟ ಧೃವ ಸರ್ಜಾ ಅಭಿನಯದ ಪೊಗರು ಸಿನಿಮಾ: ನಿರ್ದೇಶಕ-ನಿರ್ಮಾಪಕರಿಂದ ಕ್ಷಮೆಯಾಚನೆ

ಬೆಂಗಳೂರು: ಇತ್ತೀಚೆಗಷ್ಟೇ ತೆರೆಕಂಡು ಯಶಸ್ವಿ ಪ್ರದರ್ಶನ ಕಾಣುತ್ತಿರುವ ನಟ ಧೃವ ಸರ್ಜಾ ಅಭಿನಯದ ‘ಪೊಗರು’ ಸಿನಿಮಾಗೆ ವಿವಾದದ ಕಿಡಿ ಹೊತ್ತಿದ್ದು, ಅದನ್ನು ಆರಿಸಲು ಬ್ರಾಹ್ಮಣ ಸಮುದಾಯದ ಬಳಿ ಚಿತ್ರ ನಿರ್ದೇಶಕ ನಂದ ಕಿಶೋರ್ ಕ್ಷಮೆಯಾಚಿಸಿದ್ದಾರೆ. ಅಲ್ಲದೆ, ವಿವಾದಿತ ದೃಶ್ಯಗಳನ್ನು ಕತ್ತರಿಸಲು ಪೊಗರು ಟೀಂ ನಿರ್ಧರಿಸಿದೆ. ಪೊಗರು ಚಿತ್ರದಲ್ಲಿ ಚಪ್ಪಲಿ ಕಾಲಿನಿಂದ ಜನಿವಾರ ಹಾಕಿರುವ ಬ್ರಾಹ್ಮಣನನ್ನ ಕಾಲಿನಿಂದ ಒದೆಯುವ ದೃಶ್ಯವಿದೆ. ಇಂತಹ ಸೀನ್​ಗಳು ಬ್ರಾಹ್ಮಣರ ಭಾವನೆಗೆ ಧಕ್ಕೆ ತಂದಿದ್ದು, ನೋವುಂಟು ಮಾಡಿದೆ ಎಂದು ಚಿತ್ರತಂಡದ ವಿರುದ್ಧ ಕನ್ನಡ ಚಲನಚಿತ್ರ … Continue reading ವಿವಾದದಲ್ಲಿ ನಟ ಧೃವ ಸರ್ಜಾ ಅಭಿನಯದ ಪೊಗರು ಸಿನಿಮಾ: ನಿರ್ದೇಶಕ-ನಿರ್ಮಾಪಕರಿಂದ ಕ್ಷಮೆಯಾಚನೆ